ಇಂದಿನಿಂದ ಮೂರು ದಿನಗಳವರೆಗೆ ಈ ರಾಶಿಯವರಿಗೆ ಹಣಕಾಸಿನ ಸಮಸ್ಯೆ
ಜ್ಯೋತಿಷದ ಪ್ರಕಾರ ವಿವಿಧ ರಾಶಿಗಳ ಮೇಲೆ ಗ್ರಹ ಹಾಗೂ ನಕ್ಷತ್ರಗಳ ಪ್ರಭಾವವಿರುತ್ತದೆ. ಅದರಂತೆ, ನವೆಂಬರ್ 2 ರಿಂದ 4 ರವರೆಗೆ ಯಾವ ರಾಶಿಯವರಿಗೆ ಏನು ಫಲವಿದೆ ಎಂಬ ಮಾಹಿತಿ ಇಲ್ಲಿದೆ. ಮೇಷವಿವಾಹವು ಮುಂದೂಡಲ್ಪಡುತ್ತದೆ. ಮಹಿಳೆಯರು ಅನಾವಶ್ಯಕವಾಗಿ ವಿವಾದಕ್ಕೆ ಸಿಲುಕುತ್ತಾರೆ. ಕ್ಲಿಷ್ಟಕರ ಸಂದರ್ಭದಲ್ಲಿ ದಿಟ್ಟ ನಿಲುವನ್ನು ತೆಗೆದುಕೊಳ್ಳುವಿರಿ. ವಿದೇಶಕ್ಕೆ ತೆರಳುವ ಪ್ರ

ಜ್ಯೋತಿಷದ ಪ್ರಕಾರ ವಿವಿಧ ರಾಶಿಗಳ ಮೇಲೆ ಗ್ರಹ ಹಾಗೂ ನಕ್ಷತ್ರಗಳ ಪ್ರಭಾವವಿರುತ್ತದೆ. ಅದರಂತೆ, ನವೆಂಬರ್ 2 ರಿಂದ 4 ರವರೆಗೆ ಯಾವ ರಾಶಿಯವರಿಗೆ ಏನು ಫಲವಿದೆ ಎಂಬ ಮಾಹಿತಿ ಇಲ್ಲಿದೆ. ಮೇಷವಿವಾಹವು ಮುಂದೂಡಲ್ಪಡುತ್ತದೆ. ಮಹಿಳೆಯರು ಅನಾವಶ್ಯಕವಾಗಿ ವಿವಾದಕ್ಕೆ ಸಿಲುಕುತ್ತಾರೆ. ಕ್ಲಿಷ್ಟಕರ ಸಂದರ್ಭದಲ್ಲಿ ದಿಟ್ಟ ನಿಲುವನ್ನು ತೆಗೆದುಕೊಳ್ಳುವಿರಿ. ವಿದೇಶಕ್ಕೆ ತೆರಳುವ ಪ್ರಯತ್ನ ನೆರವೇರುತ್ತದೆ. ಹಾಸ್ಯದ ಮನೋಭಾವನೆ ಕುಟುಂಬದಲ್ಲಿ ಶಾಂತಿ ನೆಲೆಸುವಂತೆ ಮಾಡುತ್ತದೆ. ಉದ್ಯೋಗದಲ್ಲಿ ಅನಿರೀಕ್ಷಿತ ಯಶಸ್ಸು ದೊರೆಯುತ್ತದೆ. ಹಣಕಾಸಿನ ವ್ಯವಹಾರದಲ್ಲಿ ಲಾಭ ಗಳಿಸುವಿರಿ. ಆರೋಗ್ಯದ ಬಗ್ಗೆ ಎಚ್ಚರಿಕೆ ವಹಿಸಿ.