ಡ್ರಾಪ್ ಕೊಡುವ ನೆಪದಲ್ಲಿ ಲೈಂಗಿಕ ದೌರ್ಜನ್ಯ – ಟಿವಿಕೆ ಮುಖಂಡ ಕ್ರಿಸ್ಟೋಫರ್ ಅರೆಸ್ಟ್
ಚೆನ್ನೈ: ಮಳೆಯಲ್ಲಿ ಡ್ರಾಪ್ ಕೊಡುವ ನೆಪದಲ್ಲಿ ಕಾರು ಹತ್ತಿಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಮುಖಂಡ ಕ್ರಿಸ್ಟೋಫರ್ (Christopher) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ಟೋಬರ್ ತಿಂಗಳ ಆರಂಭದಲ್ಲಿ ಎರಡನೇ ವರ್ಷದ ಸ್ನಾತಕೋತ್ತರ ಪದವಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬರು ಕ್ರಿಸ್ಟೋಫರ್ ಅವರ ವಿರುದ್ಧ ದಾಖಲಿಸಿ

ಚೆನ್ನೈ: ಮಳೆಯಲ್ಲಿ ಡ್ರಾಪ್ ಕೊಡುವ ನೆಪದಲ್ಲಿ ಕಾರು ಹತ್ತಿಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಮುಖಂಡ ಕ್ರಿಸ್ಟೋಫರ್ (Christopher) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ಟೋಬರ್ ತಿಂಗಳ ಆರಂಭದಲ್ಲಿ ಎರಡನೇ ವರ್ಷದ ಸ್ನಾತಕೋತ್ತರ ಪದವಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬರು ಕ್ರಿಸ್ಟೋಫರ್ ಅವರ ವಿರುದ್ಧ ದಾಖಲಿಸಿದ್ದರು. ದೂರು ದಾಖಲಾದ ಬಳಿಕ ಕ್ರಿಸ್ಟೋಫರ್ ಪರಾರಿಯಾಗಿದ್ದರು. ಇದೀಗ ಪೊಲೀಸರು ಅವರನ್ನು ಕನ್ಯಾಕುಮಾರಿಯಲ್ಲಿ (Kanyakumari) ಬಂಧಿಸಿದ್ದಾರೆ. ಇದನ್ನೂ ಓದಿ: ನವೆಂಬರ್ ಮೊದಲ ವಾರದಲ್ಲಿ ಬಸ್ ಪ್ರಯಾಣ ದರ ಏರಿಕೆಗೆ ನಿರ್ಧಾರ: ಬೈರತಿ ಸುರೇಶ್ ದೂರಿನಲ್ಲಿ ಏನಿದೆ? ಘಟನೆ ನಡೆದ ದಿನ ಸಂತ್ರಸ್ತ ಯುವತಿ ಹಾಗೂ ಆಕೆಯ ಸ್ನೇಹಿತೆ ಕಾಲೇಜು ಮುಗಿದ ಬಳಿಕ ಬಸ್ಗಾಗಿ ಕಾಯುತ್ತಿದ್ದರು. ಈ ವೇಳೆ ಅದೇ ರಸ್ತೆಯಲ್ಲಿ ಹೋಗುತ್ತಿದ್ದ ಕ್ರಿಸ್ಟೋಫರ್ ತಮ್ಮ ಕಾರನ್ನು ನಿಲ್ಲಿಸಿ ಲಿಫ್ಟ್ ಕೊಡುವುದಾಗಿ ತಿಳಿಸಿದ್ದರು. ಆ ಸಮಯದಲ್ಲಿ ಮಳೆ ಬರುತ್ತಿದ್ದ ಕಾರಣ ಇಬ್ಬರೂ ಯುವತಿಯರು ಒಪ್ಪಿಕೊಂಡು ಕಾರು ಹತ್ತಿದ್ದರು. ಬಳಿಕ ಸಂತ್ರಸ್ತೆಯ ಸ್ನೇಹಿತೆಯನ್ನು ಡ್ರಾಫ್ ಮಾಡಿ, ನಾನು ಕೂಡ ಕುಲಶೇಖರಂ ಕಡೆಗೆ ಹೊರಟಿದ್ದೇನೆ. ಅಲ್ಲಿಯವರೆಗೆ ಬಿಡುತ್ತೇನೆ ಎಂದು ಹೇಳಿ ಸಂತ್ರಸ್ತೆಯನ್ನು ಕರೆದುಕೊಂಡು ಹೋದರು. ದಾರಿಯಲ್ಲಿ ಟಿವಿಕೆ ಮುಖಂಡ ಕಾರನ್ನು ನಿಲ್ಲಿಸಿ, ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಸ್ಥಳದಿಂದ ಪರಾರಿಯಾಗಿದ್ದಾರೆ. ನಂತರ ವಿದ್ಯಾರ್ಥಿನಿ ಈ ಘಟನೆಯನ್ನು ಪೋಷಕರಿಗೆ ತಿಳಿಸಿದ್ದು, ಇದರ ಬೆನ್ನಲ್ಲೇ ದೂರು ದಾಖಲಿಸಲಾಗಿದೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿ, ಆರೋಪಿ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ಈ ಘಟನೆಯಿಂದಾಗಿ ಟಿವಿಕೆ ಪಕ್ಷವು ಡಿಎಂಕೆ ಮತ್ತು ಎಐಎಡಿಎಂಕೆ ಕಡೆಯಿಂದ ತೀವ್ರ ಟೀಕೆಗೆ ಗುರಿಯಾಗಿದ್ದು, ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರನ್ನು ತರಾಟೆಗೆ ತೆಗೆದುಕೊಂಡು, ಕ್ರಮಕ್ಕೆ ಆಗ್ರಹಿಸಿವೆ.ಇದನ್ನೂ ಓದಿ:ದಾಂಡೇಲಿ ಕಾಳಿ ನದಿಯಲ್ಲಿ ಏರಿಕೆ ಕಂಡ ಮೊಸಳೆಗಳು; ಜಲಸಾಹಸ ಕ್ರೀಡೆಗೆ ಬರುವ ಪ್ರವಾಸಿಗರಿಗೆ ಎಚ್ಚರಿಕೆ