ವಿಧಾನಪರಿಷತ್ನ ಶಿಕ್ಷಕರು, ಪದವೀಧರರ ಕ್ಷೇತ್ರಗಳ ಫಲಿತಾಂಶ; ಮುನ್ನಡೆ ಕಾಯ್ದುಕೊಂಡ ಬಿಜೆಪಿ
ಪಶ್ಚಿಮ ಪದವೀಧರರ ಕ್ಷೇತ್ರ: ಮುನ್ನಡೆ ಕಾಯ್ದುಕೊಂಡ ಎಸ್.ವಿ.ಸಂಕನೂರಧಾರವಾಡ: ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯ ಎರಡನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದು, ಎರಡನೇ ಸುತ್ತಿನಲ್ಲೂ ಬಿಜೆಪಿ ಅಭ್ಯರ್ಥಿ ಎಸ್.ವಿ.ಸಂಕನರ ಮುನ್ನಡೆ ಕಾಯ್ದುಕೊಂಡಿದ್ದಾರೆ. ಎರಡನೇ ಸುತ್ತಿನಲ್ಲಿ ಅವರು 1464 ಮತಗಳ ಮುನ್ನಡೆ ಸಾಧಿಸಿದ್ದಾರೆ.ಸಂಕನೂರ ಅವರು ಎರಡನೇ ಸುತ್ತ

ಪಶ್ಚಿಮ ಪದವೀಧರರ ಕ್ಷೇತ್ರ: ಮುನ್ನಡೆ ಕಾಯ್ದುಕೊಂಡ ಎಸ್.ವಿ.ಸಂಕನೂರಧಾರವಾಡ: ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯ ಎರಡನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದು, ಎರಡನೇ ಸುತ್ತಿನಲ್ಲೂ ಬಿಜೆಪಿ ಅಭ್ಯರ್ಥಿ ಎಸ್.ವಿ.ಸಂಕನರ ಮುನ್ನಡೆ ಕಾಯ್ದುಕೊಂಡಿದ್ದಾರೆ. ಎರಡನೇ ಸುತ್ತಿನಲ್ಲಿ ಅವರು 1464 ಮತಗಳ ಮುನ್ನಡೆ ಸಾಧಿಸಿದ್ದಾರೆ.ಸಂಕನೂರ ಅವರು ಎರಡನೇ ಸುತ್ತಿನಲ್ಲಿ 6161, ಮೋಹನ ಲಿಂಬಿಕಾಯಿ 4697, ಪಕ್ಷೇತರ ಅಭ್ಯರ್ಥಿ ಕಾಂತಕುಮಾರ್ 942 ಮತಗಳನ್ನು ಪಡೆದಿದ್ದಾರೆ. ಎರಡನೇ ಸುತ್ತಿನಲ್ಲಿ 14,000 ಮತಗಳ ಎಣಿಕೆ ಆಗಿದ್ದು, ಈ ಪೈಕಿ 1939 ಮತಗಳು ಅಸಿಂಧುವಾಗಿವೆ.ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ: ಐದನೇ ಸಲ ಗೆದ್ದ ಬಿಜೆಪಿಯ ಶಶೀಲ್ ನಮೋಶಿಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಮತಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಶಶೀಲ್ ನಮೋಶಿ ಐದನೇ ಬಾರಿಗೆ ಗೆಲುವಿನ ಬೀರಿದ್ದಾರೆ.ವಿಧಾನ ಪರಿಷತ್ನ ಈಶಾನ್ಯ ಶಿಕ್ಷಕರ ಮತಕ್ಷೇತ್ರ: ಬಿಜೆಪಿಯ ಶಶೀಲ್ ನಮೋಶಿ ಗೆಲುವುಕಲಬುರಗಿ: ಕರ್ನಾಟಕ ವಿಧಾನಪರಿಷತ್ ಶಿಕ್ಷಕರ ಮತಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಶಶೀಲ್ ಜಿ.ನಮೋಶಿ ಗೆಲುವು ಬಹುತೇಕ ಖಚಿತವಾಗಿದೆ.ಅಧಿಕೃತ ಘೋಷಣೆಯಷ್ಟೇ ಬಾಕಿ. ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ ನಡೆಯುತ್ತಿದೆ.ಬೆಂಗಳೂರು ಶಿಕ್ಷಕರ ಕ್ಷೇತ್ರ: ಜೆಡಿಎಸ್ನ ರಂಗನಾಥ್ಗೆ ಗೆಲುವು; ಪುಟ್ಟಣ್ಣಗೆ ಸೋಲುಬೆಂಗಳೂರು: ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನಪರಿಷತ್ಗೆ ನಡೆದಿದ್ದ ಚುನಾವಣೆಯ ಮತ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಅಂತಿಮ ಸುತ್ತಿನ ಎಣಿಕೆಯ ನಂತರ ಜೆಡಿಎಸ್ ಅಭ್ಯರ್ಥಿ ಎ.ಪಿ. ರಂಗನಾಥ್ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಅವರಿಗಿಂತ 667 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದು, ವಿಜಯದ ಅಧಿಕೃತ ಘೋಷಣೆ ಬಾಕಿ ಇದೆ. ಮೊದಲ ಸುತ್ತಿನ 7,000 ಮತಗಳ ಎಣಿಕೆಯ ನಂತರ ಕಾಂಗ್ರೆಸ್ನ ಪುಟ್ಟಣ್ಣ ಅವರು ತಮ್ಮ ಪ್ರತಿಸ್ಪರ್ಧಿ ರಂಗನಾಥ್ ಅವರಿಗಿಂತ 224 ಮತಗಳ ಮುನ್ನಡೆ ಸಾಧಿಸಿದ್ದರು. ಎರಡನೇ ಸುತ್ತಿನಲ್ಲಿ ರಂಗನಾಥ್ 361 ಮತಗಳ ಮುನ್ನಡೆ ಸಾಧಿಸುವ ಮೂಲಕ 140 ಮತಗಳ ಮುನ್ನಡೆ ಸಾಧಿಸಿದ್ದರು. ಕೊನೆಯ ಸುತ್ತಿನಲ್ಲಿ 527 ಮತಗಳ ಮುನ್ನಡೆ ಸಾದಿಸುವ ಮೂಲಕ ವಿಜಯದತ್ತ ಸಾಗಿದ್ದಾರೆ. ಮೊದಲ ಸುತ್ತಿನ ಮತ ಎಣಿಕೆಯ ಪೂರ್ಣ; ಬಿಜೆಪಿ ಅಭ್ಯರ್ಥಿ ಎಸ್.ವಿ.ಸಂಕನೂರಗೆ 2065 ಮತಗಳ ಮುನ್ನಡೆಧಾರವಾಡ: ಇಲ್ಲಿನ ಕೃಷಿ ವಿಶ್ವವಿದ್ಯಾಲಯದಲ್ಲಿ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯ ಮತಗಳ ಎಣಿಕೆ ಭರದಿಂದ ಸಾಗಿದೆ. ಮೊದಲ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಎಸ್.ವಿ.ಸಂಕನೂರ 2065 ಮತಗಳ ಮುನ್ನಡೆ ಸಾಧಿಸಿದ್ದಾರೆ.ಎಸ್.ವಿ.ಸಂಕನೂರ ಅವರು 6459 , ಕಾಂಗ್ರೆಸ್ ಅಭ್ಯರ್ಥಿ ಮೋಹನ ಲಿಂಬಿಕಾಯಿ 4394 ಮತಗಳನ್ನು ಪಡೆದಿದ್ದಾರೆ. ಪಕ್ಷೇತರ ಅಭ್ಯರ್ಥಿ ಕಾಂತಕುಮಾರ್ ಆರ್ 710 ಮತಗಳನ್ನು ಪಡೆದಿದ್ದಾರೆ. ಮೊದಲ ಸುತ್ತಿನಲ್ಲಿ 14,001 ಮತಗಳ ಎಣಿಕೆ ಆಗಿದ್ದು, ಈ ಪೈಕಿ 2133 ಮತಗಳು ಅಸಿಂಧುವಾಗಿವೆ. 11868 ಮತಗಳು ಸಿಂಧುವಾಗಿವೆ. ಒಟ್ಟು 14 ಅಭ್ಯರ್ಥಿಗಳು ಕಣದಲ್ಲಿದ್ದಾರೆ.ಎಸ್.ವಿ.ಸಂಕನೂರಎನ್.ಡಿ.ಎ ಅಭ್ಯರ್ಥಿ ಎಸ್.ವಿ.