ರಾಜ್ಯದ ಮನೆಮನೆಗೂ ‘ಸಫಲ್’ ತಲುಪಲಿ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್
ಬೆಂಗಳೂರು: ‘ಖಾಸಗಿ ಕಂಪನಿಗಳಿಗೆ ಪೈಪೋಟಿ ನೀಡುವ ರೀತಿಯಲ್ಲಿ ಸಹಕಾರಿ ಸಂಸ್ಥೆಗಳು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು. ನಂದಿನಿ, ಮೈಸೂರು ಸ್ಯಾಂಡಲ್ನಂತೆ ಸಫಲ್ ಕೂಡ ಜನರ ವಿಶ್ವಾಸಗಳಿಸಬೇಕು. ಕರ್ನಾಟಕದ ಮನೆಗಳಲ್ಲಷ್ಟೇ ಅಲ್ಲದೆ, ಹೊರರಾಜ್ಯಗಳಲ್ಲಿಯೂ ಈ ಬ್ರ್ಯಾಂಡ್ ಗೆ ಬೇಡಿಕೆ ಹೆಚ್ಚಬೇಕು’ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.ನಗರದಲ್ಲಿ ಗುರುವ

ಬೆಂಗಳೂರು: ‘ಖಾಸಗಿ ಕಂಪನಿಗಳಿಗೆ ಪೈಪೋಟಿ ನೀಡುವ ರೀತಿಯಲ್ಲಿ ಸಹಕಾರಿ ಸಂಸ್ಥೆಗಳು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು. ನಂದಿನಿ, ಮೈಸೂರು ಸ್ಯಾಂಡಲ್ನಂತೆ ಸಫಲ್ ಕೂಡ ಜನರ ವಿಶ್ವಾಸಗಳಿಸಬೇಕು. ಕರ್ನಾಟಕದ ಮನೆಗಳಲ್ಲಷ್ಟೇ ಅಲ್ಲದೆ, ಹೊರರಾಜ್ಯಗಳಲ್ಲಿಯೂ ಈ ಬ್ರ್ಯಾಂಡ್ ಗೆ ಬೇಡಿಕೆ ಹೆಚ್ಚಬೇಕು’ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.ನಗರದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಸಫಲ್ನ ನೂತನ ಲೋಗೊ ಮತ್ತು ವಿವಿಧ ಉತ್ಪನ್ನಗಳ ಹೊಸ ವಿನ್ಯಾಸದ ಪ್ಯಾಕೆಟ್ಗಳನ್ನು ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು.‘ಸಫಲ್ ಅನ್ನು 1984ರಲ್ಲಿ ಆರಂಭಿಸಲಾಗಿತ್ತು. ಈಗ ಆ ಬ್ರ್ಯಾಂಡ್ಗೆ ಹೊಸರೂಪ ನೀಡಲಾಗುತ್ತಿದೆ. ರೈತರು ಬೆಳೆದ ಎಣ್ಣೆಕಾಳುಗಳಿಗೆ ಉತ್ತಮ ಮಾರುಕಟ್ಟೆ ಒದಗಿಸುವ ಜತೆಗೆ, ಗುಣಮಟ್ಟದ ಉತ್ಪನ್ನಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಗ್ರಾಹಕರ ಮನೆಗಳಿಗೆ ತಲುಪಿಸುವ ಉದ್ದೇಶದಿಂದ ‘ಸಫಲ್’ ಬ್ರ್ಯಾಂಡ್ಗೆ ಹೊಸ ರೂಪ ನೀಡಲಾಗಿದೆ’ ಎಂದರು.