ಅನಿವಾಸಿ ಬ್ಯಾರಿ ಕುಟುಂಬಗಳಿಗೆ ಆರ್ಥಿಕ ಆಸರೆ: ದುಬೈ ಬ್ಯಾರೀಸ್ 24/7 ಯೋಜನೆ
ದುಬೈ: ಉದ್ಯೋಗ ಅರಸಿ ಯುಎಇಗೆ ತೆರಳಿರುವ ಕರಾವಳಿ ಕರ್ನಾಟಕದ ಬ್ಯಾರಿ ಸಮುದಾಯದ ಅನಿವಾಸಿಗಳ ಕುಟುಂಬಗಳಿಗೆ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ದುಬೈ ಬ್ಯಾರೀಸ್ 24/7 ಮಹತ್ವಾಕಾಂಕ್ಷಿ ಯೋಜನೆಯೊಂದನ್ನು ರೂಪಿಸಿದೆ. ಯೋಜನೆಯ ಅಂತಿಮ ಹಂತದ ಸಿದ್ಧತೆಗಳು ನಡೆಯುತ್ತಿದ್ದು, ಮುಂದಿನ ಮೂರು ತಿಂಗಳೊಳಗೆ ಅಧಿಕೃತವಾಗಿ ಕಾರ್ಯಾರಂಭ ಮಾಡುವ ಗುರಿ ಹೊಂದಲಾಗಿದೆ.ಯುಎಇಯಲ್ಲಿ ನೆಲೆ
ದುಬೈ: ಉದ್ಯೋಗ ಅರಸಿ ಯುಎಇಗೆ ತೆರಳಿರುವ ಕರಾವಳಿ ಕರ್ನಾಟಕದ ಬ್ಯಾರಿ ಸಮುದಾಯದ ಅನಿವಾಸಿಗಳ ಕುಟುಂಬಗಳಿಗೆ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ದುಬೈ ಬ್ಯಾರೀಸ್ 24/7 ಮಹತ್ವಾಕಾಂಕ್ಷಿ ಯೋಜನೆಯೊಂದನ್ನು ರೂಪಿಸಿದೆ. ಯೋಜನೆಯ ಅಂತಿಮ ಹಂತದ ಸಿದ್ಧತೆಗಳು ನಡೆಯುತ್ತಿದ್ದು, ಮುಂದಿನ ಮೂರು ತಿಂಗಳೊಳಗೆ ಅಧಿಕೃತವಾಗಿ ಕಾರ್ಯಾರಂಭ ಮಾಡುವ ಗುರಿ ಹೊಂದಲಾಗಿದೆ.ಯುಎಇಯಲ್ಲಿ ನೆಲೆಸಿರುವ ಬ್ಯಾರಿ ಸಮುದಾಯದ ಸದಸ್ಯರು ಮೃತಪಟ್ಟ ಸಂದರ್ಭದಲ್ಲಿ ಅವರ ಕುಟುಂಬಗಳಿಗೆ ಆರ್ಥಿಕ ನೆರವು ಒದಗಿಸುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿದೆ. ಇದಕ್ಕಾಗಿ ದುಬೈ ಬ್ಯಾರೀಸ್ 24/7 ಕಾರ್ಯಕಾರಿ ಸಮಿತಿಯ ನೇತೃತ್ವದಲ್ಲಿ ಮಂಗಳೂರಿನಲ್ಲಿ ಟ್ರಸ್ಟ್ ಸ್ಥಾಪಿಸಲು ಉದ್ದೇಶಿಸಲಾಗಿದೆ. ಟ್ರಸ್ಟ್ ಮೂಲಕ ಯೋಜನೆಯನ್ನು ಅನುಷ್ಠಾನಗೊಳಿಸಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಸಂಘಟನೆಯ ಪ್ರತಿನಿಧಿ ಹಿದಾಯತ್ ಅಡ್ಡೂರು ತಿಳಿಸಿದ್ದಾರೆ.ಉದ್ಯೋಗ ಅರಸಿ ವಿದೇಶಕ್ಕೆ ತೆರಳಿ ಕಷ್ಟಪಟ್ಟು ದುಡಿಯುತ್ತಿರುವ ಅನಿವಾಸಿಗಳ ಕುಟುಂಬಗಳ ಭವಿಷ್ಯ ಮತ್ತು ಆರ್ಥಿಕ ಭದ್ರತೆಯನ್ನು ಗಮನದಲ್ಲಿಟ್ಟುಕೊಂಡು ಈ ಯೋಜನೆ ರೂಪಿಸಲಾಗಿದೆ. ಯುಎಇಯಲ್ಲಿ ನೆಲೆಸಿರುವ ಬ್ಯಾರಿ ಸಮುದಾಯದ ಕುಟುಂಬಗಳಿಗೆ ನೆರವಾಗುವ ಉದ್ದೇಶದೊಂದಿಗೆ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.