ರೇಣುಕಸ್ವಾಮಿ ಕೊಲೆ ಪ್ರಕರಣ: ಪ್ರದೂಷ್ ಜಾಮೀನು ಅರ್ಜಿ ವಜಾ
ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ‘ಮಾಫಿ ಸಾಕ್ಷಿ’ ಆಗಿರುವ ಪ್ರದೂಷ್ ರಾವ್ ಅವರು ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು 59ನೇ ಸಿಸಿಎಚ್ ನ್ಯಾಯಾಲಯವು ಶುಕ್ರವಾರ ವಜಾಗೊಳಿಸಿ ಆದೇಶಿಸಿದೆ.ತಂದೆಯ ವರ್ಷದ ಪುಣ್ಯಸ್ಮರಣೆ ಕಾರ್ಯ ನೇರವೇರಿಸುವ ಸಂಬಂಧ ಮೂರು ವಾರ ಮಧ್ಯಂತರ ಜಾಮೀನು ನೀಡುವಂತೆ ಕೋರಿ ಪ್ರದೂಷ್ ಅವರು ತಮ್ಮ ವಕೀಲರ ಮೂಲ

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ‘ಮಾಫಿ ಸಾಕ್ಷಿ’ ಆಗಿರುವ ಪ್ರದೂಷ್ ರಾವ್ ಅವರು ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು 59ನೇ ಸಿಸಿಎಚ್ ನ್ಯಾಯಾಲಯವು ಶುಕ್ರವಾರ ವಜಾಗೊಳಿಸಿ ಆದೇಶಿಸಿದೆ.ತಂದೆಯ ವರ್ಷದ ಪುಣ್ಯಸ್ಮರಣೆ ಕಾರ್ಯ ನೇರವೇರಿಸುವ ಸಂಬಂಧ ಮೂರು ವಾರ ಮಧ್ಯಂತರ ಜಾಮೀನು ನೀಡುವಂತೆ ಕೋರಿ ಪ್ರದೂಷ್ ಅವರು ತಮ್ಮ ವಕೀಲರ ಮೂಲಕ ಅರ್ಜಿ ಸಲ್ಲಿಸಿದ್ದರು. ಅಕ್ಟೋಬರ್ 27ರಂದು ನಡೆದ ವಿಚಾರಣೆಯ ವೇಳೆ ದರ್ಶನ್ ಪರ ಹಿರಿಯ ವಕೀಲ ಹಸ್ಮತ್ ಪಾಷಾ ಆಕ್ಷೇಪ ವ್ಯಕ್ತಪಡಿಸಿದರು.‘ಮಾಫಿ ಸಾಕ್ಷಿ’ ಅಂಗೀಕಾರ ಮಾಡುವ ಸಂದರ್ಭದಲ್ಲಿ ಪಾಟಿ ಸವಾಲು ಮುಕ್ತಾಯ ಆಗುವ ತನಕ ಪ್ರದೂಷ್ ರಾವ್ ಜೈಲಿನಲ್ಲಿ ಇರಬೇಕು ಎಂಬ ಷರತ್ತು ವಿಧಿಸಲಾಗಿತ್ತು. ಷರತ್ತಿನ ಅನ್ವಯ ಜಾಮೀನು ನೀಡುವಂತಿಲ್ಲ. ತುರ್ತು ಸಂದರ್ಭದಲ್ಲಿ ಮಾತ್ರವೇ ಮಧ್ಯಂತರ ಜಾಮೀನು ನೀಡಬಹುದಾಗಿದೆ. ಆದರೆ, ಈ ಪ್ರಕರಣದಲ್ಲಿ ಮಾಫಿ ಸಾಕ್ಷಿ ಮೇಲೆ ಪ್ರಭಾವ ಬೀರಿರುವ ಅಪಾದನೆ ಇದೆ. ಹೀಗಾಗಿ, ಜಾಮೀನು ನೀಡಬಾರದು ಎಂದು ಕೋರ್ಟ್ಗೆ ಮನವಿ ಮಾಡಿದ್ದರು. ವಾದ–ಪ್ರತಿವಾದ ಆಲಿಸಿದ ಕೋರ್ಟ್, ಜಾಮೀನು ಆದೇಶವನ್ನು ಕಾಯ್ದಿರಿಸಿತ್ತು. ಶುಕ್ರವಾರ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.ವಿಜಯಲಕ್ಷ್ಮಿ ಹಾಗೂ ದರ್ಶನ್ ಅವಹೇಳನಕಾರಿ ಹೇಳಿಕೆ ನೀಡದಂತೆ ನಿರ್ಬಂಧಕಾಜ್ಞೆ ಬೆಂಗಳೂರು: ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಹಾಗೂ ಅವರ ಕುಟುಂಬಸ್ಥರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡದಂತೆ ನ್ಯಾಯಾಲಯವು ನಟ ಧನ್ವೀರ್ಗೆ ನಿರ್ಬಂಧಕಾಜ್ಞೆ ಜಾರಿ ಮಾಡಿದೆ. ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದಂತೆ ಧನ್ವೀರ್ ಹಾಗೂ ವಿಜಯಲಕ್ಷ್ಮಿ ಅವರ ನಡುವೆ ಗಲಾಟೆ ನಡೆದು ಠಾಣೆಯಲ್ಲಿ ದೂರು – ಪ್ರತಿದೂರು ದಾಖಲಾಗಿತ್ತು. ಆ ಬೆಳವಣಿಗೆಯ ಬಳಿಕ ಧನ್ವೀರ್ ಅವರು ವಿಜಯಲಕ್ಷ್ಮಿ ಅವರನ್ನು ನಿಂದಿಸಿದ್ದ ಆಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಜತೆಗೆ ಮಾಧ್ಯಮಗಳಲ್ಲಿ ಮಾತನಾಡುವ ಸಂದರ್ಭದಲ್ಲೂ ವಿಜಯಲಕ್ಷ್ಮಿಅವರನ್ನು ಧನ್ವೀರ್ ನಿಂದಿಸಿದ್ದರು ಎಂಬ ಆರೋಪವಿದೆ. ಧನ್ವೀರ್ ವಿರುದ್ಧ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ ದರ್ಶನ್ ಪರ ವಕೀಲರು ದರ್ಶನ್ ಕುಟುಂಬಸ್ಥರ ಬಗ್ಗೆ ಬಹಿರಂಗ ಹೇಳಿಕೆ ನೀಡದಂತೆ ತಡೆ ನೀಡಬೇಕೆಂದು ಕೋರಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು ದರ್ಶನ್ ಹಾಗೂ ಅವರ ಕುಟುಂಬದ ಸದಸ್ಯರ ವಿರುದ್ಧ ಯಾವುದೇ ಹೇಳಿಕೆ ನೀಡದಂತೆ ತಡೆ ನೀಡಿದೆ. ಅಲ್ಲದೇ ಧನ್ವೀರ್ಗೆ ನೋಟಿಸ್ ಸಹ ಜಾರಿ ಮಾಡಿದೆ. ಧನ್ವೀರ್ ವಿರುದ್ಧ ಆರ್ಆರ್ ನಗರ ಮತ್ತು ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ಸಹ ದಾಖಲಾಗಿವೆ.