ಮೈಸೂರು–ಚಾಮರಾಜನಗರ ರೈಲು ಮಾರ್ಗ ಪರಿಶೀಲನೆ
ಮೈಸೂರು: ನೈರುತ್ಯ ರೈಲ್ವೆ ಮೈಸೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕ (ಡಿಆರ್ಎಂ) ಮುದಿತ್ ಮಿತ್ತಲ್ ಅವರು ಮೈಸೂರು–ಚಾಮರಾಜನಗರ ರೈಲು ಮಾರ್ಗದಲ್ಲಿ ಬುಧವಾರ ಪರಿಶೀಲನೆ ನಡೆಸಿದರು.ರೈಲು ಕಾರ್ಯಾಚರಣೆ, ನಿಲ್ದಾಣಗಳಲ್ಲಿನ ಸೌಲಭ್ಯಗಳು ಹಾಗೂ ಪ್ರಗತಿಯಲ್ಲಿರುವ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಿ ಮಾಹಿತಿ ಪಡೆದರು.ಚಾಮರಾಜನಗರ ರೈಲು ನಿಲ್ದಾಣಕ್ಕೆ ಭೇಟಿ ನೀಡಿ, ಅ

ಮೈಸೂರು: ನೈರುತ್ಯ ರೈಲ್ವೆ ಮೈಸೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕ (ಡಿಆರ್ಎಂ) ಮುದಿತ್ ಮಿತ್ತಲ್ ಅವರು ಮೈಸೂರು–ಚಾಮರಾಜನಗರ ರೈಲು ಮಾರ್ಗದಲ್ಲಿ ಬುಧವಾರ ಪರಿಶೀಲನೆ ನಡೆಸಿದರು.ರೈಲು ಕಾರ್ಯಾಚರಣೆ, ನಿಲ್ದಾಣಗಳಲ್ಲಿನ ಸೌಲಭ್ಯಗಳು ಹಾಗೂ ಪ್ರಗತಿಯಲ್ಲಿರುವ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಿ ಮಾಹಿತಿ ಪಡೆದರು.ಚಾಮರಾಜನಗರ ರೈಲು ನಿಲ್ದಾಣಕ್ಕೆ ಭೇಟಿ ನೀಡಿ, ಅಮೃತ ಭಾರತ್ ನಿಲ್ದಾಣ ಯೋಜನೆಯಡಿ ನಡೆದಿರುವ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ಅವಲೋಕಿಸಿದರು. ಅಲ್ಲಿ ಪ್ರಯಾಣಿಕರ ಸೌಲಭ್ಯಗಳು ಹಾಗೂ ಇತರೆ ಮೂಲಸೌಕರ್ಯಗಳ ಸ್ಥಿತಿಯನ್ನು ಪರಿಶೀಲಿಸಿ, ಪ್ರಯಾಣಿಕರಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕೈಗೊಳ್ಳಲಾಗುತ್ತಿರುವ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.ಲೋಕೊ ಪೈಲಟ್ಗಳು ಹಾಗೂ ಇತರ ಸಿಬ್ಬಂದಿಯೊಂದಿಗೆ ಸಂವಾದ ನಡೆಸಿ, ಕರ್ತವ್ಯ ನಿರ್ವಹಿಸುವಾಗ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಸದಾ ಜಾಗರೂಕತೆಯಿಂದ ಕಾರ್ಯ ನಿರ್ವಹಿಸಬೇಕು ಎಂದು ಸೂಚಿಸಿದರು.ವಿಭಾಗದ ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಶಮ್ಮಾಸ್ ಹಮೀದ್, ಅಧಿಕಾರಿಗಳು ಜೊತೆಗಿದ್ದರು.261031-39-2052255134