ಯುಎಇಯಲ್ಲಿ ನೆಲೆಸಿರುವ ಬ್ಯಾರಿ ಸಮುದಾಯದ ವಿವಿಧ ಸಂಘ-ಸಂಸ್ಥೆಗಳ ನಾಯಕರು, ಮುಖಂಡರು ಮತ್ತು ಸಾಮಾಜಿಕ ಕಾರ್ಯಕರ್ತರನ್ನು ಒಳಗೊಂಡಿರುವ ದುಬೈ ಬ್ಯಾರೀಸ್ 24/7, ಸಮುದಾಯದ ಜನರನ್ನು ಒಂದೇ ವೇದಿಕೆಯಡಿ ಒಗ್ಗೂಡಿಸುವ ಉದ್ದೇಶವನ್ನೂ ಹೊಂದಿದೆ. ಈ ಕಾರ್ಯದಲ್ಲಿ ನೂರಾರು ಸ್ವಯಂಸೇವಕರು ತೊಡಗಿಸಿಕೊಳ್ಳುವ ನಿರೀಕ್ಷೆಯಿದೆ. ಯೋಜನೆಯ ಸದಸ್ಯತ್ವ ಪಡೆಯುವ ವಿಧಾನ ಹಾಗೂ ಅದರ ಕಾರ್ಯಚಟುವಟಿಕೆಗಳ ಕುರಿತು ಮುಂದಿನ ದಿನಗಳಲ್ಲಿ ವಿವರಗಳನ್ನು ಪ್ರಕಟಿಸಲಾಗುವುದು ಎಂದು ಸಂಘಟನೆಯ ವ್ಯವಸ್ಥಾಪಕರು ತಿಳಿಸಿದ್ದಾರೆ.ಹಿದಾಯತ್ ಅಡ್ಡೂರು ಸಂಕಷ್ಟದಲ್ಲಿರುವವರಿಗೆ ನೆರವಿನ ಹಸ್ತಯುಎಇಯಲ್ಲಿ ಸಂಕಷ್ಟಕ್ಕೆ ಸಿಲುಕಿದವರು, ಅಪಘಾತಕ್ಕೀಡಾದವರು, ವೈದ್ಯಕೀಯ ಸಮಸ್ಯೆಗಳಿಂದ ಬಳಲುತ್ತಿರುವವರು ಹಾಗೂ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಅನಿವಾಸಿ ಭಾರತೀಯರಿಗೆ ದುಬೈ ಬ್ಯಾರೀಸ್ 24/7 ನೆರವು ನೀಡುತ್ತಾ ಬಂದಿದೆ.ಕಳೆದ ಒಂದು ವರ್ಷದಲ್ಲಿ ಯುಎಇಯಲ್ಲಿ ಮೃತಪಟ್ಟ 60ಕ್ಕೂ ಹೆಚ್ಚು ಅನಿವಾಸಿ ಭಾರತೀಯರ ಮೃತದೇಹಗಳನ್ನು ಭಾರತಕ್ಕೆ ಕಳುಹಿಸುವ ಪ್ರಕ್ರಿಯೆಯಲ್ಲಿ ಸಂಘಟನೆ ಸಹಕಾರ ನೀಡಿದೆ. ವಿದೇಶದಲ್ಲಿ ಕುಟುಂಬದ ಸದಸ್ಯರನ್ನು ಕಳೆದುಕೊಂಡು ದುಃಖದಲ್ಲಿರುವ ಕುಟುಂಬಗಳಿಗೆ ಮೃತದೇಹವನ್ನು ತಾಯ್ನಾಡಿಗೆ ತಲುಪಿಸುವ ಪ್ರಕ್ರಿಯೆಯಲ್ಲಿ ನೆರವಾಗುವುದು ಸಂಘಟನೆಯ ಪ್ರಮುಖ ಮಾನವೀಯ ಸೇವಾ ಕಾರ್ಯಗಳಲ್ಲಿ ಒಂದಾಗಿದೆ.ಹಿದಾಯತ್ ಅಡ್ಡೂರು, ದುಬೈ ಬ್ಯಾರೀಸ್ 24/7ಯುಎಇಯಲ್ಲಿ ನೆಲೆಸಿರುವ ಅನಿವಾಸಿ ಬ್ಯಾರಿ ಸಮುದಾಯದ ಸದಸ್ಯರು ಮೃತಪಟ್ಟ ಸಂದರ್ಭದಲ್ಲಿ ಅವರ ಕುಟುಂಬಗಳಿಗೆ ಆರ್ಥಿಕ ನೆರವು ಒದಗಿಸುವ ಉದ್ದೇಶದಿಂದ ಮಂಗಳೂರಿನಲ್ಲಿ ಟ್ರಸ್ಟ್ ಸ್ಥಾಪಿಸಿ, ಮುಂದಿನ ಮೂರು ತಿಂಗಳೊಳಗೆ ಯೋಜನೆ ಆರಂಭಿಸಲು ಸಿದ್ಧತೆ ನಡೆಸುತ್ತಿದ್ದೇವೆ.ವರದಿ: ನಿಝಾಮುದ್ದೀನ್ ಉಪ್ಪಿನಂಗಡಿ, ತಬೂಕ್