ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಎಣಿಕೆ – 36 ದಿನದಲ್ಲಿ 2.79 ಕೋಟಿ ರೂ. ಸಂಗ್ರಹ.
ಚಾಮರಾಜನಗರ: ಹನೂರು ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ (Male Mahadeshwar Hills) ಅ.28ರಂದು ಹುಂಡಿ ಹಣ ಎಣಿಕೆ ನಡೆದಿದ್ದು, 36 ದಿನಗಳ ಅವಧಿಯಲ್ಲಿ 2.79 ಕೋಟಿ ರೂ. ಸಂಗ್ರಹವಾಗಿದೆ. ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ಮಠದ ಅಧ್ಯಕ್ಷ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಹಾಗೂ ಪ್ರಾಧಿಕಾರ

ಚಾಮರಾಜನಗರ: ಹನೂರು ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ (Male Mahadeshwar Hills) ಅ.28ರಂದು ಹುಂಡಿ ಹಣ ಎಣಿಕೆ ನಡೆದಿದ್ದು, 36 ದಿನಗಳ ಅವಧಿಯಲ್ಲಿ 2.79 ಕೋಟಿ ರೂ. ಸಂಗ್ರಹವಾಗಿದೆ. ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ಮಠದ ಅಧ್ಯಕ್ಷ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿ ಹಾಗೂ ಪ್ರಾಧಿಕಾರದ ಕಾರ್ಯದರ್ಶಿ ಪುರುಷೋತ್ತಮ್ ಅವರ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮರಾ ಕಣ್ಗಾವಲಿನಲ್ಲಿ ಎಣಿಕೆ ಕಾರ್ಯ ನಡೆಯಿತು. ಇದನ್ನೂ ಓದಿ: ಹಾಸನಾಂಬೆ ದರ್ಶನೋತ್ಸವಕ್ಕೆ ಕ್ಷಣಗಣನೆ, ಗುರುವಾರ ಗರ್ಭಗುಡಿ ಓಪನ್ – ನಾಳೆ ಸಾರ್ವಜನಿಕರಿಗಿಲ್ಲ ದರ್ಶನ ಭಾಗ್ಯ! ಮಹಾಲಯ ಅಮಾವಾಸ್ಯೆ, ಸರ್ಕಾರಿ ರಜಾ ದಿನ, ಜಾತ್ರಾ ಮಹೋತ್ಸವ ಸೇರಿದಂತೆ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದಾರೆ. ಈ ಬಾರಿ 36 ದಿನಗಳ ಅವಧಿಯಲ್ಲಿ ಒಟ್ಟು 2,79,16,048 ರೂ. ನಗದು, 19 ಗ್ರಾಂ ಚಿನ್ನ ಹಾಗೂ 1 ಕೆಜಿ 415 ಗ್ರಾಂ ಬೆಳ್ಳಿಯ ವಸ್ತುಗಳನ್ನು ಭಕ್ತರು ಹುಂಡಿಗೆ ಕಾಣಿಕೆಯಾಗಿ ಸಲ್ಲಿಸಿದ್ದಾರೆ. ಇದೇ ವೇಳೆ ಚಲಾವಣೆಯಲ್ಲಿ ಇಲ್ಲದ 2,000 ಮುಖಬೆಲೆಯ 3 ನೋಟುಗಳು ಹಾಗೂ ವಿದೇಶಿ ಕರೆನ್ಸಿಯ 2 ನೋಟುಗಳು ಹುಂಡಿಯಲ್ಲಿ ಕಂಡುಬಂದಿವೆ. ಇದನ್ನೂ ಓದಿ: ಹಾವೇರಿ | ಜಮೀನಿನಲ್ಲಿ ಚಿರತೆ ಅನುಮಾನಾಸ್ಪದ ಸಾವು