ಮೃತದೇಹಗಳನ್ನ ಕರ್ನಾಟಕಕ್ಕೆ ತರಲು ಉತ್ತರಾಖಂಡ ಅಧಿಕಾರಿಗಳೊಂದಿಗೆ ಮಾತುಕತೆ – ಸಿಎಂ ಡಿಕೆಶಿ
ಬೆಂಗಳೂರು: ಉತ್ತರಾಖಂಡದ (Uttarakhand) ಜೋಶಿಮಠ (Joshimath) ಸಮೀಪ ಸಂಭವಿಸಿದ ಹೆಲಿಕಾಪ್ಟರ್ ಪತನದಲ್ಲಿ Helicopter Crash) ಕರ್ನಾಟಕದ 5 ಮಂದಿ ಸಾವನ್ನಪ್ಪಿದ್ದು, ಮೃತದೇಹಗಳನ್ನು ರಾಜ್ಯಕ್ಕೆ ತರಲು ಉತ್ತರಾಖಂಡ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದು ಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ತಿಳಿಸಿದ್ದಾರೆ. ಈ ಕುರಿತು ಸಿಎಂ ತಮ್ಮ ಎಕ್ಸ್

ಬೆಂಗಳೂರು: ಉತ್ತರಾಖಂಡದ (Uttarakhand) ಜೋಶಿಮಠ (Joshimath) ಸಮೀಪ ಸಂಭವಿಸಿದ ಹೆಲಿಕಾಪ್ಟರ್ ಪತನದಲ್ಲಿ Helicopter Crash) ಕರ್ನಾಟಕದ 5 ಮಂದಿ ಸಾವನ್ನಪ್ಪಿದ್ದು, ಮೃತದೇಹಗಳನ್ನು ರಾಜ್ಯಕ್ಕೆ ತರಲು ಉತ್ತರಾಖಂಡ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ಎಂದು ಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ತಿಳಿಸಿದ್ದಾರೆ. ಈ ಕುರಿತು ಸಿಎಂ ತಮ್ಮ ಎಕ್ಸ್ (X) ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಚಾರ್ಧಾಮ್ ಯಾತ್ರೆ ಕೈಗೊಂಡಿದ್ದ ಸಂದರ್ಭದಲ್ಲಿ ಉತ್ತರಾಖಂಡದ ಚಮೋಲಿ ಜಿಲ್ಲೆಯ ಜೋಶಿಮಠ ಸಮೀಪ ಬದರಿನಾಥದಿಂದ ಡೆಹ್ರಾಡೂನ್ಗೆ ತೆರಳುತ್ತಿದ್ದ ಹೆಲಿಕಾಪ್ಟರ್ ಪತನಗೊಂಡು, ದೆಹಲಿ ಮೂಲದ ಪೈಲಟ್ ಹಾಗೂ ಕರ್ನಾಟಕದ ಐವರು ಪ್ರಯಾಣಿಕರು ಮೃತಪಟ್ಟಿರುವ ಸುದ್ದಿ ತೀವ್ರ ಆಘಾತ ಹಾಗೂ ದುಃಖವನ್ನುಂಟು ಮಾಡಿದೆ. ಇದನ್ನೂ ಓದಿ: ಉತ್ತರಾಖಂಡದಲ್ಲಿ ಕಳೆದ 10 ವರ್ಷದಲ್ಲಿ 13 ಹೆಲಿಕಾಪ್ಟರ್ ದುರಂತ – 27 ಮಂದಿ ಸಾವು ಚಾರ್ಧಾಮ್ ಯಾತ್ರೆ ಕೈಗೊಂಡಿದ್ದ ಸಂದರ್ಭದಲ್ಲಿ ಉತ್ತರಾಖಂಡದ ಚಮೋಲಿ ಜಿಲ್ಲೆಯ ಜೋಶಿಮಠ ಸಮೀಪ ಬದರಿನಾಥದಿಂದ ಡೆಹ್ರಾಡೂನ್ಗೆ ತೆರಳುತ್ತಿದ್ದ ಹೆಲಿಕಾಪ್ಟರ್ ಪತನಗೊಂಡು, ದೆಹಲಿ ಮೂಲದ ಪೈಲಟ್ ಹಾಗೂ ಕರ್ನಾಟಕದ ಐವರು ಪ್ರಯಾಣಿಕರು ಮೃತಪಟ್ಟಿರುವ ಸುದ್ದಿ ತೀವ್ರ ಆಘಾತ ಹಾಗೂ ದುಃಖವನ್ನುಂಟು ಮಾಡಿದೆ. ಈ ದುರಂತದಲ್ಲಿ ಪ್ರಾಣ ಕಳೆದುಕೊಂಡ ಕ್ಯಾಪ್ಟನ್ ಹಿಮಾಂಶು, ಸಿಸಿಬಿ ಇನ್ಸ್ಪೆಕ್ಟರ್ ಅರುಣ್ ಸಾಲಂಕೆ, ಪ್ರತಾಪ್ ಬಿ. ನಿಂಗರಾಜು, ಶಂಕರಗೌಡ ವಿ.