ಕರ್ನಾಟಕದಲ್ಲಿ SIR ಪ್ರಕ್ರಿಯೆ ಸಮರ್ಪಕವಾಗಿ ನಡೆದಿದೆ: ಸತೀಶ್ ಜಾರಕಿಹೊಳಿ
ಬೆಂಗಳೂರು: ಕರ್ನಾಟಕದಲ್ಲಿ ಎಸ್ಐಆರ್ (SIR) ಪ್ರಕ್ರಿಯೆ ಸಮರ್ಪಕವಾಗಿ ನಡೆದಿದೆ, ಇತರ ರಾಜ್ಯಗಳಲ್ಲಿಯೂ ಇದೇ ರೀತಿಯಲ್ಲಿ ಆಗಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ (Karnataka) ಎಸ್ಐಆರ್ ಪ್ರಕ್ರಿಯೆ ಸಮರ್ಪಕವಾಗಿ ನಡೆದಿದೆ. ಆದರೆ ನಮ್ಮ ಆಕ್ಷೇಪ ಇರೋದು ಬೇರೆ ರಾಜ್ಯಗಳ ಬಗ್ಗೆ

ಬೆಂಗಳೂರು: ಕರ್ನಾಟಕದಲ್ಲಿ ಎಸ್ಐಆರ್ (SIR) ಪ್ರಕ್ರಿಯೆ ಸಮರ್ಪಕವಾಗಿ ನಡೆದಿದೆ, ಇತರ ರಾಜ್ಯಗಳಲ್ಲಿಯೂ ಇದೇ ರೀತಿಯಲ್ಲಿ ಆಗಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ (Karnataka) ಎಸ್ಐಆರ್ ಪ್ರಕ್ರಿಯೆ ಸಮರ್ಪಕವಾಗಿ ನಡೆದಿದೆ. ಆದರೆ ನಮ್ಮ ಆಕ್ಷೇಪ ಇರೋದು ಬೇರೆ ರಾಜ್ಯಗಳ ಬಗ್ಗೆ. ಇತರ ರಾಜ್ಯಗಳಲ್ಲಿಯೂ ಇದೇ ರೀತಿಯಲ್ಲಿ ಪ್ರಕ್ರಿಯೆ ನಡೆಯಬೇಕು ಎಂಬುದು ನಮ್ಮ ಆಶಯ ಎಂದಿದ್ದಾರೆ. ಇದನ್ನೂ ಓದಿ: ನವೆಂಬರ್ ಮೊದಲ ವಾರದಲ್ಲಿ ಬಸ್ ಪ್ರಯಾಣ ದರ ಏರಿಕೆಗೆ ನಿರ್ಧಾರ: ಬೈರತಿ ಸುರೇಶ್ ಶಿಫ್ಟ್ ಆಗಿದ್ದವರು ಇದ್ದಾರೆ, ಸತ್ತವರು ಇದ್ದಾರೆ. ಎರಡು ಹೆಸರು ಇದ್ದವರು ಇದ್ದಾರೆ. ದೊಡ್ಡ ಪ್ರಮಾಣದಲ್ಲಿ ಹೆಸರು ತೆಗೆದು ಹಾಕಿರುವುದು ಸಮರ್ಥನೀಯ. ಕರ್ನಾಟಕದಲ್ಲಿ ನಡೆದ ಎಸ್ಐಆರ್ ಪ್ರಕ್ರಿಯೆಯನ್ನು ನಾವು ವಿರೋಧಿಸಿಲ್ಲ. ಪಶ್ಚಿಮ ಬಂಗಾಳ, ಮಹಾರಾಷ್ಟ್ರ, ಬಿಹಾರದಲ್ಲಿ ನಡೆದ ಎಸ್ಐಆರ್ ಪ್ರಕ್ರಿಯೆಗೆ ಆಕ್ಷೇಪವಿದೆ. ನಾವು ನಡೆಸಿದ ಪ್ರತಿಭಟನೆಗಳು, ನೀಡಿದ ತರಬೇತಿ ಪರಿಣಾಮವಾಗಿ ಕರ್ನಾಟಕದಲ್ಲಿ ಎಸ್ಐಆರ್ ಪ್ರಕ್ರಿಯೆ ಸಮರ್ಪಕವಾಗಿದೆ ಎಂದು ತಿಳಿಸಿದ್ದಾರೆ.