ಗ್ರಾಮಗಳ ಅಭಿವೃದ್ಧಿಯಿಂದ ದೇಶದ ಪ್ರಗತಿ: ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್
ದಾವಣಗೆರೆ: ‘ಗ್ರಾಮಗಳು ಆರ್ಥಿಕವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಾಗೂ ಸಾಂಸ್ಕೃತಿಕವಾಗಿ ಸಬಲಗೊಂಡಾಗ ಮಾತ್ರ ದೇಶದ ಸಮಗ್ರ ಅಭಿವೃದ್ಧಿ ಸಾಧ್ಯ. ಮಹಾತ್ಮ ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಕಳೆದ ನಾಲ್ಕು ದಶಕಗಳಿಂದ ನಿರಂತರವಾಗಿ ಶ್ರಮಿಸುತ್ತಿರುವುದು ಶ್ಲಾಘನೀಯ’ ಎಂದು ಸಂಸದೆ ಡಾ. ಪ್ರಭ

ದಾವಣಗೆರೆ: ‘ಗ್ರಾಮಗಳು ಆರ್ಥಿಕವಾಗಿ, ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಾಗೂ ಸಾಂಸ್ಕೃತಿಕವಾಗಿ ಸಬಲಗೊಂಡಾಗ ಮಾತ್ರ ದೇಶದ ಸಮಗ್ರ ಅಭಿವೃದ್ಧಿ ಸಾಧ್ಯ. ಮಹಾತ್ಮ ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಕಳೆದ ನಾಲ್ಕು ದಶಕಗಳಿಂದ ನಿರಂತರವಾಗಿ ಶ್ರಮಿಸುತ್ತಿರುವುದು ಶ್ಲಾಘನೀಯ’ ಎಂದು ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.ನಗರದ ಬೇತೂರು ರಸ್ತೆಯ ವೆಂಕಟೇಶ್ವರ ಸಮುದಾಯ ಭವನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿ ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.‘ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ವೀರೇಂದ್ರ ಹೆಗ್ಗಡೆ ಅವರ ದೂರದೃಷ್ಟಿ ಮತ್ತು ಸೇವಾ ಮನೋಭಾವದಿಂದ ಗ್ರಾಮೀಣಾಭಿವೃದ್ಧಿ ಯೋಜನೆಗಳು ಲಕ್ಷಾಂತರ ಕುಟುಂಬಗಳ ಬದುಕಿನಲ್ಲಿ ಸಕಾರಾತ್ಮಕ ಬದಲಾವಣೆ ತಂದಿವೆ. 40 ವರ್ಷಗಳಿಂದ ನಿರಂತರವಾಗಿ ನಡೆಯುತ್ತಿರುವ ಈ ಸೇವಾ ಕಾರ್ಯಗಳ ಹಿಂದಿರುವ ಉತ್ಸಾಹ ಇಂದಿಗೂ ಕಡಿಮೆಯಾಗದಿರುವುದಕ್ಕೆ ಸಂಸ್ಥೆಯ ಕಾರ್ಯಕರ್ತರು, ಪದಾಧಿಕಾರಿಗಳು ಹಾಗೂ ಫಲಾನುಭವಿಗಳೇ ಪ್ರಮುಖ ಕಾರಣ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ಟ್ರಸ್ಟ್ನ ಪ್ರಾದೇಶಿಕ ನಿರ್ದೇಶಕಿ ಗೀತಾ ಬಿ., ಹಿರಿಯ ಜಿಲ್ಲಾ ನಿರ್ದೇಶಕ ಲಕ್ಷ್ಮಣ್ ಎಂ., ಅಕ್ಕಪಡೆಯ ಹೊನ್ನಮ್ಮ ಎಚ್., ಪ್ರಮುಖರಾದ ಕೆ.ಸಿ.ಲಿಂಗರಾಜು, ಸೈಯದ್ ಆರೀಫ್ ಲಾಲ್, ಎನ್.ಎಚ್.ಹಾಲೇಶ್, ಸೈಯದ್ ಸುಯಿಲ್ ಭಾಷಾ, ಆನಂದಪ್ಪ ಎಸ್.ಎಲ್., ಸುವರ್ಣ ಗಣಪತಿ ಭಟ್, ದ್ಯಾಮಕ್ಕ ಮಂಜುನಾಥ್, ವಲಯದ ಸೇವಾ ಪ್ರತಿನಿಧಿಗಳು, ಸಂಘದ ಸದಸ್ಯರು ಉಪಸ್ಥಿತರಿದ್ದರು.261027-43-120862583