ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸುರಕ್ಷತೆ: ಭೂ ಸ್ವಾಧೀನ ಪ್ರಕ್ರಿಯೆಗೆ ಅಸ್ತು
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಸುರಕ್ಷತೆ, ವಿಸ್ತರಣೆ ಮತ್ತು ಸಿಬ್ಬಂದಿ ವಸತಿ ಗೃಹಗಳ ನಿರ್ಮಾಣಕ್ಕಾಗಿ ನಡೆಸಲಾಗಿರುವ ಭೂ ಸ್ವಾಧೀನ ಪ್ರಕ್ರಿಯೆಯನ್ನು ಹೈಕೋರ್ಟ್ ದ್ವಿಸದಸ್ಯ ನ್ಯಾಯಪೀಠ ಎತ್ತಿ ಹಿಡಿದಿದೆ.ಏಕಸದಸ್ಯ ನ್ಯಾಯಪೀಠದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ರಿಟ್ ಮೇಲ್ಮನವಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಡಿ.ಕೆ.ಸಿಂಗ್

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಸುರಕ್ಷತೆ, ವಿಸ್ತರಣೆ ಮತ್ತು ಸಿಬ್ಬಂದಿ ವಸತಿ ಗೃಹಗಳ ನಿರ್ಮಾಣಕ್ಕಾಗಿ ನಡೆಸಲಾಗಿರುವ ಭೂ ಸ್ವಾಧೀನ ಪ್ರಕ್ರಿಯೆಯನ್ನು ಹೈಕೋರ್ಟ್ ದ್ವಿಸದಸ್ಯ ನ್ಯಾಯಪೀಠ ಎತ್ತಿ ಹಿಡಿದಿದೆ.ಏಕಸದಸ್ಯ ನ್ಯಾಯಪೀಠದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ರಿಟ್ ಮೇಲ್ಮನವಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಡಿ.ಕೆ.ಸಿಂಗ್ ಹಾಗೂ ನ್ಯಾಯಮೂರ್ತಿ ಎಚ್.ಶಾಂತಿಭೂಷಣ್ ಅವರನ್ನು ಒಳಗೊಂಡ ದ್ವಿಸದಸ್ಯ ನ್ಯಾಯಪೀಠ ಈ ಕುರಿತಂತೆ ಆದೇಶಿಸಿದೆ.‘ದೇವನಹಳ್ಳಿಯಲ್ಲಿ ಜೈಲಿಗಾಗಿ ಪರ್ಯಾಯ ಜಮೀನು ಲಭ್ಯವಿದೆ’ ಎಂಬ ಪ್ರತಿವಾದಿ ಭೂಮಾಲೀಕರ ವಾದಾಂಶವನ್ನು ತಿರಸ್ಕರಿಸಿರುವ ನ್ಯಾಯಪೀಠ, ‘ಪರಪ್ಪನ ಅಗ್ರಹಾರ ಜೈಲಿನಲ್ಲಿ ಐದು ಸಾವಿರಕ್ಕೂ ಹೆಚ್ಚು ಕೈದಿಗಳಿದ್ದು, ಜೈಲಿನ ಸುತ್ತಲೂ ಬಹುಮಹಡಿ ಕಟ್ಟಡಗಳು ನಿರ್ಮಾಣಗೊಂಡರೆ ಭದ್ರತೆಗೆ ಬೆದರಿಕೆ ಉಂಟಾಗಲಿದೆ’ ಎಂಬ ಸರ್ಕಾರದ ವಾದವನ್ನು ಪುರಸ್ಕರಿಸಿದೆ.‘ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಸಾರ್ವಜನಿಕ ಉದ್ದೇಶಕ್ಕಾಗಿ ಕಾರ್ಯ ನಿರ್ವಹಿಸುತ್ತಿದೆ. ಕೈದಿಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜೈಲುಗಳ ವಿಸ್ತರಣೆ, ಕಟ್ಟುನಿಟ್ಟಿನ ಭದ್ರತೆ, ಕೈದಿಗಳ ಸುಧಾರಣೆ ಹಾಗೂ ಜೈಲು ಸಿಬ್ಬಂದಿಗೆ ವಸತಿ ಸೌಕರ್ಯ ಒದಗಿಸುವುದು ರಾಜ್ಯ ಸರ್ಕಾರದ ಸಾಂವಿಧಾನಿಕ ಹೊಣೆಗಾರಿಕೆಯಾಗಿದೆ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿದೆ.