ಪೋಕ್ಸೊ ಕಾಯ್ದೆ ಮಕ್ಕಳ ರಕ್ಷಣೆಗೆ ಕಠಿಣ ಕಾನೂನು: ನ್ಯಾಯಾಧೀಶ ಶಂಕರ್ ರೆಡ್ಡಿ
ಆನೇಕಲ್: ಮಕ್ಕಳ ಮೇಲೆ ನಡೆಯುವ ದೌರ್ಜನ್ಯ ತಡೆಯಲು ಪೋಕ್ಸೊ ಕಾಯ್ದೆಯು ಅತ್ಯಂತ ಉಪಯುಕ್ತವಾಗಿದ್ದು, ಮಕ್ಕಳ ರಕ್ಷಣೆಗಾಗಿ ಇರುವ ಕಠಿಣ ಕಾನೂನಾಗಿದೆ ಎಂದು ಪ್ರಧಾನ ಸಿವಿಲ್ ನ್ಯಾಯಾಲಯ ನ್ಯಾಯಾಧೀಶ ಶಂಕರ್ ರೆಡ್ಡಿ ಹೇಳಿದರು.ತಾಲ್ಲೂಕಿನ ಇಂಡ್ಲವಾಡಿಯ ಪಿನ್ಸ್ ಅಕಾಡೆಮಿಯಲ್ಲಿ ಬುಧವಾರ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ

ಆನೇಕಲ್: ಮಕ್ಕಳ ಮೇಲೆ ನಡೆಯುವ ದೌರ್ಜನ್ಯ ತಡೆಯಲು ಪೋಕ್ಸೊ ಕಾಯ್ದೆಯು ಅತ್ಯಂತ ಉಪಯುಕ್ತವಾಗಿದ್ದು, ಮಕ್ಕಳ ರಕ್ಷಣೆಗಾಗಿ ಇರುವ ಕಠಿಣ ಕಾನೂನಾಗಿದೆ ಎಂದು ಪ್ರಧಾನ ಸಿವಿಲ್ ನ್ಯಾಯಾಲಯ ನ್ಯಾಯಾಧೀಶ ಶಂಕರ್ ರೆಡ್ಡಿ ಹೇಳಿದರು.ತಾಲ್ಲೂಕಿನ ಇಂಡ್ಲವಾಡಿಯ ಪಿನ್ಸ್ ಅಕಾಡೆಮಿಯಲ್ಲಿ ಬುಧವಾರ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆಯಿಂದ ಆಯೋಜಿಸಿದ್ದ ಪೋಕ್ಸೊ ಕಾಯ್ದೆ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.ಮಕ್ಕಳ ಸಂರಕ್ಷಣೆ, ಸರ್ವತೋಮುಖ ಅಭಿವೃದ್ಧಿಗಾಗಿ ಭಾರತದಲ್ಲಿ ಹಲವು ಕಾನೂನುಗಳಿವೆ. ಮಕ್ಕಳ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸುವುದು ಶೈಕ್ಷಣಿಕ ಸಂಸ್ಥೆಗಳು ಮತ್ತು ಸಂಘಗಳ ಜವಾಬ್ದಾರಿಯಾಗಿದೆ ಎಂದರು.ಮಕ್ಕಳ ಸ್ನೇಹಿಯಾಗಿರುವ ಕಾನೂನುಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಬೇಕು. ಕಾನೂನಿನಡಿ ಮಕ್ಕಳ ಗೌಪ್ಯತೆ, ಗೌರವ ಕಾಪಾಡಲು ಹೆಚ್ಚು ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು. ಸಬ್ ಇನ್ಸ್ಪೆಕ್ಟರ್ ಸಿದ್ದನಗೌಡ, ಸಿಡಿಪಿಒ ಮಹೇಶ್, ವಕೀಲ ಪುರುಷೋತ್ತಮ್, ಸಿಆರ್ಪಿ ದಾಸಣ್ಣ, ಪ್ರಿನ್ಸ್ ಶಾಲೆಯ ಕಾರ್ಯದರ್ಶಿ ಆನಂದ್ ಉಪಸ್ಥಿತರಿದ್ದರು.5 ಸಾವಿರ ಪ್ರಕರಣ ದಾಖಲು2025ರಲ್ಲಿ ರಾಜ್ಯದಲ್ಲಿ 5 ಸಾವಿರಕ್ಕೂ ಹೆಚ್ಚು ಪೋಕ್ಸೋ ಪ್ರಕರಣಗಳು ದಾಖಲಾಗಿರುವುದು ಆತಂಕಕಾರಿಯಾಗಿದೆ. ಮಕ್ಕಳ ಮೇಲೆ ದೌರ್ಜನ್ಯ ನಡೆಯುವ ಸಂದರ್ಭದಲ್ಲಿ ಸಹಾಯವಾನಿ 1098, 112 ಗೆ ಕರೆ ಮಾಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಗುರುಮೂರ್ತಿ ತಿಳಿಸಿದರು.ಮಕ್ಕಳು ತಮ್ಮ ದಿನನಿತ್ಯ ಚಟುವಟಿಕೆಗಳು ಬಗ್ಗೆ ಪೋಷಕರಿಗೆ ಮಾಹಿತಿ ನೀಡಬೇಕು. ಸರಿ ಮತ್ತು ತಪ್ಪುಗಳ ಬಗ್ಗೆ ಅರ್ಥೈಸಿಕೊಳ್ಳಲು ಪೋಷಕರು ಅವಕಾಶ ನೀಡಬೇಕು. ಇದರಿಂದ ಮಕ್ಕಳ ಮೇಲಿನ ದೌರ್ಜನ್ಯ ತಡೆಬಹುದು ಎಂದರು.261029-15-931907654