ಕೆ.ಆರ್.ನಗರದಲ್ಲಿ ಬಸವ ಜಯಂತಿ, ಪ್ರತಿಭಾ ಪುರಸ್ಕಾರ, ಸನ್ಮಾನ ಕಾರ್ಯಕ್ರಮ ನಾಳೆ
ಕೆ.ಆರ್.ನಗರ: ಪಟ್ಟಣದ ರೇಡಿಯೋ ಮೈದಾನದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ವೀರಶೈವ ಲಿಂಗಾಯತ ಸಂಘಟನೆಗಳ ಒಕ್ಕೂಟದ ಸಹಯೋಗದಲ್ಲಿ ಅ.28ರಂದು ಬೆಳಿಗ್ಗೆ 11ಕ್ಕೆ ಬಸವ ಜಯಂತಿ, ಪ್ರತಿಭಾ ಪುರಸ್ಕಾರ, ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಒಕ್ಕೂಟದ ಅಧ್ಯಕ್ಷ ಲಾಲನಹಳ್ಳಿ ಮಹೇಶ್ ಹೇಳಿದರು.ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ

ಕೆ.ಆರ್.ನಗರ: ಪಟ್ಟಣದ ರೇಡಿಯೋ ಮೈದಾನದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಹಾಗೂ ವೀರಶೈವ ಲಿಂಗಾಯತ ಸಂಘಟನೆಗಳ ಒಕ್ಕೂಟದ ಸಹಯೋಗದಲ್ಲಿ ಅ.28ರಂದು ಬೆಳಿಗ್ಗೆ 11ಕ್ಕೆ ಬಸವ ಜಯಂತಿ, ಪ್ರತಿಭಾ ಪುರಸ್ಕಾರ, ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಒಕ್ಕೂಟದ ಅಧ್ಯಕ್ಷ ಲಾಲನಹಳ್ಳಿ ಮಹೇಶ್ ಹೇಳಿದರು.ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 8ಕ್ಕೆ ಬಸವೇಶ್ವರ ದೇವಸ್ಥಾನದಿಂದ ಮೆರವಣಿಗೆ ಹೊರಟು ರೇಡಿಯೊ ಮೈದಾನಕ್ಕೆ ತೆರಳಲಿದೆ. ಬೆಳಿಗ್ಗೆ 11ರಿಂದ ಮೈದಾನದಲ್ಲಿ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಶ್ರೀಕ್ಷೇತ್ರ ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ತುಮಕೂರು ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ, ಸಚಿವ ಈಶ್ವರ ಖಂಡ್ರೆ, ಬಿಜೆಪಿ ರಾಜ್ಯ ಸಮಿತಿ ಅಧ್ಯಕ್ಷ ಶಾಸಕ ಬಿ.ವೈ.ವಿಜಯೇಂದ್ರ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಶಾಸಕ ಡಿ.ರವಿಶಂಕರ್, ಜೆಡಿಎಸ್ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಸಾ.ರಾ.ಮಹೇಶ್, ಮಠಾಧೀಶರು, ಶಾಸಕರು, ಅಧಿಕಾರಿಗಳು, ಮುಖಂಡರು ಭಾಗವಹಿಸುವರು ಎಂದರು.ಸಾಲಿಗ್ರಾಮ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಬಿ.ನಟರಾಜ್, ಒಕ್ಕೂಟದ ಉಪಾಧ್ಯಕ್ಷೆ ಕೆ.ಸಿ.ಶಿಲ್ಪಾ, ಖಜಾಂಚಿ ಎ.ಆರ್.ಮಹದೇವಪ್ಪ, ಪ್ರಧಾನ ಕಾರ್ಯದರ್ಶಿ ಕೆ.ಎಸ್.ನಿಶಾಂತ್, ಸಂಘಟನಾ ಕಾರ್ಯದರ್ಶಿ ಕೆ.ಎಸ್.ಉಮಾಶಂಕರ್ ಇದ್ದರು.261027-38-1621299374