ಕೊಳ್ಳೇಗಾಲದಲ್ಲಿ ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ಜನಜಾಗೃತಿ ಜಾಥ
ಕೊಳ್ಳೇಗಾಲ: ವಿಜಯ ಕರ್ನಾಟಕ ರಕ್ಷಣಾ ವೇದಿಕೆಯ ವತಿಯಿಂದ ಮಾದಕ ದ್ರವ್ಯ ಮುಕ್ತ ಸಮಾಜದ ನಿರ್ಮಾಣಕ್ಕಾಗಿ ನಶೆ ಮುಕ್ತ ಕರ್ನಾಟಕ ಜನಜಾಗೃತಿ ಜಾಥವನ್ನು ಗುರುವಾರ ಆಯೋಜಿಸಲಾಗಿತ್ತು.ನಗರದ ಎಂ.ಜಿ.ಎಸ್.ವಿ ಕಾಲೇಜು ಮೈದಾನದಿಂದ ಹೊರಟ ಜಾಥವು ಡಾ. ರಾಜಕುಮಾರ್ ರಸ್ತೆ, ಡಾ. ವಿಷ್ಣುವರ್ಧನ್ ರಸ್ತೆ, ಡಾ.ಬಿ.ಆರ್.ಅಂಬೇಡ್ಕರ್ ರಸ್ತೆ, ಐಬಿ ರಸ್ತೆಯ ಮೂಲಕ ಸಾಗಿತು. ವಿದ್ಯಾರ್ಥಿಗಳು

ಕೊಳ್ಳೇಗಾಲ: ವಿಜಯ ಕರ್ನಾಟಕ ರಕ್ಷಣಾ ವೇದಿಕೆಯ ವತಿಯಿಂದ ಮಾದಕ ದ್ರವ್ಯ ಮುಕ್ತ ಸಮಾಜದ ನಿರ್ಮಾಣಕ್ಕಾಗಿ ನಶೆ ಮುಕ್ತ ಕರ್ನಾಟಕ ಜನಜಾಗೃತಿ ಜಾಥವನ್ನು ಗುರುವಾರ ಆಯೋಜಿಸಲಾಗಿತ್ತು.ನಗರದ ಎಂ.ಜಿ.ಎಸ್.ವಿ ಕಾಲೇಜು ಮೈದಾನದಿಂದ ಹೊರಟ ಜಾಥವು ಡಾ. ರಾಜಕುಮಾರ್ ರಸ್ತೆ, ಡಾ. ವಿಷ್ಣುವರ್ಧನ್ ರಸ್ತೆ, ಡಾ.ಬಿ.ಆರ್.ಅಂಬೇಡ್ಕರ್ ರಸ್ತೆ, ಐಬಿ ರಸ್ತೆಯ ಮೂಲಕ ಸಾಗಿತು. ವಿದ್ಯಾರ್ಥಿಗಳು ಘೋಷಣೆ ಕೂಗಿ ಜಾಗೃತಿ ಮೂಡಿದರು.ನಂತರ ಶಾಸಕ ಎ.ಆರ್ ಕೃಷ್ಣಮೂರ್ತಿ ಮಾತನಾಡಿ, ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುತ್ತಿರುವುದು ಸಂತಸದ ವಿಷಯವಾಗಿದೆ. ವಿದ್ಯಾರ್ಥಿ ದಿಸೆಯಲ್ಲೇ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಮಾದಕದ್ರವ್ಯದ ವಿರುದ್ಧ ಹೋರಾಟ ಮಾಡಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯ ಪೋಷಕರು ಒಂದು ಕನಸನ್ನು ಕಟ್ಟಿಕೊಂಡಿರುತ್ತಾರೆ ಹಾಗಾಗಿ ಮಕ್ಕಳು ದುಶ್ಚಟಗಳಿಗೆ ಬಲಿಯಾಗದೆ ಶಿಕ್ಷಣದತ್ತ ಗುರಿ ಮಾಡಿ ಉನ್ನತ ಹುದ್ದೆಯನ್ನು ಅಲಂಕರಿಸಿ ಪೋಷಕರಿಗೆ ಹಾಗೂ ಶಿಕ್ಷಕರಿಗೆ ಗೌರವ ತರುವಂತಹ ಕೆಲಸವನ್ನು ಮಾಡಬೇಕು. ಯಾರು ಸಹ ಮಾದಕ ವಸ್ತುಗಳಿಗೆ ಬಲಿಯಾಗಬೇಡಿ ಹಾಗಾಗಿ ಪ್ರತಿಯೊಬ್ಬರೂ ಸಹ ಎಚ್ಚರದಿಂದ ಇರಬೇಕು ಎಂದು ಕಿವಿಮಾತು ಹೇಳಿದರು.ಮಾಜಿ ಶಾಸಕ ಎಸ್.ಬಾಲರಾಜು ಮಾತನಾಡಿ, ಯುವಕರ ಶಕ್ತಿಯಿಂದ ಉತ್ತಮ ಸಮಾಜ ನಿರ್ಮಾಣ ಮಾಡಲು ಸಾಧ್ಯ. ಮಾದಕ ದ್ರವ್ಯ ಬಳಕೆಯಿಂದ ದೈಹಿಕ ಹಾಗೂ ಮಾನಸಿಕ ಕಾಯಿಲೆಗೆ ಒಳಗಾಗಿ, ಕುಟುಂಬ ಸಂಕಷ್ಟಕ್ಕೆ ಸಿಲುಕಬೇಕಾಗುತ್ತದೆ. ಆದ್ದರಿಂದ ಮಾದಕದ್ರವ್ಯ ತ್ಯಜಿಸಲು ಪ್ರತಿಜ್ಞೆ ಮಾಡುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಸಹಕರಿಯಾಗಬೇಕು ಎಂದರು.ತಹಶೀಲ್ದಾರ್ ಬಸವರಾಜು ಮಾತನಾಡಿ, ಉತ್ತಮವಾಗಿ ವ್ಯಾಸಂಗ ಮಾಡುವ ಮೂಲಕ ಸುಂದರ ಸಮಾಜ ನಿರ್ಮಾಣ ಮಾಡುವಂತೆ ಕರೆ ನೀಡಿದರು.ತಾ.ಪಂ ಇಒ ಕುಮಾರ್, ಬಿಇಒ ಮಂಜುಳಾ, ತಾಲ್ಲೂಕು ವೈದ್ಯಾಧಿಕಾರಿ ಡಾ.ಶ್ರೀನಿವಾಸ್, ಮುಖಂಡ ಶಾಂತರಾಜು, ಸುರೇಶ್, ಜಗದೀಶ್ ಶಂಕನಪುರ, ಮಹದೇಶ್ವರ ಕಾಲೇಜು ಪ್ರಾಂಶುಪಾಲೆ ಜಯಲಕ್ಷ್ಮಿ, ಪಿಎಸಿಸಿ ಬ್ಯಾಂಕ್ ನಿರ್ದೇಶಕ ಮುಳ್ಳೂರು ಮಂಜು, ಎಂಜಿಎಸ್ವಿ ಕಾಲೇಜಿನ ಮಾಣಿಕ್ಯ, ಆನಂದರಾಜ್, ಬಸ್ತೀಪುರ ಪ್ರಕಾಶ್, ಎನ್.ಎಸ್. ಯು.ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಲೋಕೇಶ್ ನಂಜುಂಡಸ್ವಾಮಿ, ವಿಜಯ ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷರ ಶಿವಸುಂದರ್, ತಾಲ್ಲೂಕು ಅಧ್ಯಕ್ಷ ರೇವಣ್ಣ ಇದ್ದರು.261030-37-777550294