ವಸಂತ ಸಾಲಿಯಾನ್, ಧರ್ಣಪ್ಪ ಪೂಜಾರಿಗೆ ನ.8ರಂದು ಪೌರ ಸನ್ಮಾನ
ಬೆಳ್ತಂಗಡಿ: ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಕಲಾ, ಕ್ರೀಡೆ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು, ಹುಟ್ಟೂರಿನ ಅಭಿವೃದ್ಧಿಗೆ ಕೊಡುಗೆ ನೀಡಿರುವ ದಕ್ಷಿಣ ಕನ್ನಡ - ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲಿಯಾನ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಎಚ್.ಧರ್ಣಪ್ಪ ಪೂಜಾರಿ ಅವರಿಗೆ ನ.8ರಂದು ಹುಟ್ಟೂರ ಪೌರ ಸನ್ಮಾನ ನಡೆಯಲಿದೆ.ಆಮಂತ

ಬೆಳ್ತಂಗಡಿ: ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ, ಕಲಾ, ಕ್ರೀಡೆ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು, ಹುಟ್ಟೂರಿನ ಅಭಿವೃದ್ಧಿಗೆ ಕೊಡುಗೆ ನೀಡಿರುವ ದಕ್ಷಿಣ ಕನ್ನಡ - ಉಡುಪಿ ಜಿಲ್ಲಾ ಜನಜಾಗೃತಿ ವೇದಿಕೆಯ ಸ್ಥಾಪಕಾಧ್ಯಕ್ಷ ಕೆ.ವಸಂತ ಸಾಲಿಯಾನ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಎಚ್.ಧರ್ಣಪ್ಪ ಪೂಜಾರಿ ಅವರಿಗೆ ನ.8ರಂದು ಹುಟ್ಟೂರ ಪೌರ ಸನ್ಮಾನ ನಡೆಯಲಿದೆ.ಆಮಂತ್ರಣ ಪತ್ರಿಕೆಯನ್ನು ಧರ್ಮ ಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಬಿಡುಗಡೆ ಮಾಡಿದರು.ಬಳಂಜ ಶಾಲೆಯ ಅಮೃತ ಮಹೋತ್ಸವದ ಸಮಾರೋಪ ಸಮಾರಂಭದೊಂದಿಗೆ ಸಾಧಕರಿಗೆ ಪೌರ ಸನ್ಮಾನ, ಅಮೃತ ಸಿಂಧು ಬಿಡುಗಡೆ ಸೇರಿದಂತೆ ಅಮೃತ ಮಹೋತ್ಸವ ಸಂಚಾಲಕ ಅಶ್ವತ್ಥ್ ಹೆಗ್ಡೆ ನೇತೃತ್ವದಲ್ಲಿ ಕಾರ್ಯಕ್ರಮದ ಸಿದ್ಧತೆಗಳು ನಡೆಯುತ್ತಿವೆ.ಬೆಂಗಳೂರು ಕ್ಷೇಮವನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರದ್ಧಾ ಅಮಿತ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿಇಒ ಅನಿಲ್ ಕುಮಾರ್ ಎಸ್.ಎಸ್., ವೀರೇಂದ್ರ ಹೆಗ್ಗಡೆ ಅವರ ಆಪ್ತ ಕಾರ್ಯದರ್ಶಿ ಎ.ವೀರು ಶೆಟ್ಟಿ ಅವರಿಗೆ ಆಮಂತ್ರಣ ನೀಡಲಾಯಿತು.ಅಮೃತ ಮಹೋತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ ಪಿ.ಕೆ., ಬಳಂಜ ಪಂಚಲಿಂಗೇಶ್ವರ ದೇವಸ್ಥಾನದ ಅನುವಂಶೀಯ ಆಡಳಿತದಾರ ಬಿ.ಶೀತಲ್ ಪಡಿವಾಳ್, ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಸಂತೋಷ್ ಪಿ.ಕೋಟ್ಯಾನ್, ಶಿಕ್ಷಣ ಟ್ರಸ್ಟ್ ಸದಸ್ಯ ಪ್ರವೀಣ್ ಕುಮಾರ್ ಎಚ್.ಎಸ್., ಬಳಂಜ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರೀಶ್ ವೈ. ಚಂದ್ರಮ, ಸಮಿತಿ ಪ್ರಮುಖರಾದ ದಿನೇಶ್ ಪಿ.ಕೆ., ದೀಪಕ್ ಎಚ್.ಡಿ., ಚೇತನಾ ಜೈನ್, ಮಂಗಳ ದೇವಾಡಿಗ, ಅಶ್ರಫ್ ಬಳಂಜ, ಅಬೂಬಕ್ಕರ್, ಅಶ್ವಿನ್ ಬಿ.ಕೆ., ಡೀಕಯ್ಯ ಕುಲಾಲ್ ಭಾಗವಹಿಸಿದ್ದರು.261027-29-393432325