ಅಂಕೋಲಾ: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಅಂಕೋಲಾ: ತಾಲ್ಲೂಕಿನ ಹಾರವಾಡ ಘಟ್ಟದಲ್ಲಿ 2014ರಲ್ಲಿ ಸಂಭವಿಸಿದ್ದ ಬಸ್ ಅಪಘಾತದಲ್ಲಿ ಪ್ರಯಾಣಿಕರೊಬ್ಬರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ, 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಬೆಂಗಳೂರಿನ ಕೆ.ಆರ್.ಪುರಂ ನಿವಾಸಿ, ಬಸ್ ಚಾಲಕ ಹರ್ಷ ಗಂಗಾಧರಪ್ಪ (38) ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.2014ರ ಜುಲೈ 29ರಂದು ರಾತ್ರಿ ಗೋವಾದಿಂದ

ಅಂಕೋಲಾ: ತಾಲ್ಲೂಕಿನ ಹಾರವಾಡ ಘಟ್ಟದಲ್ಲಿ 2014ರಲ್ಲಿ ಸಂಭವಿಸಿದ್ದ ಬಸ್ ಅಪಘಾತದಲ್ಲಿ ಪ್ರಯಾಣಿಕರೊಬ್ಬರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ, 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಬೆಂಗಳೂರಿನ ಕೆ.ಆರ್.ಪುರಂ ನಿವಾಸಿ, ಬಸ್ ಚಾಲಕ ಹರ್ಷ ಗಂಗಾಧರಪ್ಪ (38) ಎಂಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.2014ರ ಜುಲೈ 29ರಂದು ರಾತ್ರಿ ಗೋವಾದಿಂದ ಬೆಂಗಳೂರಿಗೆ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿತ್ತು.ಬೆಂಗಳೂರಿನ ಆನೇಕಲ್ ತಾಲ್ಲೂಕಿನ ಬಿ.ಹೊಸಳ್ಳಿ ನಿವಾಸಿ ಸುನೀಲ ನಂಜುಂಡ ರೆಡ್ಡಿ (22) ಎಂಬುವರು ಮೃತಪಟ್ಟಿದ್ದರು. ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಲಾಗಿತ್ತು.2016ರಿಂದ ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೆ ವಿಳಾಸ ಬದಲಿಸಿಕೊಂಡು ತಲೆಮರೆಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.ಪೊಲೀಸರು ಅಕ್ಟೋಬರ್ 29ರಂದು ಬೆಂಗಳೂರಿನಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ಅಂಕೋಲಾದ ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ₹50 ಸಾವಿರ ಭದ್ರತೆ ಠೇವಣಿ ಪಡೆದು ಷರತ್ತುಬದ್ಧವಾಗಿ ಬಿಡುಗಡೆ ಮಾಡಿದೆ.261031-20-681243122