ಮಾರುವೇಷದ ಬಗ್ಗೆ CBI ತನಿಖೆ ನಡೆಸಲಿ, ಸರ್ಕಾರದಿಂದ ಸತ್ಯ ಹೊರಬಾರದು:ಆರ್.ಅಶೋಕ
ಚಿಕ್ಕಬಳ್ಳಾಪುರ: ಸಿದ್ದರಾಮಯ್ಯ ಅವರ ವಿರುದ್ಧ ನಡೆದಿರುವ ಮಾರುವೇಷದ ಕಾರ್ಯಾಚರಣೆ ಪ್ರಕರಣ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಆಗ್ರಹಿಸಿದರು.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ತನಿಖೆಯಿಂದ ಸತ್ಯ ಹೊರಬರುವುದಿಲ್ಲ ಎಂದರು.ಈಗಾಗಲೇ ಎಚ್.ಡಿ. ಕುಮಾರಸ್ವಾಮಿ ಅವರು ಈ ವಿಷಯ ಪ್ರಸ್ತಾಪಿಸಿದ್ದಾರ

ಚಿಕ್ಕಬಳ್ಳಾಪುರ: ಸಿದ್ದರಾಮಯ್ಯ ಅವರ ವಿರುದ್ಧ ನಡೆದಿರುವ ಮಾರುವೇಷದ ಕಾರ್ಯಾಚರಣೆ ಪ್ರಕರಣ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ ಆಗ್ರಹಿಸಿದರು.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ತನಿಖೆಯಿಂದ ಸತ್ಯ ಹೊರಬರುವುದಿಲ್ಲ ಎಂದರು.ಈಗಾಗಲೇ ಎಚ್.ಡಿ. ಕುಮಾರಸ್ವಾಮಿ ಅವರು ಈ ವಿಷಯ ಪ್ರಸ್ತಾಪಿಸಿದ್ದಾರೆ. ಮುಖ್ಯವಾಗಿ ಈ ಮಾರುವೇಷದ ಕಾರ್ಯಾಚರಣೆ ನಡೆಸಿದ್ದು ಯಾರು? ಹಿಂದೆ ಯಾರಿದ್ದಾರೆ? ಮೂಲಪುರುಷ ಯಾರು ಎನ್ನುವುದು ಬೇಕು ಎಂದರು.ಈ ಬಗ್ಗೆ ತನಿಖೆ ನಡೆಸದೆಯೇ ಯಾರು ವಿಡಿಯೊ ಹಂಚಿದರು, ಎಲ್ಲಿ ಹಂಚಿದರು ಎನ್ನುವ ತನಿಖೆ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಪೊಲೀಸರು ಈ ರೀತಿಯಲ್ಲಿ ತನಿಖೆ ಮಾಡುವುದಾ?ನಿಜವಾದ ಅಪರಾಧಿಯನ್ನು ಹಿಡಿಯಬೇಕು. ಪೊಲೀಸರು ನ್ಯಾಯವಾಗಿ ತನಿಖೆ ಮಾಡಬೇಕು ಎಂದು ಒತ್ತಾಯಿಸಿದರು.ಪ್ರಕರಣದ ತನಿಖೆ ಬಗ್ಗೆ ಸಿದ್ದರಾಮಯ್ಯ ಅವರೇ ಬೇಜಾರು ಮಾಡಿಕೊಂಡಿದ್ದಾರೆ. ಪ್ರಕರಣದಲ್ಲಿ ಕಾಂಗ್ರೆಸ್ ಅವರು ಇದ್ದಾರೆ ಎಂದು ಯತೀಂದ್ರ ಅವರೇ ಹೇಳಿದ್ದಾರೆ ಎಂದರು.
Read the complete story at Prajavani