‘ಇಂಡಿಯಾ’ ಸಭೆ: ಕೇಂದ್ರದ ಮುಂದೆ ಮೂರು ಬೇಡಿಕೆ ಇಟ್ಟ ಎಐಸಿಸಿ ಅಧ್ಯಕ್ಷ ಖರ್ಗೆ
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸುವಂತೆ ಆಗ್ರಹಿಸಿ ‘ಇಂಡಿಯಾ ಒಕ್ಕೂಟ’ ಶನಿವಾರ ಸಾರ್ವಜನಿಕ ಮಹಾಭಿಯೋಗ ನಡೆಸಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಸೂಚನೆಯಂತೆ ಚುನಾವಣಾ ಆಯೋಗ ಕಾರ್ಯನಿರ್ವಹಿಸುತ್ತಿದೆ. ಇದರಿಂದ ದೇಶದ ಜನರ ಮತದಾನದ ಹಕ್ಕಿಗೆ ಅಪಾಯ ಎದುರಾಗಿದೆ ಎಂದು ವಿಪಕ್ಷ ನಾಯಕರು ಆರೋಪಿ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸುವಂತೆ ಆಗ್ರಹಿಸಿ ‘ಇಂಡಿಯಾ ಒಕ್ಕೂಟ’ ಶನಿವಾರ ಸಾರ್ವಜನಿಕ ಮಹಾಭಿಯೋಗ ನಡೆಸಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಸೂಚನೆಯಂತೆ ಚುನಾವಣಾ ಆಯೋಗ ಕಾರ್ಯನಿರ್ವಹಿಸುತ್ತಿದೆ. ಇದರಿಂದ ದೇಶದ ಜನರ ಮತದಾನದ ಹಕ್ಕಿಗೆ ಅಪಾಯ ಎದುರಾಗಿದೆ ಎಂದು ವಿಪಕ್ಷ ನಾಯಕರು ಆರೋಪಿಸಿದ್ದಾರೆ.ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೋಕಸಭೆಯ ಮಾಜಿ ಸ್ಪೀಕರ್ ಮೀರಾ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. INDIA ಒಕ್ಕೂಟದ ನಾಯಕರು, ಸಂಸದರು, ಸಮಾಜದ ಪ್ರತಿನಿಧಿಗಳು ಹಾಗೂ ಮತದಾರರ ಪಟ್ಟಿಯಿಂದ ಹೆಸರು ಬಿಟ್ಟುಹೋದ ಕೆಲವರು ಸಭೆಯಲ್ಲಿ ಭಾಗವಹಿಸಿದ್ದರು.ಕಾರ್ಯಕ್ರಮದಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಅವರು ತಮ್ಮ ಕರ್ತವ್ಯವನ್ನು ನಿಸ್ಪಕ್ಷಪಾತವಾಗಿ ನಿರ್ವಹಿಸುತ್ತಿಲ್ಲ. ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರ ನಿರ್ದೇಶನದಂತೆ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.ಮೂರು ಬೇಡಿಕೆಸಾರ್ವಜನಿಕ ದೋಷಾರೋಪಣೆ ಸಭೆಯಲ್ಲಿ ಇಂಡಿಯಾ ಬ್ಲಾಕ್ ಕೂಟವು ಪ್ರಮುಖ ಮೂರು ಬೇಡಿಕೆಗಳನ್ನು ಮುಂದಿಟ್ಟಿದೆ. ಸಿಇಸಿ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಹುದ್ದೆಯಿಂದ ವಜಾಗೊಳಿಸುವುದು.2023ರ ಮುಖ್ಯ ಚುನಾವಣಾಧಿಕಾರಿ ನೇಮಕದ ಕಾನೂನನ್ನು ರದ್ದುಗೊಳಿಸಬೇಕುಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.ಚುನಾವಣಾ ಆಯೋಗದ ವಿರುದ್ಧ ಆರೋಪಮತದಾರರ ಪಟ್ಟಿಯಿಂದ ಹೆಸರುಗಳನ್ನು ತಪ್ಪಾಗಿ ತೆಗೆದುಹಾಕಲಾಗುತ್ತಿದೆ. ದೆಹಲಿಯಲ್ಲಿ ಕುಳಿತು ಕಂಪ್ಯೂಟರ್ ಮೂಲಕ ಜನರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಅವಕಾಶ ಯಾರಿಗೂ ಇರಕೂಡದು ಎಂದು ಖರ್ಗೆ ಹೇಳಿದರು.ಚುನಾವಣಾ ಆಯುಕ್ತರನ್ನು ನೇಮಕ ಮಾಡುವ 2023ರ ಕಾಯ್ದೆಯನ್ನು ರದ್ದುಗೊಳಿಸಬೇಕು. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಮತ್ತು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿದರು.2023ರ ಕಾಯ್ದೆಯು ಮುಖ್ಯ ಚುನಾವಣಾ ಆಯುಕ್ತರಿಗೆ ಹೆಚ್ಚಿನ ರಕ್ಷಣೆ ನೀಡಿದೆ. ಈ ಕಾಯ್ದೆ ಜಾರಿಗೆ ಬಂದ ನಂತರ ಚುನಾವಣಾ ಆಯೋಗದ ಮುಖ್ಯಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದು ಕಷ್ಟವಾಗಿದೆ ಎಂದು ಖರ್ಗೆ ಆರೋಪಿಸಿದರು.⦿ CEC ज्ञानेश कुमार को तत्काल पद से हटाया जाए⦿ 2023 का कानून रद्द किया जाए⦿ SIR की प्रक्रिया तत्काल रोकी जाए: CEC ज्ञानेश कुमार के खिलाफ जन-महाभियोग में कांग्रेस अध्यक्ष श्री @kharge दिल्ली pic.twitter.com/s6vbtZ2r2I— Congress (@INCIndia) October 31, 2026 13.3 ಕೋಟಿ ಮತದಾರರ ಹೆಸರು ಅಳಿಸಿದ ಆರೋಪಎಸ್ಐಆರ್ ಪ್ರಕ್ರಿಯೆಯಿಂದ ಸುಮಾರು 13.3 ಕೋಟಿ ಮತದಾರರ ಹೆಸರುಗಳನ್ನು ಉದ್ದೇಶಪೂರ್ವಕವಾಗಿ ತೆಗೆದುಹಾಕಲಾಗಿದೆ. ಅಲ್ಲದೆ, ಹೊಸ ಮತದಾರರ ನೋಂದಣಿಗೆ ಸಂಬಂಧಿಸಿದ ಫಾರ್ಮ್-6ರಲ್ಲಿ ಸಂಸತ್ತಿನ ಅನುಮತಿ ಪಡೆಯದೆ ಅಕ್ರಮವಾಗಿ ಬದಲಾವಣೆ ಮಾಡಲಾಗಿದೆ ಎಂದು ಖರ್ಗೆ ಆರೋಪಿಸಿದರು.ಪ್ರಜಾಪ್ರಭುತ್ವ ಉಳಿಸಲು ಹೋರಾಟಭಾರತದ ಸಂವಿಧಾನದ 326ನೇ ವಿಧಿಯು 18 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೆ ಮತದಾನದ ಹಕ್ಕು ನೀಡಿದೆ. ಆದರೆ ಈಗ ಆ ಹಕ್ಕಿಗೆ ಅಪಾಯ ಎದುರಾಗಿದೆ ಎಂದು ಖರ್ಗೆ ಹೇಳಿದರು. ಮತದಾನದ ಹಕ್ಕು ಯಾವುದೇ ಪಕ್ಷದ ಅಥವಾ ವ್ಯಕ್ತಿಯ ಸ್ವತ್ತಲ್ಲ. ದೇಶದ ಪ್ರತಿಯೊಬ್ಬ ಅರ್ಹ ನಾಗರಿಕನ ಹಕ್ಕು. ಅದನ್ನು ರಕ್ಷಿಸುವುದು ನಮ್ಮ ಉದ್ದೇಶ ಎಂದರು.ಕಾರ್ಯಕ್ರಮದ ಭಾಗವಾಗಿ ಜ್ಞಾನೇಶ್ ಕುಮಾರ್ ವಿರುದ್ಧದ ಆರೋಪಗಳನ್ನು ಮಂಡಿಸಲಾಯಿತು. ಅವರನ್ನು ದೇಶದ್ರೋಹದ ಆರೋಪದಡಿ ನ್ಯಾಯಾಲಯದಲ್ಲಿ ವಿಚಾರಣೆಗೆ ಒಳಪಡಿಸಬೇಕು ಎಂದು INDIA ಒಕ್ಕೂಟದ ಸಂಸದರು ಒತ್ತಾಯಿಸಿದ್ದಾರೆ.ಭಾನುವಾರ ದೆಹಲಿಯಲ್ಲಿ ಬೃಹತ್ ಪ್ರತಿಭಟನೆಚುನಾವಣಾ ಆಯೋಗದ ವಿರುದ್ಧದ ಆರೋಪಗಳನ್ನು ಮುಂದಿಟ್ಟು INDIA ಒಕ್ಕೂಟ ತನ್ನ ಹೋರಾಟವನ್ನು ತೀವ್ರಗೊಳಿಸಿದೆ. ಇದರ ಮುಂದುವರಿದ ಭಾಗವಾಗಿ ಭಾನುವಾರ ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್ ಪ್ರತಿಭಟನೆ ಆಯೋಜಿಸಲಾಗಿದೆ.‘ವೋಟ್ ಬಚಾವೋ, ದೇಶ್ ಬಚಾವೋ’ (ಮತ ಉಳಿಸಿ, ದೇಶ ಉಳಿಸಿ) ಎಂಬ ಘೋಷಣೆ ಅಡಿ ಈ ಪ್ರತಿಭಟನಾ ರ್ಯಾಲಿ ನಡೆಯಲಿದೆ. ಚುನಾವಣಾ ಆಯೋಗವು ಉತ್ತರದಾಯಿತ್ವ ಹೊಂದಿರಬೇಕು ಮತ್ತು ಮುಖ್ಯ ಚುನಾವಣಾ ಆಯುಕ್ತರನ್ನು ಹುದ್ದೆಯಿಂದ ತೆಗೆದುಹಾಕಬೇಕು ಎಂಬುದು ವಿಪಕ್ಷಗಳ ಪ್ರಮುಖ ಬೇಡಿಕೆಯಾಗಿದೆ.