ಸಂಕನೂರ ಮತಗಳ ಮುನ್ನಡೆಧಾರವಾಡ: ಇಲ್ಲಿನ ಕೃಷಿ ವಿಶ್ವವಿದ್ಯಾಲಯದಲ್ಲಿ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯ ಮತಗಳ ಎಣಿಕೆ ಭರದಿಂದ ಸಾಗಿದೆ. ಮೊದಲ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದು, ಎನ್.ಡಿ.ಎ ಅಭ್ಯರ್ಥಿ ಎಸ್.ವಿ.ಸಂಕನೂರ 1700 ಮತಗಳ ಮುನ್ನಡೆ ಸಾಧಿಸಿದ್ದಾರೆ.ಬೆಂಗಳೂರು ಶಿಕ್ಷಕರ ಕ್ಷೇತ್ರ: ರಂಗನಾಥ್ಗೆ ಮುನ್ನಡೆಬೆಂಗಳೂರು: ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನಪರಿಷತ್ಗೆ ನಡೆದಿದ್ದ ಚುನಾವಣೆಯ ಮತ ಎಣಿಕೆ ಕಾರ್ಯ ನಡೆದಿದ್ದು, ಎರಡು ಸುತ್ತಿನ ಎಣಿಕೆಯ ನಂತರ ಜೆಡಿಎಸ್ ಅಭ್ಯರ್ಥಿ ಎ.ಪಿ. ರಂಗನಾಥ್ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಅವರಿಗಿಂತ 140 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.ಈಶಾನ್ಯ ಶಿಕ್ಷಕರ ಮತಕ್ಷೇತ್ರ: ಬಿಜೆಪಿಗೆ ಮುನ್ನಡೆ, ಮೊದಲ ಸುತ್ತಿನಲ್ಲಿ 818 ಮತ ತಿರಸ್ಕೃತಕಲಬುರಗಿ: ಕರ್ನಾಟಕ ವಿಧಾನ ಪರಿಷತ್ ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಮತ ಎಣಿಕೆ ಇಲ್ಲಿನ ಗುಲಬರ್ಗಾ ವಿಶ್ವವಿದ್ಯಾಲಯದ ಭಾಸ್ಕರ್ ಸಭಾಂಗಣದಲ್ಲಿ ಭರದಿಂದ ಸಾಗಿದ್ದು ಮೊದಲ ಸುತ್ತಿನ ಪ್ರಾಶಸ್ತ್ಯ ಮತಗಳಲ್ಲಿ ಬಿಜೆಪಿ ಅಭ್ಯರ್ಥಿ ಶಶೀಲ್ ನಮೋಶಿ ಅವರು 7,243 ಮತ ಪಡೆದಿದ್ದಾರೆ.ಕಾಂಗ್ರೆಸ್ ಅಭ್ಯರ್ಥಿ ಶರಣಪ್ಪ ಮಟ್ಟೂರು ಅವರಿಗಿಂತ 1,529 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಶರಣಪ್ಪ ಮಟ್ಟೂರ ಅವರು 5,714 ಮತಗಳನ್ನು ಗಳಿಸಿದ್ದಾರೆ.14 ಟೇಬಲ್ಗಳಲ್ಲಿ ಮತ ಎಣಿಕೆ ಸಾಗಿದ್ದು, ಮೊದಲ ಸುತ್ತಿನಲ್ಲಿ 14,001 ಮತಗಳ ಎಣಿಕೆ ನಡೆದಿದ್ದು, ಸಿಂಧು ಮತಗಳು 13,183 ಹಾಗೂ 818 ಮತಗಳು ತಿರಸ್ಕೃತಗೊಂಡಿವೆ.ಶಶೀಲ್ ನಮೋಶಿವಿಧಾನಪರಿಷತ್ನ ಶಿಕ್ಷಕರು, ಪದವೀಧರರ ಕ್ಷೇತ್ರಗಳ ಫಲಿತಾಂಶ; ಮುನ್ನಡೆ ಕಾಯ್ದುಕೊಂಡ ಬಿಜೆಪಿಬೆಂಗಳೂರು: ವಿಧಾನಪರಿಷತ್ನ ಶಿಕ್ಷಕರು ಹಾಗೂ ಪದವೀಧರರ ತಲಾ ಎರಡು ಕ್ಷೇತ್ರಗಳಿಗೆ ನಡೆದಿದ್ದ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದಾರೆ.