ಪೊನ್ನಂಪೇಟೆ: ವಾಲ್ಮೀಕಿ ಜಯಂತಿ ಆಚರಣೆ, ಸಾಧಕರಿಗೆ ಸನ್ಮಾನ
ಗೋಣಿಕೊಪ್ಪಲು: ಪೊನ್ನಂಪೇಟೆಯಲ್ಲಿ ವಾಲ್ಮೀಕಿ ಜಯಂತಿಯನ್ನು ಸೋಮವಾರ ಅಚ್ಚುಕಟ್ಟಾಗಿ ನಡೆಸಲಾಯಿತು.ಪೊನ್ನಂಪೇಟೆಯ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರೌಢಶಾಲಾ ವಿಭಾಗದ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘ ಹಾಗೂ ವಿವಿಧ ಆದಿವಾಸಿ ಬುಡಕಟ್ಟು ಸಂಘಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಜ

ಗೋಣಿಕೊಪ್ಪಲು: ಪೊನ್ನಂಪೇಟೆಯಲ್ಲಿ ವಾಲ್ಮೀಕಿ ಜಯಂತಿಯನ್ನು ಸೋಮವಾರ ಅಚ್ಚುಕಟ್ಟಾಗಿ ನಡೆಸಲಾಯಿತು.ಪೊನ್ನಂಪೇಟೆಯ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರೌಢಶಾಲಾ ವಿಭಾಗದ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘ ಹಾಗೂ ವಿವಿಧ ಆದಿವಾಸಿ ಬುಡಕಟ್ಟು ಸಂಘಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಜಯಂತಿಯನ್ನು ತಹಶೀಲ್ದಾರ್ ಸಂಜನಾ ಉದ್ಘಾಟಿಸಿದರು.ಹಳ್ಳಿಗಟ್ಟು ಸಿಐಟಿ ಪಿಯು ಕಾಲೇಜಿನ ಉಪನ್ಯಾಸಕಿ ಸುಶ್ಮಿತಾ ಮಾತನಾಡಿ, ‘ಆದಿ ಕವಿ ವಾಲ್ಮೀಕಿ ಬುಡಕಟ್ಟು ಜನಾಂಗದಲ್ಲಿ ಹುಟ್ಟಿ ತಮ್ಮ ವಿದ್ವತ್ತಿನ ಮೂಲಕ ಜಗತ್ತಿನ ಶ್ರೇಷ್ಠ ಕಾವ್ಯ ಎನಿಸುವ ರಾಮಾಯಣವನ್ನು ರಚಿಸಿದರು. ಈ ಮಹಾಕಾವ್ಯದಲ್ಲಿ ಬರುವ ಸಾಮಾಜಿಕ ಚಿತ್ರಣ, ಬದುಕಿನ ಮೌಲ್ಯ ಮತ್ತು ಪರಿಸರದ ಬಗೆಗಿನ ವರ್ಣನೆ ಸಾರ್ವಕಾಲಿಕವಾಗಿ ನಿಲ್ಲುವಂಥದ್ದಾಗಿದೆ ಎಂದು ಹೇಳಿದರು.ಬುಡಕಟ್ಟು ಜನಾಂಗದ ವಿವಿಧ ಸಾಧಕರಾದ ಜೆ.ಕೆ.ರಾಮು, ಸುರೇಶ್, ರಾಜು ಅವರನ್ನು ಸನ್ಮಾನಿಸಲಾಯಿತು. ವಿರಾಜಪೇಟೆ ತಾಲ್ಲೂಕು ಅನುಷ್ಠಾನ ಸಮಿತಿ ಅಧ್ಯಕ್ಷ ಜಾನ್ಸನ್ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪಂಚಾಯಿತಿ ಇಒ ರಾಜೇಶ್, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಗೋಪಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ ಪೂಣಚ್ಪ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತೇಜರಾಜು, ಸಿಬ್ಬಂದಿ ಪ್ರಶಾಂತ್, ನಾಯಕ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಸುರೇಶ್ ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯೆ ಪಿ.ಆರ್. ಪಂಕಜ ಹಾಜರಿದ್ದರು.261027-51-1967279697