ನಿವೇಶನರಹಿತರಿಗೆ 24 ಸಾವಿರ ನಿವೇಶನ ಹಂಚಿಕೆ ಕಾರ್ಯ ಪ್ರಗತಿಯಲ್ಲಿದೆ: ಸಚಿವ ಬೈರತಿ
ಚಿಕ್ಕಬಳ್ಳಾಪುರ: ನಗರದ ಸರ್.ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಅದ್ದೂರಿಯಾಗಿ 71ನೇ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಧ್ವಜಾರೋಹಣ ನೆರವೇರಿಸುವ ಮೂಲಕ ರಾಜ್ಯೋತ್ಸವಕ್ಕೆ ಚಾಲನೆ ನೀಡಿದರು.ವಿವಿಧ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳು ನಾಡು ನುಡಿಗೆ ಸಂಬಂಧಿಸಿದ ಗೀತೆಗಳಿಗೆ ನೃತ್ಯ ಮಾಡಿದರು. ‘ಹುಟ್ಟಿದರೆ

ಚಿಕ್ಕಬಳ್ಳಾಪುರ: ನಗರದ ಸರ್.ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಅದ್ದೂರಿಯಾಗಿ 71ನೇ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಧ್ವಜಾರೋಹಣ ನೆರವೇರಿಸುವ ಮೂಲಕ ರಾಜ್ಯೋತ್ಸವಕ್ಕೆ ಚಾಲನೆ ನೀಡಿದರು.ವಿವಿಧ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳು ನಾಡು ನುಡಿಗೆ ಸಂಬಂಧಿಸಿದ ಗೀತೆಗಳಿಗೆ ನೃತ್ಯ ಮಾಡಿದರು. ‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು...’, ‘ಕನ್ನಡ ನಾಡು ಚೆನ್ನ, ಕನ್ನಡ ನುಡಿ’, ‘ಕನ್ನಡ ನಾಡಿನ ವೀರ ರಮಣಿಯ, ಗಂಡು ಭೂಮಿಯ ವೀರ ನಾರಿಯ’...ಸೇರಿದಂತೆ ವಿವಿಧ ಹಾಡುಗಳಿಗೆ ಹೆಜ್ಜೆ ಹಾಕಿದರು. ವಿವಿಧ ಕ್ಷೇತ್ರಗಳ 71 ಸಾಧಕರನ್ನು ಸನ್ಮಾನಿಸಲಾಯಿತು.ಬೈರತಿ ಸುರೇಶ್ ಮಾತನಾಡಿ, ಗ್ಯಾರಂಟಿ ಯೋಜನೆಗಳ ಮೂಲಕ ಜಿಲ್ಲೆಗೆ ₹ 3,318.37 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಎತ್ತಿನಹೊಳೆ ಯೋಜನೆಯಲ್ಲಿ ಜಿಲ್ಲೆಗೆ 5.093 ಟಿಎಂಸಿ ಅಡಿ ನೀರು ಹಂಚಿಕೆಯ ಕಾರ್ಯ ಪ್ರಗತಿಯಲ್ಲಿದೆ. ಕಂದಾಯ ಇಲಾಖೆಯಿಂದ ಜಿಲ್ಲೆಯನ್ನು ಸಂಪೂರ್ಣ ‘ಕಂದಾಯ ಗ್ರಾಮ ವಿಶೇಷ ಅಭಿಯಾನ’ ಹಮ್ಮಿಕೊಳ್ಳಲಾಗುತ್ತಿದೆ. ನಿವೇಶನರಹಿತರಿಗೆ ಸುಮಾರು 24,112 ನಿವೇಶನಗಳನ್ನು ಹಂಚುವ ಕಾರ್ಯ ಪ್ರಗತಿಯಲ್ಲಿದೆ ಎಂದು ಹೇಳಿದರು.ಶಿಡ್ಲಘಟ್ಟ ತಾಲ್ಲೂಕಿನಲ್ಲಿ ₹ 200 ಕೋಟಿ ವೆಚ್ಚದ ಹೈಟೆಕ್ ರೇಷ್ಮೆ ಗೂಡು ಮಾರುಕಟ್ಟೆ, ಚಿಕ್ಕಬಳ್ಳಾಪುರದಲ್ಲಿ ₹ 141.50 ಕೋಟಿ ವೆಚ್ಚದ ಅಂತರರಾಷ್ಟ್ರೀಯ ಮಟ್ಟದ ಹೈಟೆಕ್ ಹೂವಿನ ಮಾರುಕಟ್ಟೆ ಹಾಗೂ ನಂದಿ ಬೆಟ್ಟದಲ್ಲಿ ₹ 94 ಕೋಟಿ ವೆಚ್ಚದ ರೋಪ್ ವೇ ನಿರ್ಮಾಣ ಕಾರ್ಯಗಳು ವಿವಿಧ ಹಂತದಲ್ಲಿ ಪ್ರಗತಿಯಲ್ಲಿವೆ ಎಂದು ವಿವರಿಸಿದರು.ಇಲ್ಲಿಯವರೆಗೆ 10,07,755 ವಿದ್ಯಾರ್ಥಿಗಳಿಗೆ ಉಚಿತ ಬಸ್ಪಾಸ್ಗಳನ್ನು ವಿತರಿಸಲಾಗಿದೆ. ಮೆಟ್ರೊ ಮತ್ತು ಬಸ್ಗಳಲ್ಲಿ ಪ್ರಯಾಣಿಸಲು ಅನುಕೂಲ ಆಗುವಂತೆ ಇಂಟಿಗ್ರೇಟೆಡ್ ಮೊಬೈಲ್ ಆ್ಯಪ್ ಅಭಿವೃದ್ಧಿಪಡಿಸಲಾಗಿದೆ ಎಂದರು.ರಾಜ್ಯದ ಜನರಿಗೆ ಇನ್ನಷ್ಟು ಉತ್ತಮ ಸಾರಿಗೆ ವ್ಯವಸ್ಥೆ ಕಲ್ಪಿಸುವ ದೃಷ್ಟಿಯಿಂದ ಪಿಎಂ ಇ- ಡ್ರೈವ್ ಯೋಜನೆಯಡಿ 4,500 ಮತ್ತು ವಿಶ್ವಬ್ಯಾಂಕ್ ನೆರವಿನಲ್ಲಿ 2,000 ಬಸ್ ಪಡೆದುಕೊಳ್ಳಲಾಗುತ್ತಿದೆ. ಈ ಮೂಲಕ ಸರ್ಕಾರಿ ಸ್ವಾಮ್ಯದ ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲಾಗುತ್ತಿದೆ. 6,500 ಹೊಸ ಬಸ್ಗಳನ್ನು ಹಂತ ಹಂತವಾಗಿ ಸಾರ್ವಜನಿಕ ಸೇವೆಗೆ ಪರಿಚಯಿಸಲಾಗುತ್ತಿದೆ ಎಂದು ತಿಳಿಸಿದರು.‘ಶಕ್ತಿ’ ಯೋಜನೆಯಡಿ ಇದುವರೆಗೆ ₹ 845.33 ಕೋಟಿ ಮಹಿಳಾ ಪ್ರಯಾಣಿಕರು ಉಚಿತವಾಗಿ ಪ್ರಯಾಣಿಸಿದ್ದಾರೆ. ಇದಕ್ಕಾಗಿ ಸರ್ಕಾರ ₹ 22,281.94 ಕೋಟಿ ವ್ಯಯಿಸಿದೆ ಎಂದು ಮಾಹಿತಿ ನೀಡಿದರು.ಬರದ ನಿರ್ವಹಣೆಯ ಭಾಗವಾಗಿ 1.53 ಲಕ್ಷ ರೈತರನ್ನು ಬೆಳೆ ವಿಮೆ ಯೋಜನೆಯಡಿ ನೋಂದಾಯಿಸಲಾಗಿದೆ. ಈ ಪೈಕಿ ಬಿತ್ತನೆ ಕಾರ್ಯ ವಿಫಲವಾಗಿರುವ 1.3 ಲಕ್ಷ ರೈತರಿಗೆ ₹ 140.44 ಕೋಟಿ ಅನುದಾನ ನೀಡಲು ಕ್ರಮವಹಿಸಲಾಗಿದೆ ಎಂದರು.ಕನ್ನಡ ಅತ್ಯಂತ ವಿಶ್ವ ಶ್ರೇಷ್ಠ ಭಾಷೆಯಾಗಿದೆ. ನಮ್ಮ ಸಂಸ್ಕೃತಿ - ಸಂಭ್ರಮ, ಅಭಿಮಾನ ಮತ್ತು ನಮ್ಮ ಅಸ್ಮಿತೆಯಾಗಿದೆ. ನಮ್ಮ ಭಾಷೆಗೆ 8 ಜ್ಞಾನಪೀಠ ಪ್ರಶಸ್ತಿ ಬಂದಿರುವುದು ಹೆಮ್ಮೆ ವಿಚಾರ. ಕರ್ನಾಟಕದ ಮಣ್ಣು, ಹವಾಗುಣ, ವೈವಿಧ್ಯ ಇಡೀ ವಿಶ್ವದ ಜನರನ್ನು ಆಕರ್ಷಿಸುತ್ತಿದೆ. ಕನ್ನಡ ಮಣ್ಣಿನಲ್ಲಿ ಹಲವು ರಾಜ್ಯ ಮಹಾರಾಜರುಗಳು ಸಾಂಸ್ಕೃತಿಕ ವೈಭವದ ಕೊಡುಗೆ ನೀಡಿದ್ದಾರೆ. ದಾಸರು, ದಾರ್ಶನಿಕರು, ವಚನಕಾರರು, ಸಾಹಿತಿಗಳು, ವಿದ್ವಾಂಸದರು ತಮ್ಮದೇ ಆದ ವಿಶಿಷ್ಟವಾದ ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.