SIR ವಿರೊಧಿಸಿದ ಕಾಂಗ್ರೆಸ್ಗೆ ಐದು ಪ್ರಶ್ನೆಗಳನ್ನು ಕೇಳಿದ ಕಿರಣ್ ರಿಜಿಜು
ನವದೆಹಲಿ: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆ ವಿರೋಧಿಸುತ್ತಿರುವ ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಕಿರಣ್ ರಿಜಿಜು ವಾಗ್ದಾಳಿ ನಡೆಸಿದ್ದಾರೆ. ಮಾತ್ರವಲ್ಲ, ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ ಮಾಡುತ್ತಿರುವ ಆರೋಪಗಳಿಗೆ ಸಂಬಂಧಿಸಿದಂತೆ ಐದು ಪ್ರಶ್ನೆಗಳನ್ನು ಅವರು ಕೇಳಿದ್ದಾರೆ. ರಿಜಿಜು ಕೇಳಿದ ಐದು ಪ್ರಶ್ನೆಗಳು 2014ರ ಲೋಕಸಭಾ ಚುನಾವಣೆಯಲ್
ನವದೆಹಲಿ: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆ ವಿರೋಧಿಸುತ್ತಿರುವ ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಕಿರಣ್ ರಿಜಿಜು ವಾಗ್ದಾಳಿ ನಡೆಸಿದ್ದಾರೆ. ಮಾತ್ರವಲ್ಲ, ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್ ಮಾಡುತ್ತಿರುವ ಆರೋಪಗಳಿಗೆ ಸಂಬಂಧಿಸಿದಂತೆ ಐದು ಪ್ರಶ್ನೆಗಳನ್ನು ಅವರು ಕೇಳಿದ್ದಾರೆ. ರಿಜಿಜು ಕೇಳಿದ ಐದು ಪ್ರಶ್ನೆಗಳು 2014ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ 44 ಸ್ಥಾನಗಳನ್ನು ಗೆದ್ದಿತ್ತು. ಆಗ ಚುನಾವಣಾ ಆಯುಕ್ತರನ್ನು ನೇಮಕ ಮಾಡಿದ್ದು ಕಾಂಗ್ರೆಸ್ ಸರ್ಕಾರವೇ ಆಗಿತ್ತು. ಹಾಗಿದ್ದರೂ ಕಾಂಗ್ರೆಸ್ಗೆ 44 ಸ್ಥಾನಗಳು ಬರಲು ಕಾರಣವೇನು?2024ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಜ್ಞಾನೇಶ್ ಕುಮಾರ್ ಮುಖ್ಯ ಚುನಾವಣಾ ಆಯುಕ್ತರಾಗಿರಲಿಲ್ಲ. ಹಾಗಿದ್ದರೂ ಕಾಂಗ್ರೆಸ್ ಸತತ ಮೂರನೇ ಅವಧಿಯಲ್ಲಿ ಸೋತಿದ್ದು ಯಾಕೆ? ಜ್ಞಾನೇಶ್ ಕುಮಾರ್ 2025ರ ಫೆಬ್ರುವರಿ 19ರಂದು ಮುಖ್ಯ ಚುನಾವಣಾ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿದ್ದರು.2014ರಿಂದ 2026ರ ಅವಧಿಯಲ್ಲಿ ನಡೆದ ವಿಧಾನಸಭಾ ಚುನಾವಣೆಗಳಲ್ಲಿ ಗೆದ್ದು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿಗಳು ಈಗ ರಾಜೀನಾಮೆ ನೀಡಿ ಕ್ಷಮೆ ಕೇಳುತ್ತಾರೆಯೇ? ಎಂದು ಪ್ರಶ್ನಿಸಿದ್ದಾರೆ.ಮತದಾರರ ಪಟ್ಟಿಯ ಪರಿಷ್ಕರಣೆಯನ್ನು ಸಮರ್ಥಿಸಿಕೊಂಡಿರುವ ರಿಜಿಜು, ಅಕ್ರಮ ವಲಸಿಗರು, ಮೃತಪಟ್ಟವರು, ಸ್ಥಳಾಂತರಗೊಂಡವರು ಮತ್ತು ಒಂದಕ್ಕಿಂತ ಹೆಚ್ಚು ಕಡೆ ಹೆಸರು ಹೊಂದಿರುವವರನ್ನು ಪಟ್ಟಿಯಿಂದ ತೆಗೆದುಹಾಕುವುದು ತಪ್ಪೇ? ಇಂತಹವರ ಹೆಸರುಗಳನ್ನು ತೆಗೆದುಹಾಕುವುದಕ್ಕೂ ಕಾಂಗ್ರೆಸ್ ವಿರೋಧ ಇದೆಯಾ? ಎಂದು ಕೇಳಿದ್ದಾರೆ.1952-56, 1958-61, 1965-66, 1983-84, 1987-88, 1993, 1995 ಮತ್ತು 2002-04ರ ಅವಧಿಯಲ್ಲಿ ನಡೆದ ಮತದಾರರ ಪಟ್ಟಿಯ ಪರಿಷ್ಕರಣೆಗಳು ಕೂಡ ಕಾನೂನು ಬಾಹಿರವೆ? ಎಂದು ಪ್ರಶ್ನಿಸಿದ್ದಾರೆ.I challenge Congress party to answer to the basic questions:1. How did congress get only 44 MPs in 2014 Lok Sabha election when Election Commissioners were appointed by their Govt?2. When Gyanesh Kumar was not CEC in 2024, how did Congress face a hatric defeat?3. Will…— Kiren Rijiju (@KirenRijiju) October 31, 2026 ‘ಒಂದು ಕುಟುಂಬವನ್ನು ಕೇಂದ್ರೀಕರಿಸಿ ನಡೆಸುವ ಪಕ್ಷವು ಹೊರಗಿನ ಶಕ್ತಿಗಳೊಂದಿಗೆ ಸೇರಿಕೊಂಡು ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ನಾಶಮಾಡಲು ಪ್ರಯತ್ನಿಸುತ್ತಿದೆ’ ಎಂದು ರಿಜಿಜು ಆರೋಪಿಸಿದ್ದಾರೆ.