ಮೆಟ್ರೊ: ಯುವತಿಯ ವಿಡಿಯೊ ಸೆರೆ ಹಿಡಿದವನ ಪತ್ತೆಗೆ ಶೋಧ
ಬೆಂಗಳೂರು: ‘ನಮ್ಮ ಮೆಟ್ರೊ’ದಲ್ಲಿ ಪ್ರಯಾಣಿಸುತ್ತಿದ್ದ ಯುವತಿಯ ಅನುಮತಿಯಿಲ್ಲದೇ ರಹಸ್ಯವಾಗಿ ವಿಡಿಯೊ ಚಿತ್ರೀಕರಿಸಿದ್ದ ಯುವಕನ ವಿರುದ್ಧ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಯುವಕನ ಪತ್ತೆಗೆ ಪೊಲೀಸರು, ಶೋಧ ಕಾರ್ಯ ನಡೆಸುತ್ತಿದ್ದಾರೆ.ಅ.27ರಂದು ಕಾಡುಗೋಡಿ ಮೆಟ್ರೊ ನಿಲ್ದಾಣದಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ

ಬೆಂಗಳೂರು: ‘ನಮ್ಮ ಮೆಟ್ರೊ’ದಲ್ಲಿ ಪ್ರಯಾಣಿಸುತ್ತಿದ್ದ ಯುವತಿಯ ಅನುಮತಿಯಿಲ್ಲದೇ ರಹಸ್ಯವಾಗಿ ವಿಡಿಯೊ ಚಿತ್ರೀಕರಿಸಿದ್ದ ಯುವಕನ ವಿರುದ್ಧ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಯುವಕನ ಪತ್ತೆಗೆ ಪೊಲೀಸರು, ಶೋಧ ಕಾರ್ಯ ನಡೆಸುತ್ತಿದ್ದಾರೆ.ಅ.27ರಂದು ಕಾಡುಗೋಡಿ ಮೆಟ್ರೊ ನಿಲ್ದಾಣದಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಸೌಫಿಕಾ ಅವರು ಅ.27ರಂದು ಸಂಜೆ 5 ಗಂಟೆ ಸುಮಾರಿಗೆ ವೈಟ್ಫೀಲ್ಡ್–ಕಾಡುಗೋಡಿ ಬಳಿಯ ನಮ್ಮ ಮೆಟ್ರೊದಲ್ಲಿ ಪ್ರಯಾಣಿಸುತ್ತಿದ್ದರು. ಆಗ ಸಹ ಪ್ರಯಾಣಿಕನೊಬ್ಬ ರಹಸ್ಯವಾಗಿ ವಿಡಿಯೊ ಚಿತ್ರೀಕರಿಸಿದ್ದಾನೆ. ಅದನ್ನು ಗಮನಿಸಿದ್ದ ಯುವತಿ, ಮೊಬೈಲ್ ತೋರಿಸುವಂತೆ ಕೇಳಿದ್ದರು. ಆದರೆ, ಯುವಕ ಮೊಬೈಲ್ ನೀಡಲು ನಿರಾಕರಿಸಿದ್ದ. ಕೊನೆಗೆ ಮೊಬೈಲ್ ಕಸಿದುಕೊಳ್ಳಲು ಪ್ರಯತ್ನಿಸಿದ್ದರು. ಬಳಿಕ ಯುವಕ ಸ್ಥಳದಿಂದ ಪರಾರಿ ಆಗಿದ್ದಾನೆ ಎಂದು ಯುವತಿ ದೂರು ನೀಡಿದ್ದಾರೆ.ಮೆಟ್ರೊ ನಿಲ್ದಾಣದ ಭದ್ರತಾ ಸಿಬ್ಬಂದಿಗೆ ಆತನನ್ನು ಹಿಡಿದುಕೊಳ್ಳಲು ಕೋರಿಕೊಂಡೆ. ಆದರೆ, ಭದ್ರತಾ ಸಿಬ್ಬಂದಿ ಆ ಪ್ರಯತ್ನ ಮಾಡಲಿಲ್ಲ ಎಂದು ಯುವತಿ ಆರೋಪಿಸಿದ್ದಾರೆ.