ಅಕ್ಟೋಬರ್ 29 ರಿಂದ 31: ಈ ರಾಶಿಯವರಿಗೆ ವ್ಯಾಪಾರದಲ್ಲಿ ಅನಿರೀಕ್ಷಿತ ಲಾಭವಿದೆವೃಷಭನಿಮ್ಮ ಪ್ರಗತಿಗೆ ಆತ್ಮಿಯರಿಂದಲೇ ಅಡ್ಡಿ ಉಂಟಾಗುತ್ತದೆ. ಕಣ್ಣಿನ ತೊಂದರೆ ಇರಲಿದೆ. ಸಾಕುಪ್ರಾಣಿಗಳಿಂದ ಸಮಸ್ಯೆ ಎದುರಾಗಲಿದೆ. ಕುಟುಂಬದ ಹೆಚ್ಚಿನ ಜವಾಬ್ದಾರಿಗಳು ನಿಮ್ಮದಾಗಲಿದೆ. ತಂದೆಯ ಆರೋಗ್ಯದಲ್ಲಿ ಏರಿಳಿತ ಇರಲಿದೆ. ಮಗನ ವ್ಯಾಪಾರದಲ್ಲಿನ ಲೋಪ ದೋಷಗಳನ್ನು ಸರಿಪಡಿಸುವಿರಿ. ಹಠದ ಸ್ವಭಾವದಿಂದ ಕೆಲಸ ಸಾಧಿಸುವಿರಿ. ನಿಮ್ಮ ಪ್ರಯತ್ನಕ್ಕೆ ತಕ್ಕಂತಹ ಹಣಕಾಸಿನ ಅನುಕೂಲತೆ ಇರುತ್ತದೆ.ಮಿಥುನಉತ್ತಮ ಆದಾಯವಿದ್ದರೂ ಹಣದ ಕೊರತೆ ನಿಮ್ಮನ್ನು ಕಾಡುತ್ತದೆ. ಕುಟುಂಬದ ಹಿರಿಯರ ಜೊತೆಯಲ್ಲಿ ಹೊಂದಾಣಿಕೆ ಇರುವುದಿಲ್ಲ. ನಿಮ್ಮ ಮಕ್ಕಳ ಜೊತೆಯಲ್ಲಿ ಉತ್ತಮ ಅನುಬಂಧ ಇರುತ್ತದೆ. ಸಂತಾನ ಲಾಭವಿದೆ. ಕುಟುಂಬದ ಹಣಕಾಸಿನ ವಿಚಾರದಲ್ಲಿ ಪರಸ್ಪರ ಭಿನ್ನಾಭಿಪ್ರಾಯ ಇರುತ್ತದೆ. ಗಣ್ಯವ್ಯಕ್ತಿಗಳನ್ನು ಭೇಟಿ ಮಾಡುವಿರಿ. ನೇರವಾದ ನಡೆ ನುಡಿ ಇರುತ್ತದೆ. ಉದ್ಯೋಗದಲ್ಲಿ ಹೆಚ್ಚಿನ ಒತ್ತಡವನ್ನು ಎದುರಿಸುವಿರಿ.ಕಟಕಅತಿಯಾದ ಆತ್ಮವಿಶ್ವಾಸವಿರುತ್ತದೆ. ಈ ಕಾರಣದಿಂದ ಕೆಲಸ ಕಾರ್ಯಗಳಲ್ಲಿ ಹಿನ್ನೆಡೆ ಇರಲಿದೆ. ನಿಮ್ಮ ಗೌರವವನ್ನು ಕಾಪಾಡಿಕೊಳ್ಳಲು ಯಾವುದೇ ತ್ಯಾಗ ಮಾಡುವಿರಿ. ಹೊಸ ವಾಹನವನ್ನು ಕೊಳ್ಳುವ ಸಾಧ್ಯತೆಗಳಿವೆ. ವಾಸ ಸ್ಥಳವನ್ನು ಬದಲಿಸುವಿರಿ. ನಿಮ್ಮ ಮಗನು ಉದ್ಯೋಗಕ್ಕಾಗಿ ವಿದೇಶಕ್ಕೆ ತೆರಳಲಿದ್ದಾನೆ. ಉತ್ತಮ ಪ್ರಯತ್ನವಿಲ್ಲದೆ ಯಶಸ್ಸು ಗಳಿಸಲು