ವಿಧಾನಪರಿಷತ್ ಚುನಾವಣೆ: ಇಂದು ಫಲಿತಾಂಶ
ಬೆಂಗಳೂರು: ವಿಧಾನಪರಿಷತ್ನ ಶಿಕ್ಷಕರು ಹಾಗೂ ಪದವೀಧರರ ತಲಾ ಎರಡು ಕ್ಷೇತ್ರಗಳಿಗೆ ನಡೆದಿದ್ದ ಚುನಾವಣೆಯ ಮತ ಎಣಿಕೆ ಇಂದು (ಅ.27) ನಡೆಯಲಿದ್ದು, ಸಂಜೆಯ ವೇಳೆಗೆ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ.ಬೆಂಗಳೂರು ಶಿಕ್ಷಕರ ಕ್ಷೇತ್ರ, ಪಶ್ಚಿಮ ಪದವೀಧರರ ಕ್ಷೇತ್ರ, ಆಗ್ನೇಯ ಪದವೀಧರರ ಕ್ಷೇತ್ರ ಹಾಗೂ ಈಶಾನ್ಯ ಶಿಕ್ಷಕರ ಕ್ಷೇತ್ರಗಳಿಗೆ ಅ.23ರಂದು ಚುನಾವಣೆ ನಡೆದಿತ್ತು.&nbs

ಬೆಂಗಳೂರು: ವಿಧಾನಪರಿಷತ್ನ ಶಿಕ್ಷಕರು ಹಾಗೂ ಪದವೀಧರರ ತಲಾ ಎರಡು ಕ್ಷೇತ್ರಗಳಿಗೆ ನಡೆದಿದ್ದ ಚುನಾವಣೆಯ ಮತ ಎಣಿಕೆ ಇಂದು (ಅ.27) ನಡೆಯಲಿದ್ದು, ಸಂಜೆಯ ವೇಳೆಗೆ ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ.ಬೆಂಗಳೂರು ಶಿಕ್ಷಕರ ಕ್ಷೇತ್ರ, ಪಶ್ಚಿಮ ಪದವೀಧರರ ಕ್ಷೇತ್ರ, ಆಗ್ನೇಯ ಪದವೀಧರರ ಕ್ಷೇತ್ರ ಹಾಗೂ ಈಶಾನ್ಯ ಶಿಕ್ಷಕರ ಕ್ಷೇತ್ರಗಳಿಗೆ ಅ.23ರಂದು ಚುನಾವಣೆ ನಡೆದಿತ್ತು. ಮತ ಎಣಿಕೆ ಕಾರ್ಯ ಬೆಳಿಗ್ಗೆ 8ರಿಂದ ಆರಂಭವಾಗಲಿದ್ದು, ನಾಲ್ಕು ಮತ ಎಣಿಕೆ ಕೇಂದ್ರಗಳಲ್ಲೂ ಅಗತ್ಯ ಸಿಬ್ಬಂದಿ ನೇಮಿಸಲಾಗಿದೆ. ಮತ ಎಣಿಕೆ ಕೇಂದ್ರದ ಬಳಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಇದು ಪ್ರಾಶಸ್ತ್ಯದ ಮತದಾನವಾದ ಕಾರಣ ಮತ ಎಣಿಕೆ ಪ್ರಕ್ರಿಯೆ ಕೊಂಚ ವಿಳಂಬವಾಗಲಿದೆ ಎಂದು ಮೂಲಗಳು ಹೇಳಿವೆ.ಪಶ್ಚಿಮ ಪದವೀಧರರ ಕ್ಷೇತ್ರದಿಂದ ಬಿಜೆಪಿಯ ಎಸ್.ವಿ. ಸಂಕನೂರ, ಕಾಂಗ್ರೆಸ್ನಿಂದ ಮೋಹನ ಲಿಂಬಿಕಾಯಿ ಸೇರಿದಂತೆ 14 ಅಭ್ಯರ್ಥಿಗಳು, ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿಯ ಶಶೀಲ್ ಜಿ. ನಮೋಶಿ, ಕಾಂಗ್ರೆಸ್ನಿಂದ ಶರಣಪ್ಪ ಮಟ್ಟೂರು ಸೇರಿದಂತೆ 13 ಅಭ್ಯರ್ಥಿಗಳು, ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್ನ ಪುಟ್ಟಣ್ಣ, ಜೆಡಿಎಸ್ನ ಎ.ಪಿ. ರಂಗನಾಥ್ ಸೇರಿದಂತೆ ಆರು ಅಭ್ಯರ್ಥಿಗಳು ಹಾಗೂ ಆಗ್ನೇಯ ಪದವೀಧರರ ಕ್ಷೇತ್ರದಿಂದ ಕಾಂಗ್ರೆಸ್ನ ಶಶಿ ಹುಲಿಕುಂಟೆಮಠ್, ಬಿಜೆಪಿಯ ಕೆ.ಎಂ. ಸುರೇಶ್ ಸೇರಿದಂತೆ 10 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.