ರೈತರನ್ನು ದಾರಿ ತಪ್ಪಿಸಬೇಡಿ: ಅಶೋಕಗೆ ತಿರುಗೇಟು ಕೊಟ್ಟ ಡಿಸಿಎಂ ಪರಮೇಶ್ವರ
ಬೆಂಗಳೂರು: ‘ರೈತರ ಸಂಕಷ್ಟಕ್ಕೆ ಬೇಕಿರುವುದು ನ್ಯಾಯಯುತ ಪರಿಹಾರವೇ ಹೊರತು, ದಾರಿ ತಪ್ಪಿಸುವ ಮಾತುಗಳಲ್ಲ’ ಎಂದು ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ ಹೇಳಿದ್ದಾರೆ.ಪರಿಹಾರ ವಿತರಣೆಗೆ ಸರ್ಕಾರ 17 ಷರತ್ತು ಹಾಕಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರ ಟೀಕೆಗೆ ತಿರುಗೇಟು ನೀಡಿರುವ ಅವರು, ‘17 ಅಂಶಗಳನ್ನೂ ರೈತರು ಪೂರೈಸಬೇಕಾದ ಕಡ್ಡಾಯ ಷರತ್ತುಗಳೆಂಬಂತೆ ಬಿಂಬಿಸುವು

ಬೆಂಗಳೂರು: ‘ರೈತರ ಸಂಕಷ್ಟಕ್ಕೆ ಬೇಕಿರುವುದು ನ್ಯಾಯಯುತ ಪರಿಹಾರವೇ ಹೊರತು, ದಾರಿ ತಪ್ಪಿಸುವ ಮಾತುಗಳಲ್ಲ’ ಎಂದು ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ ಹೇಳಿದ್ದಾರೆ.ಪರಿಹಾರ ವಿತರಣೆಗೆ ಸರ್ಕಾರ 17 ಷರತ್ತು ಹಾಕಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರ ಟೀಕೆಗೆ ತಿರುಗೇಟು ನೀಡಿರುವ ಅವರು, ‘17 ಅಂಶಗಳನ್ನೂ ರೈತರು ಪೂರೈಸಬೇಕಾದ ಕಡ್ಡಾಯ ಷರತ್ತುಗಳೆಂಬಂತೆ ಬಿಂಬಿಸುವುದು ತಪ್ಪು ದಾರಿಗೆಳೆಯುವ ಪ್ರಯತ್ನ. ರೈತರಿಗೆ ಗೌರವಯುತವಾಗಿ, ತ್ವರಿತ ಮತ್ತು ಪಾರದರ್ಶಕವಾಗಿ ನೆರವು ತಲುಪಿಸುವುದು ಸರ್ಕಾರದ ಜವಾಬ್ದಾರಿ’ ಎಂದು ಪ್ರತಿಪಾದಿಸಿದ್ದಾರೆ.‘ಅರ್ಹ ರೈತರ ಖಾತೆಗಳಿಗೆ ಸೋಮವಾರದಿಂದ (ನ. 2) ಮಧ್ಯಂತರ ಪರಿಹಾರದ ಹಣ ಜಮೆ ಮಾಡಲು ನಿರ್ಧರಿಸಿದ್ದೇವೆ. ಇದು ಪರಿಹಾರದ ಮೊದಲ ಕಂತು ಮಾತ್ರವೇ ಹೊರತು ರೈತರಿಗೆ ಸಲ್ಲಬೇಕಾದ ಸಂಪೂರ್ಣ ಪರಿಹಾರವಲ್ಲ. ಕೇಂದ್ರ ಸರ್ಕಾರ ಎನ್ಡಿಆರ್ಎಫ್ ಅನುದಾನ ಬಿಡುಗಡೆ ಮಾಡಿದ ತಕ್ಷಣ ಮುಂದಿನ ಕಂತಿನ ಪರಿಹಾರ ವಿತರಿಸಲಾಗುವುದು’ ಎಂದು ಪ್ರಕಟಣೆಯಲ್ಲಿ ಅವರು ಸ್ಪಷ್ಟಪಡಿಸಿದ್ದಾರೆ. ‘ವಿರೋಧ ಪಕ್ಷದ ನಾಯಕರು ಸರ್ಕಾರಿ ಆದೇಶದಲ್ಲಿರುವ 17 ಅಂಶಗಳ ಬಗ್ಗೆ ಟೀಕಿಸಿದ್ದಾರೆ. ಆದರೆ, ಈ ಅಂಶಗಳು ಫಲಾನುಭವಿಗಳ ಅರ್ಹತೆ, ದಾಖಲೆಗಳ ಪರಿಶೀಲನೆ ಹಾಗೂ ಆಡಳಿತ ವ್ಯವಸ್ಥೆಯ ಜವಾಬ್ದಾರಿಗಳಿಗೆ ಸಂಬಂಧಿಸಿವೆ. ನೈಜ ಫಲಾನುಭವಿಗಳಿಗೆ ಪರಿಹಾರ ತಲುಪಿಸುವುದು, ಒಂದೇ ಪ್ರಕರಣಕ್ಕೆ ಎರಡೆರಡು ಬಾರಿ ಹಣ ಪಾವತಿ ತಡೆಯುವುದು ಹಾಗೂ ಸಾರ್ವಜನಿಕ ಹಣದ ಸದ್ಬಳಕೆಯನ್ನು ಖಚಿತಪಡಿಸಿಕೊಳ್ಳುವುದು ಉದ್ದೇಶವಾಗಿದೆ’ ಎಂದು ಹೇಳಿದ್ದಾರೆ.‘ಪರಿಹಾರ ಪಡೆಯಲು ರೈತರು ಹೊಸದಾಗಿ ಅರ್ಜಿ ಸಲ್ಲಿಸುವ ಅಥವಾ ಒಂದು ಸರ್ಕಾರಿ ಕಚೇರಿಯಿಂದ ಮತ್ತೊಂದು ಕಚೇರಿಗೆ ಅಲೆಯುವ ಅಗತ್ಯವಿಲ್ಲ. ಅಗತ್ಯವಿರುವ ಮಾಹಿತಿಯು ಈಗಾಗಲೇ ಸರ್ಕಾರದ ಬಳಿ ಲಭ್ಯವಿದೆ. ಆ ಮಾಹಿತಿಯನ್ನು ಪರಿಶೀಲಿಸಿ ಪರಿಹಾರ ವಿತರಿಸಲಾಗುವುದು. ದಾಖಲೆಗಳಲ್ಲಿ ವ್ಯತ್ಯಾಸಗಳಿದ್ದರೆ, ನಿಗದಿತ ಪರಿಶೀಲನಾ ಪ್ರಕ್ರಿಯೆಯ ಮೂಲಕ ಅವುಗಳನ್ನು ಅಧಿಕಾರಿಗಳು ಸರಿಪಡಿಸಲಿದ್ದಾರೆ’ ಎಂದೂ ಸ್ಪಷ್ಟಪಡಿಸಿದ್ದಾರೆ.‘ಕೇಂದ್ರ ಸರ್ಕಾರ ನಿಗದಿಪಡಿಸಿರುವ ನಿಯಮಗಳಿಗೂ, ಅವುಗಳನ್ನು ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ಅಳವಡಿಸಿಕೊಂಡಿರುವ ಪ್ರಕ್ರಿಯೆಗಳಿಗೂ ಇರುವ ವ್ಯತ್ಯಾಸವನ್ನು ವಿರೋಧ ಪಕ್ಷದವರು ಅರ್ಥಮಾಡಿಕೊಳ್ಳಬೇಕು. ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು, ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರ ಪರಿಹಾರದ ಅನುದಾನವನ್ನು ಶೀಘ್ರವಾಗಿ ಬಿಡುಗಡೆ ಮಾಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದೊಂದಿಗೆ ಸಹಕರಿಸಬೇಕು’ ಎಂದು ವಿರೋಧ ಪಕ್ಷದವರಿಗೆ ಮನವಿ ಮಾಡಿದ್ದಾರೆ. ಜಿ. ಪರಮೇಶ್ವರ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ ಉಪ ಮುಖ್ಯಮಂತ್ರಿಎರಡು ಹೆಕ್ಟೇರ್ ಮಿತಿಯು ಬೆಳೆಹಾನಿ ಪರಿಹಾರಕ್ಕೆ ಪರಿಗಣಿಸಬಹುದಾದ ಗರಿಷ್ಠ ವಿಸ್ತೀರ್ಣಕ್ಕೆ ಸಂಬಂಧಿಸಿದ್ದೇ ಹೊರತು ಎರಡು ಹೆಕ್ಟೇರ್ಗಿಂತ ಹೆಚ್ಚು ಜಮೀನು ಹೊಂದಿರುವ ರೈತರು ಪರಿಹಾರಕ್ಕೆ ಅನರ್ಹರು ಎಂದರ್ಥವಲ್ಲ