ಕೆಪಿಎಸ್ಸಿ ಅಕ್ರಮ: ಎಸ್ಐಟಿ ರಚಿಸುವ ಆದೇಶ ಕಾಯ್ದಿರಿಸಿದ ಹೈಕೋರ್ಟ್
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿನ ಅಕ್ರಮ ಆರೋಪಗಳ ತನಿಖೆಗೆ ರಚಿಸಿರುವ ವಿಶೇಷ ತನಿಖಾ ತಂಡಕ್ಕೆ (ಎಸ್ಐಟಿ) ಅಧಿಕಾರಿಗಳನ್ನು ನೇಮಿಸುವ ಕುರಿತಾದ ವಿಚಾರದಲ್ಲಿನ ಆದೇಶವನ್ನು ಹೈಕೋರ್ಟ್ ಕಾಯ್ದಿರಿಸಿದೆ.ಈ ಕುರಿತಾದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ (ಧಾರವಾಡ) ಶುಕ್ರವಾ
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿನ ಅಕ್ರಮ ಆರೋಪಗಳ ತನಿಖೆಗೆ ರಚಿಸಿರುವ ವಿಶೇಷ ತನಿಖಾ ತಂಡಕ್ಕೆ (ಎಸ್ಐಟಿ) ಅಧಿಕಾರಿಗಳನ್ನು ನೇಮಿಸುವ ಕುರಿತಾದ ವಿಚಾರದಲ್ಲಿನ ಆದೇಶವನ್ನು ಹೈಕೋರ್ಟ್ ಕಾಯ್ದಿರಿಸಿದೆ.ಈ ಕುರಿತಾದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ (ಧಾರವಾಡ) ಶುಕ್ರವಾರ ವಿಚಾರಣೆ ನಡೆಸಿ ಆದೇಶವನ್ನು ನವೆಂಬರ್ 2ಕ್ಕೆ ಪ್ರಕಟಿಸುವುದಾಗಿ ತಿಳಿಸಿತು.ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ಹಾಜರಾಗಿದ್ದ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ ಶೆಟ್ಟಿ, ‘ಎಸ್ಐಟಿಗೆ ಪೊಲೀಸ್ ಠಾಣೆ ಸ್ಥಾನಮಾನ ನೀಡಲಾಗಿದೆ’ ಎಂದು ಸರ್ಕಾರದ ಆದೇಶವನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು.ಅಂತೆಯೇ, ‘ಎಸ್ಐಟಿಯಲ್ಲಿ ಸೇರ್ಪಡೆ ಮಾಡಲು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ದರ್ಜೆಯ ಅಧಿಕಾರಿಗಳಾದ ಆರ್.ಹಿತೇಂದ್ರ, ಬಿ.ಕೆ.ಸಿಂಗ್, ಎಸ್.ಮುರುಗನ್ ಮತ್ತು ಸೌಮೇಂದು ಮುಖರ್ಜಿ ಅವರ ಹೆಸರುಗಳನ್ನು ಸರ್ಕಾರ ಸೂಚಿಸಿದೆ. ಇವರಲ್ಲಿ ಯಾರಾದರೂ ಇಬ್ಬರನ್ನು ಪರಿಗಣಿಸಬೇಕು’ ಎಂದು ಮನವಿ ಮಾಡಿದರು. ರಾಜ್ಯ ಸರ್ಕಾರ ಸೂಚಿಸಿರುವ ಅಧಿಕಾರಿಗಳ ಹೆಸರುಗಳಿಗೆ ಅರ್ಜಿದಾರರ ಪರ ವಕೀಲ ಗಿರೀಶ್ ಭಾರದ್ವಾಜ್ ಆಕ್ಷೇಪಣೆ ಸಲ್ಲಿಸಿದರು.ಅನುಕಂಪ ಉತ್ತರಾಧಿಕಾರದ ಹಕ್ಕಲ್ಲ; ನೌಕರಿ ಗಿಟ್ಟಿಸಲು ಬೇಕಾಬಿಟ್ಟಿ ನೆಪ ಬೇಡ: HC