ಡಾ. ಶ್ರೀನಿಧಿ ಜೊತೆಗೆ ಶಾಸಕ ದರ್ಶನ್ ಧ್ರುವನಾರಾಯಣ್ ನಿಶ್ಚಿತಾರ್ಥ; ಮದುವೆ ಸಂಭ್ರಮಕ್ಕೆ ಮುನ್ನುಡಿ ಬರೆದ ಜೋಡಿ!
– 4 ವರ್ಷಗಳಿಂದ ಪ್ರೀತಿಸಿ ನಿಶ್ಚಿತಾರ್ಥ ಮಾಡಿಕೊಂಡ ಜೋಡಿ ಮಂಡ್ಯ: ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಅವರ ಜೀವನದಲ್ಲಿ ಹೊಸ ಸಂಭ್ರಮ ಮನೆಮಾಡಿದೆ. ಕಳೆದ ನಾಲ್ಕು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ದರ್ಶನ್ ಧ್ರುವನಾರಾಯಣ್ ಹಾಗೂ ಡಾ. ಶ್ರೀನಿಧಿ ಇದೀಗ ಕುಟುಂಬಸ್ಥರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮಂಡ್ಯ ಜಿಲ್ಲೆಯ

– 4 ವರ್ಷಗಳಿಂದ ಪ್ರೀತಿಸಿ ನಿಶ್ಚಿತಾರ್ಥ ಮಾಡಿಕೊಂಡ ಜೋಡಿ ಮಂಡ್ಯ: ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಅವರ ಜೀವನದಲ್ಲಿ ಹೊಸ ಸಂಭ್ರಮ ಮನೆಮಾಡಿದೆ. ಕಳೆದ ನಾಲ್ಕು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ದರ್ಶನ್ ಧ್ರುವನಾರಾಯಣ್ ಹಾಗೂ ಡಾ. ಶ್ರೀನಿಧಿ ಇದೀಗ ಕುಟುಂಬಸ್ಥರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆಯಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್ ಹಾಗೂ ಡಾ. ಶ್ರೀನಿಧಿ ಅವರ ನಿಶ್ಚಿತಾರ್ಥ ಸಮಾರಂಭ ಸರಳವಾಗಿ ನೆರವೇರಿದೆ. ಕೆ.ಆರ್.ಪೇಟೆಯವರಾದ ಡಾ. ಶ್ರೀನಿಧಿ ಅವರೊಂದಿಗೆ ದರ್ಶನ್ ಅವರ ಪ್ರೇಮಾಂಕುರವಾಗಿದ್ದು, ಇದೀಗ ಎರಡೂ ಕುಟುಂಬಗಳ ಒಪ್ಪಿಗೆ ಹಾಗೂ ಆಶೀರ್ವಾದದೊಂದಿಗೆ ಜೋಡಿ ನಿಶ್ಚಿತಾರ್ಥ ಮಾಡಿಕೊಂಡಿದೆ. ಕಳೆದ ನಾಲ್ಕು ವರ್ಷಗಳಿಂದ ಪ್ರೀತಿಸುತ್ತಿದ್ದ ಜೋಡಿ, ಇದೀಗ ತಮ್ಮ ಪ್ರೀತಿಗೆ ಕುಟುಂಬದ ಸಮ್ಮತಿಯ ಮುದ್ರೆ ಒತ್ತಿಸಿಕೊಂಡು ಹೊಸ ಜೀವನದ ಪಯಣಕ್ಕೆ ಸಜ್ಜಾಗಿದೆ. ನಿಶ್ಚಿತಾರ್ಥ ಸಮಾರಂಭದಲ್ಲಿ ಎರಡೂ ಕುಟುಂಬಗಳ ಸದಸ್ಯರು ಭಾಗವಹಿಸಿ ನವಜೋಡಿಗೆ ಶುಭ ಹಾರೈಸಿದ್ದಾರೆ. ನಿಶ್ಚಿತಾರ್ಥದ ಬೆನ್ನಲ್ಲೇ ದರ್ಶನ್ ಧ್ರುವನಾರಾಯಣ್ ಹಾಗೂ ಡಾ. ಶ್ರೀನಿಧಿ ಅವರ ಕುಟುಂಬಗಳಲ್ಲಿ ಮದುವೆ ಸಂಭ್ರಮ ಮನೆಮಾಡಿದೆ. ಜೀವನದ ಹೊಸ ಅಧ್ಯಾಯ ಆರಂಭಿಸುತ್ತಿರುವ ಜೋಡಿಗೆ ಕುಟುಂಬಸ್ಥರು ಹಾಗೂ ಆಪ್ತರು ಶುಭಾಶಯ ಕೋರಿದ್ದಾರೆ. 4 ವರ್ಷಗಳ ಪ್ರೀತಿಗೆ ಈಗ ನಿಶ್ಚಿತಾರ್ಥದ ಸಂಭ್ರಮ ಸಿಕ್ಕಿದ್ದು, ನವಜೋಡಿಯ ಮುಂದಿನ ಜೀವನ ಸುಖಮಯವಾಗಿರಲಿ ಎಂಬ ಹಾರೈಕೆಗಳು ವ್ಯಕ್ತವಾಗಿವೆ.