ರಾಜಕೀಯ ಬದಲಾವಣೆಯ ಮುನ್ಸೂಚನೆ: ಶರವಣ
ಬೆಂಗಳೂರು: ‘ಪದವೀಧರರು ಮತ್ತು ಶಿಕ್ಷಕರ ಕ್ಷೇತ್ರಗಳಿಂದ ವಿಧಾನ ಪರಿಷತ್ತಿನ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗಳು ಜಯಭೇರಿ ಬಾರಿಸಿರುವುದು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಬೇರುಸಹಿತ ಕಿತ್ತುಹಾಕಬೇಕೆಂಬ ಜನರ ಸಂಕಲ್ಪದ ಸ್ಪಷ್ಟ ಸೂಚನೆಯಾಗಿದೆ’ ಎಂದು ವಿಧಾನ ಪರಿಷತ್ ಸದಸ್ಯ ಟಿ.ಎ. ಶರವಣ ಹೇಳಿದ್ದಾರೆ.‘ಈ ಚುನಾವ

ಬೆಂಗಳೂರು: ‘ಪದವೀಧರರು ಮತ್ತು ಶಿಕ್ಷಕರ ಕ್ಷೇತ್ರಗಳಿಂದ ವಿಧಾನ ಪರಿಷತ್ತಿನ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗಳು ಜಯಭೇರಿ ಬಾರಿಸಿರುವುದು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಬೇರುಸಹಿತ ಕಿತ್ತುಹಾಕಬೇಕೆಂಬ ಜನರ ಸಂಕಲ್ಪದ ಸ್ಪಷ್ಟ ಸೂಚನೆಯಾಗಿದೆ’ ಎಂದು ವಿಧಾನ ಪರಿಷತ್ ಸದಸ್ಯ ಟಿ.ಎ. ಶರವಣ ಹೇಳಿದ್ದಾರೆ.‘ಈ ಚುನಾವಣೆಯ ಫಲಿತಾಂಶ ನಾಲ್ಕು ಸ್ಥಾನಗಳ ಗೆಲುವಿಗೆ ಸೀಮಿತವಾಗಿಲ್ಲ. ಇದು ರಾಜ್ಯದ ರಾಜಕೀಯ ಭವಿಷ್ಯದ ದಿಕ್ಕನ್ನು ಸೂಚಿಸುವ ಮಹತ್ವದ ಫಲಿತಾಂಶವಾಗಿದ್ದು, ಮುಂಬರುವ ದಿನಗಳಲ್ಲಿ ಬಿಜೆಪಿ–ಜೆಡಿಎಸ್ ಮೈತ್ರಿಕೂಟ ರಾಜ್ಯದಲ್ಲಿ ಇನ್ನಷ್ಟು ಬಲಿಷ್ಠ ರಾಜಕೀಯ ಶಕ್ತಿಯಾಗಿ ಹೊರಹೊಮ್ಮಲಿದೆ ಎಂಬುದಕ್ಕೆ ಸ್ಪಷ್ಟ ಮುನ್ಸೂಚನೆ’ ಎಂದು ತಿಳಿಸಿದ್ದಾರೆ.‘ರಾಜ್ಯದಲ್ಲಿ ರಾಜಕೀಯ ಬದಲಾವಣೆಯ ಗಾಳಿ ಬೀಸುತ್ತಿದೆ ಎನ್ನುವುದಕ್ಕೆ ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಎದುರಾಗಿರುವ ಹಿನ್ನಡೆಯೇ ಸಾಕ್ಷಿಯಾಗಿದೆ. ಆಡಳಿತ ನಡೆಸುವ ಪಕ್ಷದ ಮೇಲಿನ ಜನರ ವಿಶ್ವಾಸ ಕುಸಿಯುತ್ತಿರುವುದನ್ನು ಈ ಫಲಿತಾಂಶ ಪ್ರತಿಬಿಂಬಿಸುತ್ತಿದ್ದು, ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ, ಜನವಿರೋಧಿ ನೀತಿಗಳು ಮತ್ತು ಆಡಳಿತಾತ್ಮಕ ವೈಫಲ್ಯಗಳ ಬಗ್ಗೆ ಮತದಾರರು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ’ ಎಂದು ಅಭಿಪ್ರಾಯಪಟ್ಟಿದ್ದಾರೆ.‘ಶಿಕ್ಷಕರು ಮತ್ತು ಪದವೀಧರರು ಸಮಾಜದ ಬೌದ್ಧಿಕ ಶಕ್ತಿಯಾಗಿದ್ದು, ಸಾರ್ವಜನಿಕ ವಿಚಾರಗಳಲ್ಲಿ ಅಭಿಪ್ರಾಯ ರೂಪಿಸುವ ಹಾಗೂ ಸಮಾಜಕ್ಕೆ ಮಾರ್ಗದರ್ಶನ ನೀಡುವ ಮಹತ್ವದ ವರ್ಗವಾಗಿದ್ದಾರೆ. ಇಂತಹ ಪ್ರಜ್ಞಾವಂತ ಮತದಾರರು ಎನ್ಡಿಎ ಅಭ್ಯರ್ಥಿಗಳಿಗೆ ಬೆಂಬಲ ನೀಡಿರುವುದು, ಕಾಂಗ್ರೆಸ್ ಸರ್ಕಾರದ ಆಡಳಿತದ ಬಗ್ಗೆ ಜನರಲ್ಲಿ ಅಸಮಾಧಾನ ಹೆಚ್ಚುತ್ತಿರುವುದಕ್ಕೆ ದಿಕ್ಸೂಚಿಯಾಗಿದೆ. ಈ ಫಲಿತಾಂಶವನ್ನು ಕಾಂಗ್ರೆಸ್ ಪಕ್ಷ ಗಂಭೀರವಾಗಿ ಪರಿಗಣಿಸಬೇಕಾಗಿದೆ’ ಎಂದು ಅವರು ಹೇಳಿದ್ದಾರೆ.