ಬ್ಯಾಡ್ಮಿಂಟನ್ ಅಂಕಣ ಉದ್ಘಾಟನೆ: ಜಿಲ್ಲಾ ಕ್ರೀಡಾಂಗಣದ ಒಳಾಂಗಣ ಕ್ರೀಡಾಂಗಣದಲ್ಲಿ ₹ 40 ಲಕ್ಷದಲ್ಲಿ ಅಭಿವೃದ್ಧಿಪಡಿಸಿರುವ ಬ್ಯಾಡ್ಮಿಂಟನ್ ಅಂಕಣವನ್ನು ಸಚಿವರು ಉದ್ಘಾಟಿಸಿದರು.ಜಿಲ್ಲಾಧಿಕಾರಿ ಜಿ.ಪ್ರಭು, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಗಿರೀಶ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎನ್.ಭಾಸ್ಕರ್, ರಾಜ್ಯ ಸಹಕಾರ ಕೈಮಗ್ಗ ನೇಕಾರರ ಮಂಡಳಿ ಅಧ್ಯಕ್ಷ ಬಿ.ಜಿ ಗಣೇಶ್, ಜಿಲ್ಲಾ ಗ್ಯಾರಂಟಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಯಲುವಳ್ಳಿ ರಮೇಶ್, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸಂದೀಪ್ ಚಕ್ರವರ್ತಿ, ಉಪವಿಭಾಗಾಧಿಕಾರಿ ಶೋಭಿತಾ ಮತ್ತಿತರರು ಪಾಲ್ಗೊಂಡಿದ್ದರು.ಬಿಜೆಪಿಯವರಿಗೆ ಮಾನ ಮಾರ್ಯಾದೆ ಇಲ್ಲಒಂದು ಲೀಟರ್ ಹಾಲು ಉತ್ಪಾದನೆಗೆ ರೈತರಿಗೆ ₹ 46 ವೆಚ್ಚವಾಗುತ್ತದೆ. ರೈತರಿಗೆ ಎಲ್ಲಿ ಹಣ ದೊರೆಯುತ್ತದೆ? ಈ ವಿಚಾರದಲ್ಲಿ ಪ್ರತಿಭಟನೆಗೆ ಮುಂದಾಗಿರುವ ಬಿಜೆಪಿಯವರಿಗೆ ನಾಚಿಕೆ, ಮಾನ ಮರ್ಯಾದೆ ಇಲ್ಲ ಎಂದು ಬೈರತಿ ಸುರೇಶ್ ಕಿಡಿಕಾರಿದರು.ಬಿಜೆಪಿಯವರು ರಾಜಕೀಯ ಮಾಡುವುದಲ್ಲ. ಹಾಲು ಉತ್ಪಾದನೆಗೆ ರೈತರಿಗೆ ಎಷ್ಟು ವೆಚ್ಚ ಆಗುತ್ತದೆ ಎನ್ನುವ ಅರಿವನ್ನು ಅವರು ಹೊಂದಬೇಕು. ಪ್ರತಿಭಟನೆ ಮಾಡುವುದಿದ್ದರೆ ಮಾಡಲಿ, ರೈತರಿಗೆ ಉತ್ತರ ನೀಡಲಿ ಎಂದು ಹೇಳಿದರು.‘ಹೋರಾಟ ನಿರಂತರ’ರಾಜ್ಯೋತ್ಸವದ ಕಾರಣ ಜಿಲ್ಲಾ ಉಸ್ತುವಾರಿ ಸಚಿವರು ಆಯಾ ಜಿಲ್ಲೆಗಳಲ್ಲಿ ಧ್ವಜಾರೋಹಣ ನೆರವೇರಿಸಬೇಕು. ಈ ಕಾರಣದಿಂದ ಸಚಿವರಿಗೆ ನವದೆಹಲಿಯಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ವಿನಾಯಿತಿ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.ಬಿಜೆಪಿ ವಿರುದ್ಧ ಕಾಂಗ್ರೆಸ್ ಮತ್ತು ನಮ್ಮ ಅಂಗಪಕ್ಷಗಳ ಹೋರಾಟ ನಿರಂತವಾಗಿ ನಡೆಯಲಿದೆ ಎಂದು ಹೇಳಿದರು.ಸಂಸದ ಡಾ.ಕೆ.