‘ಸ್ವಾಧೀನಕ್ಕೆ ಪಡೆದಿರುವ ಜಮೀನುಗಳಲ್ಲಿ ಈಗಾಗಲೇ ನಿರ್ಮಿಸಲಾಗಿರುವ ಆರ್ಸಿಸಿ ಕಟ್ಟಡಗಳು, ವಸತಿ ಲೇ ಔಟ್ಗಳು, ಎಂಜಿನಿಯರಿಂಗ್ ವರ್ಕ್ ಶಾಪ್ಗಳು ಹಾಗೂ ಅಭಿವೃದ್ಧಿಪಡಿಸಿದ ನಿವೇಶನಗಳ ಕುರಿತು ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ರಾಜ್ಯ ಸರ್ಕಾರ ಮತ್ತು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶಿಸಿದೆ.– ನ್ಯಾ.ಡಿ.ಕೆ.ಸಿಂಗ್ & ನ್ಯಾ.ಎಚ್.ಶಾಂತಿಭೂಷಣ್ಆಧುನಿಕ ದಂಡನೀಯ ಶಾಸ್ತ್ರದಡಿ ವಿಧಿಸಲಾಗುವ ಸೆರೆವಾಸ ಕೇವಲ ಪ್ರತೀಕಾರಕ್ಕೆ ಸೀಮಿತವಾಗಿಲ್ಲ. ಇದು ಅಪರಾಧಿಗಳ ಸುಧಾರಣೆ ಮತ್ತು ಪುನರ್ವಸತಿಗೆ ಅನುಕೂಲಕರವಾದ ಪರಿಸ್ಥಿತಿಗಳನ್ನು ಸೃಷ್ಟಿಸುವ ಉದ್ದೇಶವನ್ನೂ ಒಳಗೊಂಡಿದೆ. 19 ಎಕರೆ 18 ಗುಂಟೆ ಸ್ವಾಧೀನ ಪ್ರಕ್ರಿಯೆಪರಪ್ಪನ ಅಗ್ರಹಾರ ಜೈಲಿನ ವಿಸ್ತರಣೆ ಮತ್ತು ಭದ್ರತೆಗಾಗಿ ಅದರ ಸುತ್ತಲಿನ 200 ಮೀಟರ್ ವ್ಯಾಪ್ತಿಯ ‘ಬಫರ್ ಝೋನ್’ (ಸುರಕ್ಷಿತ ವಲಯ) ಅನ್ನು ಸುರಕ್ಷಿತವಾಗಿ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಸರ್ಕಾರ ಭೂ ಸ್ವಾಧೀನಕ್ಕೆ ಮುಂದಾಗಿತ್ತು. ಇದಕ್ಕಾಗಿ ಬೆಂಗಳೂರು ದಕ್ಷಿಣ ತಾಲ್ಲೂಕಿನ ಬೇಗೂರು ಹೋಬಳಿಯ ನಾಗನಾಥಪುರ ಗ್ರಾಮದ ವಿವಿಧ ಸರ್ವೆ ನಂಬರ್ಗಳ ವ್ಯಾಪ್ತಿಯಲ್ಲಿ 19 ಎಕರೆ 18 ಗುಂಟೆ ಜಮೀನನ್ನು ಸ್ವಾಧೀನ ಪಡಿಸಿಕೊಳ್ಳಲು 2012ರಲ್ಲಿ ಪ್ರಾಥಮಿಕ ಹಾಗೂ 2013ರಲ್ಲಿ ಅಂತಿಮ ಅಧಿಸೂಚನೆ ಹೊರಡಿಸಲಾಗಿತ್ತು.ಈ ಅಧಿಸೂಚನೆಯನ್ನು ಪ್ರಶ್ನಿಸಿ ಜಮೀನುಗಳ 65ಕ್ಕೂ ಹೆಚ್ಚು ಮಾಲೀಕರು ಸಲ್ಲಿಸಿದ್ದ ರಿಟ್ ಅರ್ಜಿಗಳ ವಿಚಾರಣೆ ನಡೆಸಿದ್ದ ಏಕಸದಸ್ಯ ನ್ಯಾಯಪೀಠ, ವಿಶೇಷ ಭೂ ಸ್ವಾಧೀನಾಧಿಕಾರಿಗಳು ಸಲ್ಲಿಸಿದ್ದ ವರದಿಯನ್ನು ಸರ್ಕಾರ ಸೂಕ್ತವಾಗಿ ಪರಿಶೀಲಿಸಿಲ್ಲ ಎಂಬ ತಾಂತ್ರಿಕ ಕಾರಣ ನೀಡಿ ಅರ್ಜಿಗಳನ್ನು ಭಾಗಶಃ ಪುರಸ್ಕರಿಸಿತ್ತು ಮತ್ತು ಭೂ ಸ್ವಾಧೀನದ ಅಂತಿಮ ಅಧಿಸೂಚನೆಯನ್ನು 2025ರ ಮೇ 2ರಂದು ರದ್ದುಗೊಳಿಸಿತ್ತು.