ಆಂಧ್ರದ ಕರಾವಳಿಗೆ ಅಪ್ಪಳಿಸಲಿದೆ ಅರ್ನಬ್ ಚಂಡಮಾರುತ; ರಾತ್ರಿ 2 ಗಂಟೆಗೆ ಭೂಕುಸಿತ ಸಾಧ್ಯತೆ
ಅಮರಾವತಿ: ಆಂಧ್ರಪ್ರದೇಶದ ಕರಾವಳಿಗೆ ಅರ್ನಬ್ ಚಂಡಮಾರುತ ಅಪ್ಪಳಿಸಲಿದೆ. ನಸುಕಿನ 2 ರಿಂದ ಮುಂಜಾನೆ 4 ಗಂಟೆಯೊಳಗೆ ಭೂಕುಸಿತ ಆಗುವ ಸಾಧ್ಯತೆ ಇದೆ. ಗಂಟೆಗೆ 135 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ. ಗಾಳಿಯ ವೇಗ ಗಂಟೆಗೆ 150 ಕಿ.ಮೀ. ವರೆಗೂ ಹೆಚ್ಚಳವಾಗುವ ಸಾಧ್ಯತೆಯಿದೆ. ಆಂಧ್ರ ಕರಾವಳಿಯಲ್ಲಿ ಭಾರಿ ಮಳೆಯ ಎಚ್ಚರಿಕೆ ನೀಡಲಾಗಿದೆ. ಯಾನಂ ಸಮೀಪ

ಅಮರಾವತಿ: ಆಂಧ್ರಪ್ರದೇಶದ ಕರಾವಳಿಗೆ ಅರ್ನಬ್ ಚಂಡಮಾರುತ ಅಪ್ಪಳಿಸಲಿದೆ. ನಸುಕಿನ 2 ರಿಂದ ಮುಂಜಾನೆ 4 ಗಂಟೆಯೊಳಗೆ ಭೂಕುಸಿತ ಆಗುವ ಸಾಧ್ಯತೆ ಇದೆ. ಗಂಟೆಗೆ 135 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ. ಗಾಳಿಯ ವೇಗ ಗಂಟೆಗೆ 150 ಕಿ.ಮೀ. ವರೆಗೂ ಹೆಚ್ಚಳವಾಗುವ ಸಾಧ್ಯತೆಯಿದೆ. ಆಂಧ್ರ ಕರಾವಳಿಯಲ್ಲಿ ಭಾರಿ ಮಳೆಯ ಎಚ್ಚರಿಕೆ ನೀಡಲಾಗಿದೆ. ಯಾನಂ ಸಮೀಪ ಚಂಡಮಾರುತ ಅಪ್ಪಳಿಸುವ ನಿರೀಕ್ಷೆಯಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಳವಾಗುವ ಸಾಧ್ಯತೆ ಇದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಅಪಾಯದ ಪ್ರದೇಶಗಳ ಜನರ ಸ್ಥಳಾಂತರಕ್ಕೆ ಕ್ರಮವಹಿಸಲಾಗಿದೆ. ಚಂಡಮಾರುತದ ಹಿನ್ನೆಲೆಯಲ್ಲಿ ರೈಲು ಸಂಚಾರಕ್ಕೆ ಹೊಡೆತ ಬೀಳಲಿದೆ. ರಕ್ಷಣಾ ಮತ್ತು ಪರಿಹಾರ ತಂಡಗಳು ಸನ್ನದ್ಧವಾಗಿವೆ. ಜನರು ಎಚ್ಚರಿಕೆಯಿಂದ ಇರುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಭಾರಿ ಮಳೆ ಹಿನ್ನೆಲೆ ಆಂಧ್ರಪ್ರದೇಶದಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
Read the complete story at Public TV Kannada