ಸಿಸಿಬಿ ಕಾರ್ಯಾಚರಣೆ: ಇಬ್ಬರು ರೌಡಿಗಳ ಸೆರೆ
ಬೆಂಗಳೂರು: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ರೌಡಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿ ಪ್ರಜ್ವಲ್ (24) ಹಾಗೂ ವಿಲ್ಸನ್ ಗಾರ್ಡನ್ ಠಾಣೆ ವ್ಯಾಪ್ತಿಯ ರೌಡಿ ಮೊಹಮ್ಮದ್ ಮೊಯಿದ್ದೀನ್ (25) ಬಂಧಿತರು.ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರುವ ಪ್ರಜ್ವಲ್ ವಿರುದ್ಧ ಕೆಂಗೇರಿ, ರಾಜರಾ

ಬೆಂಗಳೂರು: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ರೌಡಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿ ಪ್ರಜ್ವಲ್ (24) ಹಾಗೂ ವಿಲ್ಸನ್ ಗಾರ್ಡನ್ ಠಾಣೆ ವ್ಯಾಪ್ತಿಯ ರೌಡಿ ಮೊಹಮ್ಮದ್ ಮೊಯಿದ್ದೀನ್ (25) ಬಂಧಿತರು.ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರುವ ಪ್ರಜ್ವಲ್ ವಿರುದ್ಧ ಕೆಂಗೇರಿ, ರಾಜರಾಜೇಶ್ವರಿನಗರ ಠಾಣೆಯಲ್ಲಿ ನಾಲ್ಕು ಪ್ರಕರಣಗಳು ದಾಖಲಾಗಿದ್ದವು. ಕೆಂಗೇರಿ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದಲ್ಲಿ ಆರೋಪಿಯಾಗಿದ್ದ ಪ್ರಜ್ವಲ್, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಹೀಗಾಗಿ, ನ್ಯಾಯಾಲಯ ಆತನ ವಿರುದ್ಧ ಜಾಮೀನುರಹಿತ ಬಂಧನದ ವಾರಂಟ್ ಜಾರಿ ಮಾಡಿತ್ತು. ಮತ್ತೊಬ್ಬ ರೌಡಿ ಮೊಹಮ್ಮದ್ ಮೊಯಿದ್ದೀನ್ ವಿರುದ್ಧ ವಿಲ್ಸನ್ ಗಾರ್ಡನ್, ಸಂಪಂಗಿರಾಮನಗರ ಠಾಣೆಯಲ್ಲಿ ಮೂರು ಸುಲಿಗೆ ಪ್ರಕರಣಗಳು ದಾಖಲಾಗಿದ್ದವು. ಆತ ಸಹ ಪ್ರಕರಣಗಳ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ನ್ಯಾಯಾಲಯವು ಬಂಧನ ವಾರಂಟ್ ಜಾರಿ ಮಾಡಿತ್ತು. ಸಿಸಿಬಿ ಸಂಘಟಿತ ಅಪರಾಧ ದಳ ವಿಭಾಗದ ಪೊಲೀಸರು, ಪ್ರಜ್ವಲ್ ಹಾಗೂ ಮೊಹಮ್ಮದ್ ಮೊಯಿದ್ದೀನ್ ಅವರನ್ನು ಬಂಧಿಸಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಿದ್ದಾರೆ.