ಸಾಧ್ಯವಿಲ್ಲ. ಹೆಚ್ಚಿನ ಪ್ರಯತ್ನದಿಂದ ಉದ್ಯೋಗವನ್ನು ಬದಲಿಸಬಹುದು. ಇಂದಿನಿಂದ ಮೂರು ದಿನದ ವರೆಗೆ ಈ ರಾಶಿಯವರಿಗೆ ಆರ್ಥಿಕ ಬಿಕ್ಕಟ್ಟುಸಿಂಹಸೋದರಿಯೊಡನೆ ಹಣಕಾಸಿನ ವಿಚಾರದಲ್ಲಿ ಮನಸ್ತಾಪವಿರುತ್ತದೆ. ಮಕ್ಕಳ ಆರೋಗ್ಯದಲ್ಲಿ ತೊಂದರೆ ಉಂಟಾಗಲಿದೆ. ಸತತ ಪ್ರಯತ್ನದಿಂದ ಮಾತ್ರ ಆರಂಭಿಸಿದ ಕೆಲಸ ಕಾರ್ಯಗಳಲ್ಲಿ ಯಶಸ್ಸು ದೊರೆಯುತ್ತದೆ. ಅನಿರೀಕ್ಷಿತ ಧನ ಲಾಭವಿರುತ್ತದೆ. ನಿಮ್ಮ ಮನಸ್ಸನ್ನು ಅರಿಯಲು ಸಾಧ್ಯವಿಲ್ಲ. ಒಮ್ಮೆ ತೆಗೆದುಕೊಂಡ ತೀರ್ಮಾನಗಳಿಗೆ ಬದ್ಧರಾಗುವಿರಿ. ಮನಸ್ಸಿನಲ್ಲಿ ಭಯ ನೆಲೆಸಿರುತ್ತದೆ. ತಂದೆ ತಾಯಿಯಿಂದ ಹಣದ ಸಹಾಯ ಇರಲಿದೆ. ದಂಪತಿಗಳ ನಡುವೆ ಮಕ್ಕಳ ವಿಚಾರದಲ್ಲಿ ಮನಸ್ತಾಪವಿರುತ್ತದೆ.ಕನ್ಯಾಚರ್ಮದ ದೋಷ ಉಂಟಾಗುತ್ತದೆ. ಯುವಕರ ಜೀವನದಲ್ಲಿ ಅನಿರೀಕ್ಷಿತವಾಗಿ ಉತ್ತಮ ಬದಲಾವಣೆಗಳು ಕಂಡು ಬರಲಿವೆ. ವಿದೇಶಿ ಸಂಸ್ಥೆಯಲ್ಲಿ ಉದ್ಯೋಗ ಲಭಿಸುತ್ತದೆ. ವಿದ್ಯಾರ್ಥಿಗಳು ನಿರೀಕ್ಷೆಯಂತೆ ಕಲಿಕೆಯಲ್ಲಿ ತೊಡಗಲು ಸಾಧ್ಯವಾಗುವುದಿಲ್ಲ. ಕಣ್ಣಿನ ತೊಂದರೆಯು ಪರಿಹಾರವಾಗುತ್ತದೆ. ಹೆಣ್ಣು ಮಕ್ಕಳಿಗೆ ವಿವಾಹ ಯೋಗವಿದೆ. ಹಣಕಾಸಿನ ವ್ಯಾಪಾರ ವ್ಯವಹಾರದಲ್ಲಿ ಉನ್ನತ ಮಟ್ಟ ತಲುಪುವಿರಿ. ಉದ್ಯೋಗವನ್ನು ಬದಲಿಸುವ ಸಾಧ್ಯತೆಗಳಿವೆ. ವಾಹನ ಚಾಲನೆ ಮಾಡುವ ವೇಳೆ ಎಚ್ಚರಿಕೆ ಇರಲಿ. ತುಲಾಆರೋಗ್ಯದಲ್ಲಿ ಪ್ರಗತಿ ಕಂಡು ಬರುತ್ತದೆ. ಆತಂಕದ ಪರಿಸ್ಥಿತಿಯಲ್ಲಿ ಬುದ್ದಿವಂತಿಕೆಯ ನಿರ್ಧಾರವನ್ನು ತೆಗೆದುಕೊಳ್ಳುವಿರಿ. ಮಗನ ಜೊತೆಯಲ್ಲಿ ಉತ್ತಮ ಬಾಂಧವ್ಯ ಇರುವುದಿಲ್ಲ. ಆದಾಯದಲ್ಲಿ ಕೊರತೆ ಉಂಟಾಗುತ್ತದೆ. ಉದ್ಯೋಗದಲ್ಲಿ ಉನ್ನತ ಅಧಿಕಾರ ಲಭ್ಯವಾಗುತ್ತದೆ. ಸಮಾಜದಲ್ಲಿ ಗೌರವಯುತ ಸ್ಥಾನಮಾನ ಗಳಿಸುವಿರಿ. ವದಂತಿಗಳನ್ನು ನಂಬುವಿರಿ. ಕಮಿಷನ್ ಸಿಗುವ ವ್ಯವಹಾರದಲ್ಲಿ ಉತ್ತಮ ಆದಾಯವಿರುತ್ತದೆ. ಇಂದಿನಿಂದ ಮೂರು ದಿನಗಳವರೆಗೆ ಈ ರಾಶಿಯವರಿಗೆ ಸಿಗಲಿದೆ ಅರ್ಥಿಕ ಲಾಭವೃಶ್ಚಿಕಉತ್ತಮ ಆದಾಯವಿದ್ದರೂ ಹಣ ಉಳಿಸಲು ಸಾಧ್ಯವಿಲ್ಲ. ಖರ್ಚು ವೆಚ್ಚಗಳು ಹೆಚ್ಚುತ್ತವೆ. ವಿದೇಶಕ್ಕೆ ತೆರಳುವ ಸಾಧ್ಯತೆಗಳಿವೆ. ದಂಪತಿಗಳ ನಡುವಿನ ಮನಸ್ತಾಪ ದೂರವಾಗುತ್ತದೆ. ಮನೆತನದಲ್ಲಿ ಉನ್ನತ ಗೌರವ ಲಭಿಸುತ್ತದೆ. ದೇವತಾ ಕಾರ್ಯಗಳನ್ನು ನೆರವೇರಿಸುವಿರಿ. ಕಾನೂನಿನ ತೊಂದರೆಯಿಂದ ಪಾರಾಗುವಿರಿ. ಸುಲಭವಾಗಿ ಬೇರೆಯವರ ಮಾತನ್ನು ನಂಬುವುದಿಲ್ಲ. ಹೊಸ ವಾಹನ ಕೊಳ್ಳುವಿರಿ. ಧನಸ್ಸುಆತ್ಮೀಯರಿಂದ ಹಣಕಾಸಿನ ನೆರವು ದೊರೆಯುತ್ತದೆ. ಜ್ವರದಿಂದ ಬಳಲುವಿರಿ. ಯಾವುದೇ ವಿಚಾರದಲ್ಲಿ ದೃಢ ನಿರ್ಧಾರವನ್ನು ತೆಗೆದುಕೊಳ್ಳುವುದಿಲ್ಲ. ಕಷ್ಟವಿಲ್ಲದ ಕೆಲಸ ಕಾರ್ಯಗಳನ್ನು ಮಾಡುವಿರಿ. ಸ್ವಂತ ವ್ಯಾಪಾರ ವ್ಯವಹಾರದಲ್ಲಿ ಉತ್ತಮ ಆದಾಯವಿರುತ್ತದೆ. ಸತತ ಪ್ರಯತ್ನದಿಂದ ಆರಂಭಿಸಿದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಕಾಣುವಿರಿ. ಮಕರವಿದ್ಯಾರ್ಥಿಗಳು