ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಬಿಜೆಪಿ ಸುರೇಶ್ಗೆ ಭರ್ಜರಿ ಗೆಲುವು – ನಾಲ್ಕೂ ಕ್ಷೇತ್ರ ಗೆದ್ದ ಎನ್ಡಿಎ
ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ(Karnataka Legislative Council) ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಅಭ್ಯರ್ಥಿ ಕೆ.ಎಂ. ಸುರೇಶ್(KM Suresh) ಭರ್ಜರಿ ಜಯಭೇರಿ ಬಾರಿಸಿದ್ದಾರೆ. ತೀವ್ರ ಕುತೂಹಲ ಕೆರಳಿಸಿದ್ದ ಈ ಹಣಾಹಣಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆ(Shashi Hulikunte) ಅವರನ್ನು ಬರೋಬ್ಬರಿ 23,098

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ(Karnataka Legislative Council) ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಅಭ್ಯರ್ಥಿ ಕೆ.ಎಂ. ಸುರೇಶ್(KM Suresh) ಭರ್ಜರಿ ಜಯಭೇರಿ ಬಾರಿಸಿದ್ದಾರೆ. ತೀವ್ರ ಕುತೂಹಲ ಕೆರಳಿಸಿದ್ದ ಈ ಹಣಾಹಣಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆ(Shashi Hulikunte) ಅವರನ್ನು ಬರೋಬ್ಬರಿ 23,098 ಮತಗಳ ಬೃಹತ್ ಅಂತರದಿಂದ ಪರಾಭವಗೊಳಿಸಿದರು. ಕೆ.ಎಂ. ಸುರೇಶ್ 66,020 ಮತ ಪಡೆದರೆ ಶಶಿ ಹುಲಿಕುಂಟೆ ಅವರಿಗೆ 42,922 ಮತಗಳು ಬಿದ್ದವು. 20,076 ಮತಗಳನ್ನು ತಿರಸ್ಕೃತಗೊಳಿಸಲಾಗಿದೆ. ಇದನ್ನೂ ಓದಿ: ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯ ಎಸ್.ವಿ. ಸಂಕನೂರಗೆ ಭರ್ಜರಿ ಗೆಲುವು; 3ನೇ ಬಾರಿಗೆ ಪ್ರವೇಶ ಬೆಂಗಳೂರಿನ ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ನಡೆದ ಮತ ಎಣಿಕೆಯ ಆರಂಭಿಕ ಸುತ್ತುಗಳಿಂದಲೇ ನಿರಂತರ ಮುನ್ನಡೆ ಕಾಯ್ದುಕೊಂಡಿದ್ದ ಕೆ.ಎಂ. ಸುರೇಶ್ ಅವರು ಅಂತಿಮವಾಗಿ ಸ್ಪಷ್ಟ ಬಹುಮತದೊಂದಿಗೆ ವಿಜಯಶಾಲಿಯಾದರು. ಈ ಬಾರಿಯ ಚುನಾವಣೆಯಲ್ಲಿ ಬರೋಬ್ಬರಿ 20,076 ಮತಗಳು ಅಸಿಂಧುಗೊಂಡಿರುವುದು ಗಮನಾರ್ಹವಾಗಿದೆ. ಎನ್ಡಿಎ ಅಭ್ಯರ್ಥಿಯ ಗೆಲುವು ಅಧಿಕೃತವಾಗುತ್ತಿದ್ದಂತೆ ಬಿಜೆಪಿ ಹಾಗೂ ಮೈತ್ರಿ ಪಕ್ಷದ ಕಾರ್ಯಕರ್ತರು ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು. ಇದನ್ನೂ ಓದಿ: MLC Elections Results: ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿಯ ಶಶೀಲ್ ನಮೋಶಿ ಜಯಭೇರಿ ಎನ್ಡಿಎಗೆ ಗೆಲುವು ಕಾಂಗ್ರೆಸ್ ಅಧಿಕಾರದಲ್ಲಿದ್ದರೂ 4 ಕ್ಷೇತ್ರಗಳಲ್ಲಿ ಎನ್ಡಿಎ ಅಭ್ಯರ್ಥಿಗಳು ಜಯ ಸಾಧಿಸಿದ್ದಾರೆ. ಪಶ್ಚಿಮ ಪದವೀಧರ ಕ್ಷೇತ್ರದಿಂದ ಬಿಜೆಪಿಯ ಎಸ್ವಿ ಸಂಕನೂರು, ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್ನ ಎಂ.ಪಿ.ರಂಗನಾಥ್, ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಶಶಿಲ್ ನಮೋಶಿ ಗೆಲುವಿನ ನಗೆ ಬೀರಿದ್ದಾರೆ.