ಗುಜರಾತ್: ಗೋಹತ್ಯೆ ಮಾಡಿದ್ದ ಮೂವರಿಗೆ ಜೀವಾವಧಿ ಶಿಕ್ಷೆ
ಗಾಂಧಿನಗರ: ಗೋಹತ್ಯೆ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಗುಜರಾತ್ನ ಗಾಂಧಿನಗರ ಜಿಲ್ಲೆಯ ನ್ಯಾಯಾಲಯವೊಂದು ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. 277 ಕೆ.ಜಿ ಗೋಮಾಂಸ ಸಾಗಾಟ ಮಾಡುತ್ತಿದ್ದಾಗ ಈ ಮೂವರು ಸಿಕ್ಕಿಬಿದ್ದಿದ್ದರು.ಗೋಹತ್ಯೆ ಮಾಡುವವರನ್ನು ಕಾನೂನು ಸುಮ್ಮನೆ ಬಿಡುವುದಿಲ್ಲ ಎಂಬ ಸ್ಪಷ್ಟ ಸಂದೇಶ ಇದಾಗಿದೆ ಎಂದು ಗುಜರಾತ್ ಉಪಮುಖ್ಯಮಂತ್ರಿ ಹರ್ಷ ಸಾಂಘ್ವಿ ಹೇಳಿದ

ಗಾಂಧಿನಗರ: ಗೋಹತ್ಯೆ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಗುಜರಾತ್ನ ಗಾಂಧಿನಗರ ಜಿಲ್ಲೆಯ ನ್ಯಾಯಾಲಯವೊಂದು ಮೂವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. 277 ಕೆ.ಜಿ ಗೋಮಾಂಸ ಸಾಗಾಟ ಮಾಡುತ್ತಿದ್ದಾಗ ಈ ಮೂವರು ಸಿಕ್ಕಿಬಿದ್ದಿದ್ದರು.ಗೋಹತ್ಯೆ ಮಾಡುವವರನ್ನು ಕಾನೂನು ಸುಮ್ಮನೆ ಬಿಡುವುದಿಲ್ಲ ಎಂಬ ಸ್ಪಷ್ಟ ಸಂದೇಶ ಇದಾಗಿದೆ ಎಂದು ಗುಜರಾತ್ ಉಪಮುಖ್ಯಮಂತ್ರಿ ಹರ್ಷ ಸಾಂಘ್ವಿ ಹೇಳಿದ್ದಾರೆ.ವಾಸಿಂ ಖುರೇಷಿ, ಮೊಹಮ್ಮದ್ ರಫಿಕ್ ಖುರೇಷಿ ಮತ್ತು ಅಸ್ಫಕ್ ಬಹೆಲಿಮ್ ಎಂಬುವವರಿಗೆ ಶಿಕ್ಷೆ ಪ್ರಕಟಿಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಬಿ.ಆರ್. ರಜಪೂತ್, ₹3 ಲಕ್ಷ ದಂಡವನ್ನೂ ವಿಧಿಸಿದ್ದಾರೆ.ಪ್ರಕಟಣೆ ವೇಳೆ, ಮನುಸ್ಮೃತಿಯನ್ನು ಉಲ್ಲೇಖಿಸಿದ ನ್ಯಾಯಾಧೀಶರು, ಗೋವು ಕೇವಲ ಒಂದು ಪ್ರಾಣಿಯಲ್ಲ. ಇದನ್ನು ಭೌತಿಕ ಸಮೃದ್ಧಿ ಮತ್ತು ಧರ್ಮದ ಒಂದು ಆಧಾರಸ್ತಂಭವೆಂದು ಪರಿಗಣಿಸಲಾಗುತ್ತದೆ ಎಂದು ಹೇಳಿದ್ದಾರೆ.
Read the complete story at Prajavani