ಬಿ., ಸುಧೀರ್ ಕೆ. ಹಾಗೂ ಹೆಚ್.ಎಸ್. ನಟರಾಜು ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ. ಅಗಲಿದವರ ಕುಟುಂಬಸ್ಥರಿಗೆ ಈ ಅಪಾರ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಇನ್ನು ಮೃತದೇಹಗಳನ್ನು ಆದಷ್ಟು ಬೇಗ ಕರ್ನಾಟಕಕ್ಕೆ ತರಲು ಉತ್ತರಾಖಂಡದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗುತ್ತಿದ್ದು, ಈ ದುಃಖದ ಸಮಯದಲ್ಲಿ ಮೃತರ ಕುಟುಂಬಗಳೊಂದಿಗೆ ರಾಜ್ಯ ಸರ್ಕಾರ ನಿಂತಿದೆ. ಓಂ ಶಾಂತಿ. — DK Shivakumar (@DKShivakumar) October 30, 2026 ಈ ದುರಂತದಲ್ಲಿ ಪ್ರಾಣ ಕಳೆದುಕೊಂಡ ಕ್ಯಾಪ್ಟನ್ ಹಿಮಾಂಶು, ಸಿಸಿಬಿ ಇನ್ಸ್ಪೆಕ್ಟರ್ ಅರುಣ್ ಸಾಲಂಕೆ, ಪ್ರತಾಪ್ ಬಿ. ನಿಂಗರಾಜು, ಶಂಕರಗೌಡ ವಿ.ಬಿ., ಸುಧೀರ್ ಕೆ. ಹಾಗೂ ಹೆಚ್.ಎಸ್. ನಟರಾಜು ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ. ಅಗಲಿದವರ ಕುಟುಂಬಸ್ಥರಿಗೆ ಈ ಅಪಾರ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಇನ್ನು ಮೃತದೇಹಗಳನ್ನು ಆದಷ್ಟು ಬೇಗ ಕರ್ನಾಟಕಕ್ಕೆ ತರಲು ಉತ್ತರಾಖಂಡದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗುತ್ತಿದ್ದು, ಈ ದುಃಖದ ಸಮಯದಲ್ಲಿ ಮೃತರ ಕುಟುಂಬಗಳೊಂದಿಗೆ ರಾಜ್ಯ ಸರ್ಕಾರ ನಿಂತಿದೆ ಎಂದು ಬರೆದುಕೊಂಡಿದ್ದಾರೆ. ಇನ್ನೂ ನಗರ ಪೊಲೀಸ್ ಆಯುಕ್ತರ ಕಚೇರಿಯಿಂದ ಸುಧೀರ್ ಕುಟುಂಬಸ್ಥರಿಗೆ ಕರೆ ಮಾಡಲಾಗಿದ್ದು, ಪೊಲೀಸ್ ಆಯುಕ್ತರ ಕಚೇರಿಗೆ ಬರುವಂತೆ ಸೂಚನೆ ನೀಡಿದ್ದಾರೆ. ಈಗಾಗಲೇ ಸಿಸಿಬಿ ಪೊಲೀಸರ ತಂಡವೂ ಘಟನಾ ಸ್ಥಳಕ್ಕೆ ತೆರಳಿದ್ದು, ಕೋ-ಆರ್ಡಿನೇಟ್ ಮಾಡಲು ಇಂದು (ಅ.30) ರಾತ್ರಿಯೇ ಉತ್ತರಾಖಂಡಕ್ಕೆ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳು ಕೂಡ ಪ್ರಯಾಣಿಸಲಿದ್ದಾರೆ. ಸಿಸಿಬಿ ಪೊಲೀಸರು ಹಾಗೂ ಅಧಿಕಾರಿಗಳ ಜೊತೆ ಕುಟುಂಬಸ್ಥರು ಕೂಡ ಪ್ರಯಾಣಿಸಲಿದ್ದಾರೆ.ಇದನ್ನೂ ಓದಿ: ಹೆಲಿಕಾಪ್ಟರ್ ದುರಂತ | ಬೆಂಗಳೂರಿನ ಐವರು ಸೇರಿ 6 ಮಂದಿ ಸಾವು – ಸುಟ್ಟು ಕರಕಲಾದ ಸ್ಥಿತಿಯಲ್ಲಿ ಮೃತದೇಹ ಪತ್ತೆ!