ವಿಜಯಪುರ ಪುರಸಭೆಯಲ್ಲಿ 23 ಸ್ಥಾನ ಗೆಲ್ಲುವ ಸಂಕಲ್ಪ
ವಿಜಯಪುರ (ದೇವನಹಳ್ಳಿ): ‘ಮುಂಬರುವ ವಿಜಯಪುರ ಪುರಸಭೆ ಚುನಾವಣೆಯಲ್ಲಿ ಜೆಡಿಎಸ್ನಿಂದ 23 ಮಂದಿ ಸದಸ್ಯರನ್ನು ಗೆಲ್ಲಿಸಿಕೊಳ್ಳುವ ಸಂಕಲ್ಪ ಹೊಂದಿದ್ದು, ಇದಕ್ಕಾಗಿ ಈಗಿನಿಂದಲೇ ಪಕ್ಷದ ಮುಖಂಡರು, ಕಾರ್ಯಕರ್ತರು, ಶ್ರಮಿಸಲಿದ್ದಾರೆ’ ಎಂದು ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಹೇಳಿದರು.ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿ, ‘ಹಿಂದೆ ನಾನು ಶಾಸಕನಾಗಿದ್ದ

ವಿಜಯಪುರ (ದೇವನಹಳ್ಳಿ): ‘ಮುಂಬರುವ ವಿಜಯಪುರ ಪುರಸಭೆ ಚುನಾವಣೆಯಲ್ಲಿ ಜೆಡಿಎಸ್ನಿಂದ 23 ಮಂದಿ ಸದಸ್ಯರನ್ನು ಗೆಲ್ಲಿಸಿಕೊಳ್ಳುವ ಸಂಕಲ್ಪ ಹೊಂದಿದ್ದು, ಇದಕ್ಕಾಗಿ ಈಗಿನಿಂದಲೇ ಪಕ್ಷದ ಮುಖಂಡರು, ಕಾರ್ಯಕರ್ತರು, ಶ್ರಮಿಸಲಿದ್ದಾರೆ’ ಎಂದು ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಹೇಳಿದರು.ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿ, ‘ಹಿಂದೆ ನಾನು ಶಾಸಕನಾಗಿದ್ದ ಸಮಯದಲ್ಲಿ ಕ್ಷೇತ್ರದ ಪ್ರತಿಯೊಂದು ಹಳ್ಳಿಗೆ ಸುಮಾರು ₹3 ಕೋಟಿ ವೆಚ್ಚದ ಕಾಮಗಾರಿಗಳನ್ನು ನಡೆಸುವ ಮೂಲಕ ಹಳ್ಳಿಗಳ ಅಭಿವೃದ್ಧಿಗೆ ಆದ್ಯತೆ ನೀಡಿರುವೆ’ ಎಂದರು.‘2023 ರಲ್ಲಿ ಅವಧಿಯಲ್ಲಿ ಮತ್ತೆ ಶಾಸಕನಾಗಿ ಆಯ್ಕೆಗೊಂಡಿದ್ದರೆ ಕ್ಷೇತ್ರದ 298 ಹಳ್ಳಿಗಳನ್ನು ಅಭಿವೃದ್ಧಿಪಡಿಸಿ, ರಾಜ್ಯದಲ್ಲಿಯೇ ಮಾದರಿ ಮಾಡುತ್ತಿದೆ. ಈಗಿನ ಕ್ಷೇತ್ರದ ಅಭಿವೃದ್ಧಿ ಕುರಿತು ಜನರಿಗೆ ಅರಿವಿದೆ. ಮುಂದಿನ ಚುನಾವಣೆ ಎದುರಿಸಲು ಸಿದ್ಧನಾಗಿದ್ದು, ಜನರು ಅಭಿವೃದ್ಧಿಗೆ ಮನ್ನಣೆ ನೀಡಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.‘ಸಚಿವ ಕೆ.ಎಚ್.ಮುನಿಯಪ್ಪ ಅವರು ಹಿಂದೆ ಎರಡೂವರೆ ವರ್ಷ ಆಹಾರ ಸಚಿವರಾಗಿದ್ದಾಗ ಕ್ಷೇತ್ರದಲ್ಲಿ ಒಂದು ಹೊಸ ಪಡಿತರ ಚೀಟಿಯನ್ನು ಬಡವರಿಗೆ ವಿತರಿಸಿಲ್ಲ. ಬದಲಿಗೆ ಬಡವರು ಸಾಲವಾಗಿ ಖರೀದಿಸಿದ ಕಾರು, ಬೈಕ್ ಹೆಸರಿನಲ್ಲಿ ಪಡಿತರ ಚೀಟಿಗಳನ್ನು ರದ್ದುಗೊಳಿಸಿದರು’ ಎಂದು ಆರೋಪಿಸಿದರು.ರಾಜೀನಾಮೆಗೆ ಒತ್ತಾಯ: ‘ಹಿಂದೆ ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿದ್ದ ಎಚ್.ಸಿ.ಮಹದೇವಪ್ಪ ಅವರ ಅವಧಿಯಲ್ಲಿ ಎಸ್.ಸಿ.ಪಿ, ಟಿ.ಎಸ್.ಪಿ ಯೋಜನೆ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡಿರುವ ಕುರಿತು ಪ್ರಶ್ನೆ ಮಾಡುವಂತಹ ಧೈರ್ಯ ಸಚಿವರಿಗಿಲ್ಲ. ಈ ಅನುದಾನ ವಾಪಸ್ ತರಲು ಸಾಧ್ಯವಾಗದಿದ್ದರೆ ಈಗಿನ ಸಮಾಜ ಕಲ್ಯಾಣ ಸಚಿವ ಕೆ.ಎಚ್.ಮುನಿಯಪ್ಪ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ’ ಎಂದು ಒತ್ತಾಯಿಸಿದರು.261028-15-2047422416