ʻಸ್ಟಿಂಗ್ʼ ಪ್ರಕರಣದ ಬೆನ್ನಲ್ಲೇ ಕಾಂಗ್ರೆಸ್ನಿಂದ ಕೃಪಾ ಆಳ್ವಾ ಉಚ್ಚಾಟನೆ
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರ ಸೂಚನೆ ಮೇರೆಗೆ ಕಾಂಗ್ರೆಸ್ ನಾಯಕಿ ಕೃಪಾ ಆಳ್ವಾ (Kripa Alva) ಅವರನ್ನು ಕಾಂಗ್ರೆಸ್ನಿಂದ (Congress) ಉಚ್ಚಾಟನೆ ಮಾಡಲಾಗಿದೆ. ಸ್ಟಿಂಗ್ ಪ್ರಕರಣದಲ್ಲಿ ಹೆಸರು ಕೇಳಿ ಬಂದಿದ್ದು, ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪ ಹಿನ್ನೆಲೆ ಕಾಂಗ್ರೆಸ್ ಕೃಪಾ ಆಳ್ವಾ ಅವರಿಗೆ ನೋಟಿಸ್ ನೀಡಿತ್ತು. ಆದರೆ ಈವರೆಗೆ ನೋಟಿಸ್ಗೆ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರ ಸೂಚನೆ ಮೇರೆಗೆ ಕಾಂಗ್ರೆಸ್ ನಾಯಕಿ ಕೃಪಾ ಆಳ್ವಾ (Kripa Alva) ಅವರನ್ನು ಕಾಂಗ್ರೆಸ್ನಿಂದ (Congress) ಉಚ್ಚಾಟನೆ ಮಾಡಲಾಗಿದೆ. ಸ್ಟಿಂಗ್ ಪ್ರಕರಣದಲ್ಲಿ ಹೆಸರು ಕೇಳಿ ಬಂದಿದ್ದು, ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪ ಹಿನ್ನೆಲೆ ಕಾಂಗ್ರೆಸ್ ಕೃಪಾ ಆಳ್ವಾ ಅವರಿಗೆ ನೋಟಿಸ್ ನೀಡಿತ್ತು. ಆದರೆ ಈವರೆಗೆ ನೋಟಿಸ್ಗೆ ಪ್ರತಿಕ್ರಿಯಿಸಿರಲಿಲ್ಲ. ಹೀಗಾಗಿ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರ ಸೂಚನೆ ಮೇರೆಗೆ ಕೃಪಾ ಆಳ್ವಾ ಅವರನ್ನು ಕಾಂಗ್ರೆಸ್ನಿಂದ ಉಚ್ಚಾಟನೆ ಮಾಡಿದ್ದಾರೆ. ಇದನ್ನೂ ಓದಿ: ಪ್ಯಾಕೇಜ್ಡ್ ಕುಡಿಯುವ ನೀರಿನ ಘಟಕಗಳಿಗೆ ಬಿಗ್ ಶಾಕ್ – 102 ಘಟಕಗಳಿಗೆ ಅನುಮತಿ ನಿರಾಕರಣೆ ಆದೇಶದಲ್ಲಿ ಏನಿದೆ? ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಮುಖಂಡರುಗಳನ್ನು ಗುರಿಯಾಗಿಸಿ ಸ್ಟಿಂಗ್ ಆಪರೇಶನ್ ನೆಡೆಸಲಾಗಿದೆ ಎಂಬ ಪ್ರಕರಣದ ಬಗ್ಗೆ ನಕಾರಾತ್ಮಕ ಪ್ರಚಾರ ಹಾಗೂ ಪ್ರತಿಕ್ರಿಯೆಗಳಿಂದಾಗಿ ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ಎದುರಾದ ಹಿನ್ನಲೆ ಈ ಘಟನೆಯಲ್ಲಿ ತಾವು ಭಾಗಿಯಾಗಿದ್ದಾರೆಂಬ ಆರೋಪಗಳ ಹಿನ್ನೆಲೆ ಕಾರಣ ಕೇಳಿ ನೋಟಿಸ್ ನೀಡಲಾಗಿತ್ತು. ಕೆಪಿಸಿಸಿ ವತಿಯಿಂದ ಕಾರಣ ಕೇಳಿ ನೀಡಲಾದ ನೋಟಿಸ್ಗೆ ಇದುವರೆಗೂ ಯಾವುದೇ ರೀತಿಯ ಉತ್ತರ ಅಥವಾ ಸಮಜಾಯಿಷಿ ನೀಡಿಲ್ಲ. ಈ ಸ್ಟಿಂಗ್ ಪ್ರಕರಣದಲ್ಲಿ ತಮ್ಮ ಹೆಸರು ಕೇಳಿ ಬಂದ ಕಾರಣದಿಂದ ಹಾಗೂ ಈ ಪ್ರಕರಣದಲ್ಲಿ ನಿಮ್ಮ ನಡವಳಿಕೆ ಪಕ್ಷ ವಿರೋಧಿ ಚಟುವಟಿಕೆಯಾಗಿದ್ದು, ಕೆಪಿಸಿಸಿ ಅಧ್ಯಕ್ಷರ ಸೂಚನೆಯ ಮೇರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಕೃಪಾ ಆಳ್ವಾ ಅವರನ್ನು ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.ಇದನ್ನೂ ಓದಿ: ಅಕ್ಷರ ಕಲಿಯದ ಕೈಗಳಲ್ಲಿ ಅರಳಿದ ಕಲೆ; ಕೌದಿ ಕಸೂತಿ ಕಲಾವಿದೆ ರುಕ್ಮಿಣಿಬಾಯಿಗೆ ರಾಜ್ಯೋತ್ಸವ ಪ್ರಶಸ್ತಿ