ನ.5ರಿಂದ ಬಸ್ ಪ್ರಯಾಣದ ಟಿಕೆಟ್ ದರ ಏರಿಕೆ: ಸಾರಿಗೆ ಸಚಿವ ಬೈರತಿ ಸುರೇಶ್
ಚಿಕ್ಕಬಳ್ಳಾಪುರ: ಬಸ್ ಪ್ರಯಾಣದ ಟಿಕೆಟ್ ದರವು ನ.5ರಿಂದ ಹೆಚ್ಚಳವಾಗಲಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದರು.ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕಳೆದ ಒಂದು ವರ್ಷದಲ್ಲಿ 5 ಬಾರಿ ಡೀಸೆಲ್ ಬೆಲೆ ಹೆಚ್ಚಿಸಿದೆ. ಇದರಿಂದ ನಮ್ಮ ನಾಲ್ಕೂ ಸಾರಿಗೆ ನಿಗಮಗಳಿಗೆ ವಾರ್ಷಿಕ ₹ 2 ಸಾವಿರ ಕೋಟಿ ನಷ್ಟ ಆಗ

ಚಿಕ್ಕಬಳ್ಳಾಪುರ: ಬಸ್ ಪ್ರಯಾಣದ ಟಿಕೆಟ್ ದರವು ನ.5ರಿಂದ ಹೆಚ್ಚಳವಾಗಲಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದರು.ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕಳೆದ ಒಂದು ವರ್ಷದಲ್ಲಿ 5 ಬಾರಿ ಡೀಸೆಲ್ ಬೆಲೆ ಹೆಚ್ಚಿಸಿದೆ. ಇದರಿಂದ ನಮ್ಮ ನಾಲ್ಕೂ ಸಾರಿಗೆ ನಿಗಮಗಳಿಗೆ ವಾರ್ಷಿಕ ₹ 2 ಸಾವಿರ ಕೋಟಿ ನಷ್ಟ ಆಗುತ್ತಿದೆ. ಈಗಾಗಲೇ ಸಂಸ್ಥೆಗಳು ₹ 9 ಸಾವಿರ ಕೋಟಿ ನಷ್ಟದಲ್ಲಿವೆ ಎಂದು ಹೇಳಿದರು.ಈ ಹಿನ್ನೆಲೆಯಲ್ಲಿ ಬಸ್ ಪ್ರಯಾಣ ದರ ಏರಿಕೆ ಮಾಡುವುದು ಅನಿವಾರ್ಯ. ಈಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗಿದೆ. ದರ ಏರಿಕೆ ನಿರ್ಧಾರವನ್ನು ಕೈಗೊಳ್ಳುವ ಜವಾಬ್ದಾರಿಯನ್ನು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು ಸಂಪುಟ ಸಾರಿಗೆ ಇಲಾಖೆಗೆ ನೀಡಿದೆ ಎಂದು ಹೇಳಿದರು.ಈ ಹಿನ್ನೆಲೆಯಲ್ಲಿ ನ.4 ರಂದು ಇಲಾಖೆ ಮತ್ತು ಸಾರಿಗೆ ನಿಗಮಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು. ಎಷ್ಟು ಪ್ರಮಾಣದಲ್ಲಿ ಹೆಚ್ಚಿಸಬೇಕು ಎನ್ನುವ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು. 5 ರಿಂದ ಹೊಸ ಪ್ರಯಾಣ ದರ ಜಾರಿಗೆ ಬರಲಿದೆ ಎಂದರು.
Read the complete story at Prajavani