ಕಾಯ್ದೆ ರದ್ದುಗೊಳಿಸಿದ ಸುಪ್ರೀಂ ಕೋರ್ಟ್: 362 KAS ಅಧಿಕಾರಿಗಳ ಹುದ್ದೆಗೆ ಕುತ್ತು
ನವದೆಹಲಿ: 2011ನೇ ಸಾಲಿನ 362 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಊರ್ಜಿತಗೊಳಿಸಲು ಕರ್ನಾಟಕ ಸರ್ಕಾರ 2022ರಲ್ಲಿ ಜಾರಿಗೆ ತಂದಿದ್ದ ಕಾಯ್ದೆಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.ಹೀಗಾಗಿ 362 ಕೆಎಎಸ್ ಅಧಿಕಾರಿಗಳ ಹುದ್ದೆಗೆ ಕುತ್ತು ಉಂಟಾಗಿದೆ.ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಮತ್ತು ವಿನೋದ್ ಚಂದ್ರನ್ ಅವರನ್ನೊಳಗೊಂಡ ಪೀ

ನವದೆಹಲಿ: 2011ನೇ ಸಾಲಿನ 362 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಊರ್ಜಿತಗೊಳಿಸಲು ಕರ್ನಾಟಕ ಸರ್ಕಾರ 2022ರಲ್ಲಿ ಜಾರಿಗೆ ತಂದಿದ್ದ ಕಾಯ್ದೆಯನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ.ಹೀಗಾಗಿ 362 ಕೆಎಎಸ್ ಅಧಿಕಾರಿಗಳ ಹುದ್ದೆಗೆ ಕುತ್ತು ಉಂಟಾಗಿದೆ.ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಮತ್ತು ವಿನೋದ್ ಚಂದ್ರನ್ ಅವರನ್ನೊಳಗೊಂಡ ಪೀಠವು ಈ ಸಂಬಂಧ ಗುರುವಾರ ತೀರ್ಪು ಪ್ರಕಟಿಸಿದೆ. ಕಾಯ್ದೆಯನ್ನು ಎತ್ತಿಹಿಡಿದಿದ್ದ ಕರ್ನಾಟಕ ಹೈಕೋರ್ಟ್ನ ಆದೇಶವನ್ನು ಪ್ರಶ್ನಿಸಿ ಶ್ರೀನಿವಾಸ ಟಿ. ಮತ್ತು ಇತರರು ಸಲ್ಲಿಸಿದ್ದ ವಿಶೇಷ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಪೀಠವು ತೀರ್ಪು ಕಾಯ್ದಿರಿಸಿತ್ತು.ಅಕ್ರಮಗಳ ಆರೋಪದಲ್ಲಿ ರದ್ದಾಗಿದ್ದ ನೇಮಕಾತಿಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್ಸಿ) 2011ರ ನವೆಂಬರ್ನಲ್ಲಿ ಗ್ರೂಪ್ ಎ ಮತ್ತು ಬಿ ವೃಂದದ 362 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿತ್ತು. ಪರೀಕ್ಷೆಗಳನ್ನು ನಡೆಸಿ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಿದ ಬಳಿಕ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂಬ ಆರೋಪ ಕೇಳಿಬಂದಿತ್ತು.ಈ ಕುರಿತು ಅಭ್ಯರ್ಥಿಯೊಬ್ಬರು ಅಂದಿನ ಅಡ್ವೊಕೇಟ್ ಜನರಲ್ಗೆ ದೂರು ನೀಡಿದ್ದರು. ಅವರ ಶಿಫಾರಸಿನ ಮೇರೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿತ್ತು. 2014ರ ಜೂನ್ 27ರಂದು ಅಂದಿನ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ಪ್ರಕರಣದ ತನಿಖೆಯನ್ನು ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ವಹಿಸಿತ್ತು.ಸಿಐಡಿ ತನಿಖೆಯ ಮಧ್ಯಂತರ ವರದಿಯ ಆಧಾರದಲ್ಲಿ ಸರ್ಕಾರ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಿತ್ತು. ಇದನ್ನು ಪ್ರಶ್ನಿಸಿ ಕೆಲವು ಅಭ್ಯರ್ಥಿಗಳು ಕರ್ನಾಟಕ ಆಡಳಿತ ನ್ಯಾಯಮಂಡಳಿಯ (ಕೆಎಟಿ) ಮೊರೆ ಹೋಗಿದ್ದರು. ಅಭ್ಯರ್ಥಿಗಳ ಪರವಾಗಿ ತೀರ್ಪು ನೀಡಿದ್ದ ಕೆಎಟಿ, ಆಯ್ಕೆಯಾದವರಿಗೆ ನೇಮಕಾತಿ ಪತ್ರ ನೀಡುವಂತೆ ಸರ್ಕಾರಕ್ಕೆ ಸೂಚಿಸಿತ್ತು.ಆದರೆ, ಕೆಎಟಿಯ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿತ್ತು. ಹೈಕೋರ್ಟ್ನ ತೀರ್ಪನ್ನು ಸುಪ್ರೀಂ ಕೋರ್ಟ್ ಕೂಡ ಎತ್ತಿಹಿಡಿದಿತ್ತು.ಕಾಯ್ದೆ ತಂದು ಆಯ್ಕೆ ಪಟ್ಟಿಗೆ ಮಾನ್ಯತೆನ್ಯಾಯಾಲಯಗಳ ತೀರ್ಪಿನ ಬಳಿಕವೂ ಆಯ್ಕೆ ಪಟ್ಟಿಯ ಭವಿಷ್ಯ ಅನಿಶ್ಚಿತವಾಗಿಯೇ ಉಳಿದಿತ್ತು. ಈ ಹಿನ್ನೆಲೆಯಲ್ಲಿ, 362 ಅಭ್ಯರ್ಥಿಗಳ ಆಯ್ಕೆ ಮತ್ತು ನೇಮಕಾತಿಯನ್ನು ಊರ್ಜಿತಗೊಳಿಸಲು ಕರ್ನಾಟಕ ಸರ್ಕಾರವು 2022ರಲ್ಲಿ ‘ಕರ್ನಾಟಕ ಸಿವಿಲ್ ಸೇವೆಗಳ (2011ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಗಳ ಆಯ್ಕೆ ಮತ್ತು ನೇಮಕಾತಿಯ ಸಿಂಧುಗೊಳಿಸುವಿಕೆ) ಕಾಯ್ದೆ’ ಜಾರಿಗೆ ತಂದಿತ್ತು.ಈ ಕಾಯ್ದೆಯ ಸಿಂಧುತ್ವವನ್ನು ಪ್ರಶ್ನಿಸಿ ಶ್ರೀನಿವಾಸ ಟಿ. ಮತ್ತು ಇತರರು ನ್ಯಾಯಾಲಯದ ಮೊರೆ ಹೋಗಿದ್ದರು. ಕಾಯ್ದೆಯನ್ನು ಪ್ರಶ್ನಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಇದರಿಂದ ಅರ್ಜಿದಾರರು ಸುಪ್ರೀಂ ಕೋರ್ಟ್ನಲ್ಲಿ ವಿಶೇಷ ಮೇಲ್ಮನವಿ ಸಲ್ಲಿಸಿದ್ದರು.