ಆನ್ಲೈನ್ ಗೇಮ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ; ಪತ್ನಿ, ಕೊಂದು ಪತಿ ಆತ್ಮಹತ್ಯೆ
ರಾಯಚೂರು: ಆನ್ಲೈನ್ ಗೇಮಿಂಗ್ನಲ್ಲಿ ಕೋಟ್ಯಂತರ ರೂಪಾಯಿ ಕಳೆದುಕೊಂಡು ಸಾಲದ ಸುಳಿಗೆ ಸಿಲುಕಿದ್ದ ವ್ಯಕ್ತಿಯೊಬ್ಬರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಬಳಿಕ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ರಾಯಚೂರು ತಾಲ್ಲೂಕಿನ ಚಿಕ್ಕಸುಗೂರು ಸಮೀಪ ರೈಲು ಹಳಿಯಲ್ಲಿ ವಿಷ್ಣು ರೆಡ್ಡಿ (45) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಲಾಲ

ರಾಯಚೂರು: ಆನ್ಲೈನ್ ಗೇಮಿಂಗ್ನಲ್ಲಿ ಕೋಟ್ಯಂತರ ರೂಪಾಯಿ ಕಳೆದುಕೊಂಡು ಸಾಲದ ಸುಳಿಗೆ ಸಿಲುಕಿದ್ದ ವ್ಯಕ್ತಿಯೊಬ್ಬರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಬಳಿಕ ರೈಲು ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ರಾಯಚೂರು ತಾಲ್ಲೂಕಿನ ಚಿಕ್ಕಸುಗೂರು ಸಮೀಪ ರೈಲು ಹಳಿಯಲ್ಲಿ ವಿಷ್ಣು ರೆಡ್ಡಿ (45) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಲಾಲನಗರದಲ್ಲಿರುವ ಮನೆಯಲ್ಲಿ ಪತ್ನಿ ಅರುಣಾ (36), ಮಗ ಶ್ಲೋಕ (10) ಹಾಗೂ ಮಗಳು ಖುಷಿ (7) ಅವರನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.ತೆಲಂಗಾಣದ ನಾರಾಯಣಪುರ ಮೂಲದ ವಿಷ್ಣು ರೆಡ್ಡಿ ಆನ್ಲೈನ್ ಗೇಮಿಂಗ್ನಲ್ಲಿ ಕೋಟ್ಯಂತರ ರೂಪಾಯಿ ಕಳೆದುಕೊಂಡಿದ್ದರು. ಇದಕ್ಕಾಗಿ ಸಾಲವನ್ನೂ ಮಾಡಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.ಡಿವೈಎಸ್ಪಿ ಶಾಂತವೀರ ನೇತೃತ್ವದಲ್ಲಿ ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಯ ಪೊಲೀಸರು ತನಿಖೆ ನಡೆಸಿದ್ದಾರೆ. ನಾಲ್ವರ ಮೃತದೇಹಗಳನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಮರಣೋತ್ತರ ಪರೀಕ್ಷೆಯ ಬಳಿಕ ಹೆಚ್ಚಿನ ಮಾಹಿತಿ ತಿಳಿಯಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಶು ಗಿರಿ ತಿಳಿಸಿದ್ದಾರೆ.