‘ಇಂದಿನ ದಿನಗಳಲ್ಲಿ ಗ್ರಾಹಕರು ಆನ್ಲೈನ್ ಮೂಲಕವೇ ಅನೇಕ ಉತ್ಪನ್ನಗಳನ್ನು ಖರೀದಿಸುತ್ತಿದ್ದಾರೆ. ಇಂತಹ ಅವಕಾಶವನ್ನು ಬಳಸಿಕೊಂಡು ಸಫಲ್ ಉತ್ಪನ್ನಗಳನ್ನು ರಾಜ್ಯದ ಪ್ರತಿಯೊಂದು ಮನೆಗೂ ತಲುಪಿಸುವ ಪ್ರಯತ್ನವಾಗಬೇಕು. ರೈತರ ಸಹಕಾರ ಸಂಸ್ಥೆಗಳು ಉತ್ಪಾದನೆಗೆ ಮಾತ್ರ ಸೀಮಿತವಾಗದೆ, ಮಾರುಕಟ್ಟೆ ವಿಸ್ತರಣೆ ಮತ್ತು ಗ್ರಾಹಕರ ವಿಶ್ವಾಸ ಗಳಿಸುವತ್ತಲೂ ಗಮನಹರಿಸಬೇಕು’ ಎಂದು ಸಲಹೆ ನೀಡಿದರು.‘ಕರ್ನಾಟಕವು ದೇಶದಲ್ಲಿ ಹೆಚ್ಚಿನ ಕೃಷಿ ಭೂಮಿ ಹೊಂದಿರುವ ಪ್ರಮುಖ ರಾಜ್ಯಗಳಲ್ಲಿ ಒಂದು. ರಾಜ್ಯದಲ್ಲಿ ಕಡಲೆಕಾಯಿ, ಸೂರ್ಯಕಾಂತಿ ಸೇರಿದಂತೆ ವಿವಿಧ ಎಣ್ಣೆಕಾಳುಗಳನ್ನು ಬೆಳೆಯಲಾಗುತ್ತಿದೆ. ತೆಂಗು ಕೂಡ ಪ್ರಮುಖ ಖಾದ್ಯ ತೈಲ ಉತ್ಪಾದಕ ಬೆಳೆ. ಇಂತಹ ಬೆಳೆಗಳಿಗೆ ಮೌಲ್ಯವರ್ಧನೆ ಮಾಡುವ ಮೂಲಕ ಉತ್ತಮ ಮಾರುಕಟ್ಟೆ ಕಲ್ಪಿಸಬೇಕಿದೆ. ಸಫಲ್ ಅಂತಹ ಕೆಲಸ ಮಾಡುತ್ತಿದೆ’ ಎಂದರು.‘ಸಹಕಾರ ಸಂಸ್ಥೆಗಳು ರೈತರ ಬೆನ್ನೆಲುಬಾಗಿವೆ. ಖಾಸಗಿ ಬ್ಯಾಂಕುಗಳು ಸಾಲ ನೀಡಲು ಹಿಂದೇಟು ಹಾಕುತ್ತಿದ್ದ ಸಂದರ್ಭಗಳಲ್ಲಿ ಸಹಕಾರಿ ಬ್ಯಾಂಕುಗಳು ಸಕ್ಕರೆ ಕಾರ್ಖಾನೆಗಳಿಗೆ ಸೇರಿ ಹಲವು ಸಂಸ್ಥೆಗಳಿಗೆ ನೆರವಾಗಿವೆ. ಇಂತಹ ಸಂಸ್ಥೆಗಳನ್ನು ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ. ರಾಜ್ಯ ಸರ್ಕಾರ ರೈತರಿಗೆ ನೆರವಾಗಲು ವಿದ್ಯುತ್ ಸಹಾಯಧನಕ್ಕೆ ಸುಮಾರು ₹30,000 ಕೋಟಿ ವೆಚ್ಚ ಮಾಡುತ್ತಿದೆ. ನೀರಾವರಿ ಮತ್ತು ಕೃಷಿಗೆ ಅಗತ್ಯವಾದ ನೆರವು ನೀಡುವ ಮೂಲಕ ರೈತರ ಬದುಕನ್ನು ಸುಧಾರಿಸಲು ಪ್ರಯತ್ನಿಸುತ್ತಿದೆ’ ಎಂದರು.