ಕಲಿಕೆಯಲ್ಲಿ ಉನ್ನತ ಮಟ್ಟ ತಲುಪಲಿದ್ದಾರೆ. ಉದ್ಯೋಗದಲ್ಲಿ ಕಿರಿಯ ಅಧಿಕಾರಿಗಳ ಮೆಚ್ಚುಗೆ ಗಳಿಸುವಿರಿ. ವಿಶೇಷ ಸ್ಥಾನಮಾನ ನಿಮ್ಮದಾಗಲಿದೆ. ಜನೋಪಕಾರಿ ಕೆಲಸ ಕಾರ್ಯಗಳನ್ನು ಮಾಡುವಿರಿ. ಕುಟುಂಬದ ಸದಸ್ಯರ ಜೊತೆ ಪ್ರವಾಸಕ್ಕೆ ತೆರಳುವಿರಿ. ಬೇಗನೆ ಕೋಪಗೊಂಡು ತಪ್ಪು ನಿರ್ಧಾರಗಳನ್ನು ತೆಗೆದುಕೊಳ್ಳುವಿರಿ. ಹಣಕಾಸಿನ ವಿಚಾರದಲ್ಲಿ ನಿಧಾನಗತಿಯ ಪ್ರಗತಿ ಇರುತ್ತದೆ.ಕುಂಭಉದ್ಯೋಗದಲ್ಲಿ ಅಧಿಕಾರಿಗಳ ಜೊತೆ ವಾದ ವಿವಾದವಿರುತ್ತದೆ. ತಂದೆ ಮಕ್ಕಳ ನಡುವೆ ಉತ್ತಮ ಬಾಂಧವ್ಯ ಇರುವುದಿಲ್ಲ. ಉತ್ತಮ ಆರೋಗ್ಯ ಲಭಿಸುತ್ತದೆ. ಹಣಕಾಸಿನ ತೊಂದರೆ ಇರುವುದಿಲ್ಲ. ಧಾರ್ಮಿಕ ಗುರುಗಳನ್ನು ಭೇಟಿ ಮಾಡುವಿರಿ. ನಿಮ್ಮ ತಂದೆಯವರ ಆರೋಗ್ಯದಲ್ಲಿ ಸಮಸ್ಯೆಗಳು ಎದುರಾಗಲಿದೆ. ಸಮಾಜದಲ್ಲಿ ಉತ್ತಮ ಸ್ಥಾನಮಾನ ದೊರೆಯಲಿದೆ. ಮೀನನವಜಾತ ಶಿಶುಗಳ ಆರೋಗ್ಯದಲ್ಲಿ ಸಮಸ್ಯೆ ಎದುರಾಗಲಿದೆ. ಬುದ್ಧಿವಂತಿಕೆಯಿಂದ ಕುಟುಂಬದಲ್ಲಿ ಸಾಮರಸ್ಯ ಉಂಟು ಮಾಡುವಿರಿ. ಜೀವನದಲ್ಲಿ ಉತ್ತಮ ಬದಲಾವಣೆಗಳು ಕಂಡು ಬರಲಿವೆ. ಧೈರ್ಯ ಸಾಹಸದ ಗುಣವಿರುತ್ತದೆ. ಕಣ್ಣಿನ ದೋಷವಿರುತ್ತದೆ. ತಲೆಗೆ ಪೆಟ್ಟಾಗಬಹುದು. ಯಾತ್ರಾ ಸ್ಥಳಕ್ಕೆ ಭೇಟಿ ನೀಡುವಿರಿ. ಪಾಲುಗಾರಿಕೆಯ ವ್ಯಾಪಾರದಲ್ಲಿ ಉತ್ತಮ ಲಾಭಾಂಶ ದೊರೆಯುತ್ತದೆ. ಮನೆತನದ ವೃತ್ತಿಯನ್ನು ಮುಂದುವರಿಸುವಿರಿ.