ಸುಧಾಕರ್ ಅವರು ಬಸ್ ದರ ಹೆಚ್ಚಳಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಕುರಿತು ಪ್ರತಿಕ್ರಿಯಿಸಿದ ಸಚಿವರು, ‘ಸಂಸದರು ರಾಜಕೀಯ ಬಿಟ್ಟು ಕಣ್ಣಿಗೆ ಕಪ್ಪು ಬಟ್ಟೆ ಕಳಚಿ ವಾಸ್ತವ ಸ್ಥಿತಿ ಗಮನಿಸಲಿ. ಬಿಎಂಸಿಟಿ ಮತ್ತು ಕೆಎಸ್ಆರ್ಟಿಸಿ ನಷ್ಟದಲ್ಲಿವೆ. ನಷ್ಟದಲ್ಲಿರುವ ಸಂಸ್ಥೆಗಳನ್ನು ಮುಚ್ಚಲು ಆಗುತ್ತದೆಯೇ? ಬೇರೆ ರಾಜ್ಯಗಳಲ್ಲಿ ಟಿಕೆಟ್ ದರ ಎಷ್ಟಿದೆ ಎನ್ನುವುದನ್ನೂ ಅವರು ಗಮನಿಸಲಿ ಎಂದು ಹೇಳಿದರು.5ರಿಂದ ಬಸ್ ಟಿಕೆಟ್ ದರ ಏರಿಕೆಚಿಕ್ಕಬಳ್ಳಾಪುರ: ಬಸ್ ಪ್ರಯಾಣದ ಟಿಕೆಟ್ ದರವು ನ.5ರಿಂದ ಹೆಚ್ಚಳವಾಗಲಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದರು.ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕಳೆದ ಒಂದು ವರ್ಷದಲ್ಲಿ 5 ಬಾರಿ ಡೀಸೆಲ್ ಬೆಲೆ ಹೆಚ್ಚಿಸಿದೆ. ಇದರಿಂದ ನಮ್ಮ ನಾಲ್ಕೂ ಸಾರಿಗೆ ನಿಗಮಗಳಿಗೆ ವಾರ್ಷಿಕ ₹ 2 ಸಾವಿರ ಕೋಟಿ ನಷ್ಟ ಆಗುತ್ತಿದೆ. ಈಗಾಗಲೇ ಸಂಸ್ಥೆಗಳು ₹ 9 ಸಾವಿರ ಕೋಟಿ ನಷ್ಟದಲ್ಲಿವೆ ಎಂದು ಹೇಳಿದರು.ಈ ಹಿನ್ನೆಲೆಯಲ್ಲಿ ಬಸ್ ಪ್ರಯಾಣ ದರ ಏರಿಕೆ ಅನಿವಾರ್ಯ. ಈಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ. ದರ ಏರಿಕೆ ನಿರ್ಧಾರವನ್ನು ಕೈಗೊಳ್ಳುವ ಜವಾಬ್ದಾರಿಯನ್ನು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮತ್ತು ಸಂಪುಟವು ಸಾರಿಗೆ ಇಲಾಖೆಗೆ ನೀಡಿದೆ ಎಂದು ಹೇಳಿದರು.ಈ ಹಿನ್ನೆಲೆಯಲ್ಲಿ ನ.4 ರಂದು ಇಲಾಖೆ ಮತ್ತು ಸಾರಿಗೆ ನಿಗಮಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು. ಎಷ್ಟು ಪ್ರಮಾಣದಲ್ಲಿ ಹೆಚ್ಚಿಸಬೇಕು ಎನ್ನುವ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು. 5ರಿಂದ ಹೊಸ ಪ್ರಯಾಣ ದರ ಜಾರಿಗೆ ಬರಲಿದೆ ಎಂದರು.ಇತರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ಬಸ್ ಪ್ರಯಾಣ ದರ ಕಡಿಮೆ ಇದೆ. ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಪ್ರಯಾಣ ದರ ಎಷ್ಟಿದೆ ಎಂಬುದನ್ನು ಗಮನಿಸಲಿ. ನಷ್ಟದಲ್ಲಿರುವ ಸಾರಿಗೆ ಸಂಸ್ಥೆಗಳನ್ನು ಮುಚ್ಚಬೇಕಾ ಎಂದು ಹೇಳಿದರು.ಸಂಕಷ್ಟದಲ್ಲಿರುವ ರೈತರಿಗೆ ನೆರವಾಗಬೇಕು ಎಂಬ ಉದ್ದೇಶದಿಂದ ಹಾಲಿನ ದರ ಹೆಚ್ಚಿಸಲಾಗಿದೆ. ಹೆಚ್ಚಿಸಿರುವ ₹ 8ರಲ್ಲಿ ₹ 7 ಅನ್ನು ರೈತರಿಗೆ ನೀಡಲಾಗುತ್ತದೆ ಎಂದರು.261102-16-1735172046