ಸ್ಟಿಂಗ್ ಕಾರ್ಯಾಚರಣೆ: ಜೆಡಿಎಸ್ನ ಇಬ್ಬರ ವಿಚಾರಣೆ
ಬೆಂಗಳೂರು: ಎಐಸಿಸಿ ಕಾರ್ಯಕಾರಿ ಸಮಿತಿ ಸದಸ್ಯ ಸಿದ್ದರಾಮಯ್ಯ ಅವರ ವಿರುದ್ಧ ನಡೆದ ‘ಸ್ಟಿಂಗ್’ ಕಾರ್ಯಾಚರಣೆ ಸಂಬಂಧ ಜೆಡಿಎಸ್ನ ಇಬ್ಬರು ಕಾರ್ಯಕರ್ತರನ್ನು ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.ಜೆಡಿಎಸ್ನ ಸಾಮಾಜಿಕ ಜಾಲತಾಣ ವಿಭಾಗದ ಮಖ್ಯಸ್ಥ ಮೋಹನ್ ಗೌಡ ಮತ್ತು ಚಂದನ್ ಅವರನ್ನು ಶುಕ್ರವಾರ ಬೆಳಿಗ್ಗೆ 11.30ರಿಂದ ಮಧ್ಯಾಹ್ನ 3 ಗಂಟೆವರೆಗೆ ವಿಚಾರಣೆ ನಡೆಸಲಾಗಿದ

ಬೆಂಗಳೂರು: ಎಐಸಿಸಿ ಕಾರ್ಯಕಾರಿ ಸಮಿತಿ ಸದಸ್ಯ ಸಿದ್ದರಾಮಯ್ಯ ಅವರ ವಿರುದ್ಧ ನಡೆದ ‘ಸ್ಟಿಂಗ್’ ಕಾರ್ಯಾಚರಣೆ ಸಂಬಂಧ ಜೆಡಿಎಸ್ನ ಇಬ್ಬರು ಕಾರ್ಯಕರ್ತರನ್ನು ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.ಜೆಡಿಎಸ್ನ ಸಾಮಾಜಿಕ ಜಾಲತಾಣ ವಿಭಾಗದ ಮಖ್ಯಸ್ಥ ಮೋಹನ್ ಗೌಡ ಮತ್ತು ಚಂದನ್ ಅವರನ್ನು ಶುಕ್ರವಾರ ಬೆಳಿಗ್ಗೆ 11.30ರಿಂದ ಮಧ್ಯಾಹ್ನ 3 ಗಂಟೆವರೆಗೆ ವಿಚಾರಣೆ ನಡೆಸಲಾಗಿದೆ. ಪ್ರಕರಣ ಸಂಬಂಧ ಈ ಹಿಂದೆ ಇಬ್ಬರಿಗೂ ಮೂರು ಬಾರಿ ನೋಟಿಸ್ ನೀಡಲಾಗಿತ್ತು. ಆದರೆ, ವಿಚಾರಣೆಗೆ ಹಾಜರಾಗಿರಲಿಲ್ಲ. ಈ ನಡುವೆ ಶುಕ್ರವಾರ ವಿಚಾರಣೆಗೆ ಹಾಜರಾಗಿ ಹೇಳಿಕೆ ದಾಖಲಿಸಿದ್ದಾರೆ. ಮತ್ತೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಕಳುಹಿಸಲಾಗಿದೆ ಎಂದು ಸಿಸಿಬಿ ಪೊಲೀಸರು ಮಾಹಿತಿ ನೀಡಿದರು.‘ಸ್ಟಿಂಗ್’ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ ಆರೋಪವು ಮೋಹನ್ಗೌಡ ಮತ್ತು ಚಂದನ್ ಅವರ ಮೇಲಿದೆ. ಹೀಗಾಗಿ ಅವರ ಮನೆಗಳಿಗೆ ಹೋಗಿ ನೋಟಿಸ್ ಕೊಡಲಾಗಿತ್ತು. ಅದರಂತೆ ವಿಚಾರಣೆಗೆ ಹಾಜರಾಗಿದ್ದರು. ಇಬ್ಬರನ್ನೂ ಪ್ರತ್ಯೇಕವಾಗಿ ವಿಚಾರಣೆ ನಡೆಸಿರುವ ಸಿಸಿಬಿ ಪೊಲೀಸರು ಹಲವು ಪ್ರಶ್ನೆಗಳನ್ನು ಕೇಳಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.