ಬೆಂಗಳೂರು: ಕನಿಷ್ಠ ₹7,500 ಪಿಂಚಣಿಗೆ ಆಗ್ರಹ
ಬೆಂಗಳೂರು: ಕನಿಷ್ಠ ₹7,500 ಪಿಂಚಣಿ, ತುಟ್ಟಿಭತ್ಯೆ ಹಾಗೂ ವೈದ್ಯಕೀಯ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿ ಇಪಿಎಸ್–95 ಬಿಎಂಟಿಸಿ, ಕೆಎಸ್ಆರ್ಟಿಸಿ ನಿವೃತ್ತ ನೌಕರರ ಸಂಘದ ಸದಸ್ಯರು ರಿಚ್ಮಂಡ್ ವೃತ್ತದಲ್ಲಿರುವ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಆವರಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.ಆರ್. ಸಿ. ಗುಪ್ತಾ ಹಾಗೂ ಸುನಿಲ್ ಕುಮಾರ್ ಪ್ರಕರಣಗಳಲ್ಲಿ ಸುಪ್ರೀಂ ಕೋ

ಬೆಂಗಳೂರು: ಕನಿಷ್ಠ ₹7,500 ಪಿಂಚಣಿ, ತುಟ್ಟಿಭತ್ಯೆ ಹಾಗೂ ವೈದ್ಯಕೀಯ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿ ಇಪಿಎಸ್–95 ಬಿಎಂಟಿಸಿ, ಕೆಎಸ್ಆರ್ಟಿಸಿ ನಿವೃತ್ತ ನೌಕರರ ಸಂಘದ ಸದಸ್ಯರು ರಿಚ್ಮಂಡ್ ವೃತ್ತದಲ್ಲಿರುವ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಆವರಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.ಆರ್. ಸಿ. ಗುಪ್ತಾ ಹಾಗೂ ಸುನಿಲ್ ಕುಮಾರ್ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಕೂಡಲೇ ಅನುಷ್ಠಾನಗೊಳಿಸಬೇಕು. ಇಪಿಎಸ್ ವ್ಯಾಪ್ತಿಗೆ ಬಾರದ ಹಲವು ನಿವೃತ್ತ ನೌಕರರಿಗೆ ₹ 5 ಸಾವಿರ ನೀಡಬೇಕು ಎಂದು ಆಗ್ರಹಿಸಿದರು.‘ಬಿಎಂಟಿಸಿ, ಕೆಎಸ್ಆರ್ಟಿಸಿ, ವಿವಿಧ ಕಾರ್ಖಾನೆ, ಕಂಪನಿಯಲ್ಲಿ 30–35 ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿದ್ದೇವೆ. ಪಿಂಚಣಿ ₹1 ಸಾವಿರದಿಂದ ₹2,500 ನೀಡಲಾಗುತ್ತಿದ್ದು, ಇದರಿಂದ ಜೀವನ ನಿರ್ವಹಣೆ ಕಷ್ಟವಾಗಿದೆ. ನ್ಯಾಯಯುತ ಪಿಂಚಣಿ ನೀಡುವಂತೆ ದಶಕದಿಂದ ಹೋರಾಟ ನಡೆಸುತ್ತಿದ್ದರೂ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ’ ಎಂದು ಪ್ರತಿಭಟನಕಾರರು ಬೇಸರ ವ್ಯಕ್ತಪಡಿಸಿದರು.‘ನವೆಂಬರ್ 19 ರಂದು ಗುಜರಾತ್ನಲ್ಲಿ ನಡೆಯುವ 240ನೇ ಸಿಬಿಟಿ ಸಭೆಯಲ್ಲಿ ಬೇಡಿಕೆಗಳನ್ನು ಯಥಾವತ್ತಾಗಿ ಅನುಷ್ಠಾನಗೊಳಿಸಬೇಕು. ಇಪಿಎಫ್ಒ ಅಧಿಕಾರಿಗಳು ಮತ್ತು ಕೇಂದ್ರ ಸರ್ಕಾರ ನಿವೃತ್ತರ ಬಗ್ಗೆ ಕಾಳಜಿ ವಹಿಸಿಲ್ಲ. ಹಲವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದಾರೆ. ವೈದ್ಯಕೀಯ ಚಿಕಿತ್ಸೆಗೂ ಆರ್ಥಿಕ ಸಮಸ್ಯೆಯಾಗಿದೆ. ಸಂಸತ್ ಮುಂಗಾರು ಅಧಿವೇಶನದಲ್ಲಿ ಬೇಡಿಕೆ ಈಡೇರಿಕೆ ನಿರ್ಧಾರ ಕೈಗೊಳ್ಳದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು’ ಎಂದು ಎಚ್ಚರಿಸಿದರು.ಸಂಘದ ಅಧ್ಯಕ್ಷ ನಂಜುಂಡೇಗೌಡ, ಖಜಾಂಚಿ ಡೋಲಪ್ಪ ಹಾಗೂ ಚಿಕ್ಕಬಳ್ಳಾಪುರ ಕೆಎಸ್ಆರ್ಟಿಸಿ ನಿವೃತ್ತ ನೌಕರರ ಟ್ರಸ್ಟ್ ಅಧ್ಯಕ್ಷ ಬ್ರಹ್ಮಚಾರಿ ಮಾತನಾಡಿದರು