ʻಹೆಲಿಕಾಪ್ಟರ್ ಕಳಿಸುವೆ ಕಾರ್ಯಕ್ರಮಕ್ಕೆ ಬನ್ನಿʼ – ಕಾಗೋಡು ತಿಮ್ಮಪ್ಪಗೆ ಕರೆ ಮಾಡಿ ಮಾತಾಡಿದ ಡಿಕೆಶಿ
ಶಿವಮೊಗ್ಗ: 2026ರ ರಾಜ್ಯೋತ್ಸವ ಪ್ರಶಸ್ತಿ (Rajyotsava Awards) ಘೋಷಣೆಯಾದ ಬೆನ್ನಲ್ಲೇ ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ಸಿಎಂ ಡಿ.ಕೆ ಶಿವಕುಮಾರ್ (D.K Shivakumar) ಅವರು ವಿಡಿಯೋ ಕರೆ ಮಾಡಿ ಶುಭಕೋರಿದ್ದಾರೆ. ಸಾಗರ ನಗರದಲ್ಲಿರುವ ಕಾಗೋಡು ತಿಮ್ಮಪ್ಪ ಅವರ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ (Madhu Bangarappa) ಅವರು ಭೇಟಿ ನೀಡಿ ಶ

ಶಿವಮೊಗ್ಗ: 2026ರ ರಾಜ್ಯೋತ್ಸವ ಪ್ರಶಸ್ತಿ (Rajyotsava Awards) ಘೋಷಣೆಯಾದ ಬೆನ್ನಲ್ಲೇ ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರಿಗೆ ಸಿಎಂ ಡಿ.ಕೆ ಶಿವಕುಮಾರ್ (D.K Shivakumar) ಅವರು ವಿಡಿಯೋ ಕರೆ ಮಾಡಿ ಶುಭಕೋರಿದ್ದಾರೆ. ಸಾಗರ ನಗರದಲ್ಲಿರುವ ಕಾಗೋಡು ತಿಮ್ಮಪ್ಪ ಅವರ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ (Madhu Bangarappa) ಅವರು ಭೇಟಿ ನೀಡಿ ಶುಭ ಹಾರೈಸಿದರು. ಈ ವೇಳೆ, ಸಿಎಂ ಸಹ ವಿಡಿಯೋ ಕರೆ ಮಾಡಿ ಶುಭ ಕೋರಿದ್ದಾರೆ. ಅಲ್ಲದೇ ಹೆಲಿಕಾಪ್ಟರ್ ಕಳುಹಿಸುವೆ ಕಾರ್ಯಕ್ರಮಕ್ಕೆ ಬನ್ನಿ ಎಂದು ಆಹ್ವಾನಿಸಿದ್ದಾರೆ. ಇದಕ್ಕೆ ಕಾಗೋಡು ತಿಮ್ಮಪ್ಪನವರು, ಹೆಲಿಕಾಪ್ಟರ್ ಬೇಡ, ನಾನೇ ಹೇಗೋ ಬರುತ್ತೇನೆ ಎಂದು ಉತ್ತರಿಸಿದ್ದಾರೆ. ಇದನ್ನೂ ಓದಿ: 2019ರಲ್ಲಿಯೇ `ಪಬ್ಲಿಕ್ ಟಿವಿ’ ಗುರುತಿಸಿದ್ದ ಶಿವಾನಂದ ಸ್ವಾಮೀಜಿಗೆ ರಾಜ್ಯೋತ್ಸವ ಪ್ರಶಸ್ತಿ ಮುಂದುವರೆದು ಮಾತನಾಡಿದ ಸಿಎಂ, ಶುಭವಾಗಲಿ, ರಾಜ್ಯಕ್ಕೆ ಒಳ್ಳೆಯ ಸೇವೆ ಮಾಡಿದ್ದೀರಿ. ಆರೋಗ್ಯದ ಬಗ್ಗೆ ಗಮನಹರಿಸಿ ಎಂದಿದ್ದಾರೆ. ಬಳಿಕ ಕಾಗೋಡು ತಿಮ್ಮಪ್ಪ ಅವರನ್ನು ಮಧು ಬಂಗಾರಪ್ಪ ಅವರು ಸನ್ಮಾನಿಸಿದ್ದಾರೆ. ಕಾಗೋಡು ಅವರ ಮನೆಗೆ ತೆರಳಿ ಪ್ರಶಸ್ತಿ ಪ್ರದಾನ ವಯೋಸಹಜ ಅನಾರೋಗ್ಯದ ಹಿನ್ನೆಲೆಯಲ್ಲಿ ಕಾಗೋಡು ತಿಮ್ಮಪ್ಪ ಅವರು ಸದ್ಯ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಹೀಗಾಗಿ ಬೆಂಗಳೂರಿಗೆ ಬಂದು ಪ್ರಶಸ್ತಿ ಸ್ವೀಕರಿಸಲು ಅವರಿಗೆ ತೊಂದರೆಯಾಗಬಹುದು. ಈ ಹಿನ್ನೆಲೆಯಲ್ಲಿ ಸರ್ಕಾರವೇ ಅವರ ಮನೆಗೆ ತೆರಳಿ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಇದನ್ನೂ ಓದಿ: ರಾಯಚೂರಿನ ಸಾಹಿತ್ಯ, ಜಾನಪದ ಕ್ಷೇತ್ರದ ಇಬ್ಬರು ಸಾಧಕರಿಗೆ ಒಲಿದ ರಾಜ್ಯೋತ್ಸವ ಪ್ರಶಸ್ತಿ