ಸಂಸತ್ತಿನಲ್ಲಿ ಎಸ್ಐಆರ್ ಕುರಿತು ಚರ್ಚೆಗೆ ಬನ್ನಿ: ರಾಹುಲ್ಗೆ ಅಮಿತ್ ಶಾ ಸವಾಲು
ಹೈದರಾಬಾದ್: ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಆರೋಪಗಳಿಗೆ ಸಂಬಂಧಿಸಿದಂತೆ ಸಂಸತ್ನ ವಿಶೇಷ ಅಧಿವೇಶನ ಕರೆಯಲು ಸರ್ಕಾರ ಸಿದ್ಧವಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ಈ ಬಗ್ಗೆ ಸಂಸತ್ತಿನಲ್ಲಿ ಚರ್ಚೆಗೆ ಬರುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸವಾಲು ಹಾಕಿದ್ದಾರೆ.'ಮತ ಕಳ್ಳತನ' ಆರೋಪಕ್

ಹೈದರಾಬಾದ್: ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಆರೋಪಗಳಿಗೆ ಸಂಬಂಧಿಸಿದಂತೆ ಸಂಸತ್ನ ವಿಶೇಷ ಅಧಿವೇಶನ ಕರೆಯಲು ಸರ್ಕಾರ ಸಿದ್ಧವಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ಈ ಬಗ್ಗೆ ಸಂಸತ್ತಿನಲ್ಲಿ ಚರ್ಚೆಗೆ ಬರುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಸವಾಲು ಹಾಕಿದ್ದಾರೆ.'ಮತ ಕಳ್ಳತನ' ಆರೋಪಕ್ಕೆ ಸಂಬಂಧಿಸಿದಂತೆ 'ಇಂಡಿಯಾ' ಮೈತ್ರಿಕೂಟದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಅಮಿತ್ ಶಾ, ಭಾನುವಾರ ದೆಹಲಿಯಲ್ಲಿ ನಡೆದ ರ್ಯಾಲಿಯನ್ನು 'ನುಸುಳುಕೋರರ ಉಳಿಸಿ ರ್ಯಾಲಿ' ಎಂದು ಟೀಕಿಸಿದ್ದಾರೆ. ಒಂದು ವೇಳೆ ಇವಿಎಂಗಳು ಸರಿಯಿಲ್ಲದಿದ್ದರೆ ತೆಲಂಗಾಣ ಸೇರಿದಂತೆ ಇತರ ರಾಜ್ಯಗಳಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಿದ್ದು ಹೇಗೆ ಎಂದು ಅವರು ಪ್ರಶ್ನಿಸಿದ್ದಾರೆ. ರಾಹುಲ್ ಗಾಂಧಿ ಕೇವಲ 'ಅಣಕು ಸಂಸತ್ತಿನಲ್ಲಿ' ಮಾತ್ರ ಪ್ರಧಾನಿಯಾಗಬಹುದು ಎಂದು ಅವರು ವ್ಯಂಗ್ಯವಾಡಿದ್ದಾರೆ.'ರಾಹುಲ್ ಗಾಂಧಿ ಕೈಯಲ್ಲಿ ಸಂವಿಧಾನ ಹಿಡಿದುಕೊಳ್ಳುತ್ತಾರೆ. ಆದರೆ ಸಂವಿಧಾನವನ್ನು ಗೌರವಿಸುವುದಿಲ್ಲ. ರಾಹುಲ್, ನೀವು ಸಂಸತ್ತನ್ನು ನಡೆಯಲು ಬಿಡುವುದಿಲ್ಲ. ಇವಿಎಂ, ಎಸ್ಐಆರ್ ಅಥವಾ ನುಸುಳುಕೋರರ ವಿಷಯವೇ ಆಗಿರಲಿ, ನಾನು ಹೈದರಾಬಾದ್ನಿಂದಲೇ ನಿಮಗೆ ಸವಾಲು ಹಾಕುತ್ತಿದ್ದೇನೆ. ಸಂಸತ್ತಿನ ವಿಶೇಷ ಅಧಿವೇಶನ ಕರೆಯಲು ನಾವು ಸಿದ್ಧರಿದ್ದೇವೆ. ಬನ್ನಿ ಚರ್ಚೆ ಮಾಡೋಣ' ಎಂದು ಬಹಿರಂಗ ಆಹ್ವಾನ ನೀಡಿದ್ದಾರೆ. ಕಾಂಗ್ರೆಸ್ ಪಕ್ಷ ಚರ್ಚೆಗೆ ಸಿದ್ಧವಿಲ್ಲ. ಒಂದು ವೇಳೆ ಸಂಸತ್ ಅಧಿವೇಶನ ನಡೆದರೆ ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ನ ನೈಜ ಬಣ್ಣ ಬಯಲು ಮಾಡಲಿದ್ದಾರೆ. ಕಾಂಗ್ರೆಸ್ ಕೇವಲ ಅರಾಜಕತೆಯ ಮೂಲಕವೇ ಸುದ್ದಿಯಲ್ಲಿರಲು ಬಯಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ಮತದಾರರ ಪಟ್ಟಿಯಲ್ಲಿರುವ ಬಾಂಗ್ಲಾದೇಶದ ಅಕ್ರಮ ವಲಸಿಗರನ್ನು ರಕ್ಷಿಸುವ ಉದ್ದೇಶದಿಂದಲೇ ಕಾಂಗ್ರೆಸ್ ಎಸ್ಐಆರ್ ಪ್ರಕ್ರಿಯೆಯನ್ನು ತಡೆಯಲು ಯತ್ನಿಸುತ್ತಿದೆ. ಆದರೆ ಬಿಜೆಪಿ ಪ್ರತಿಯೊಬ್ಬ ನುಸುಳುಕೋರನನ್ನೂ ಮತದಾರರ ಪಟ್ಟಿಯಿಂದ ತೆಗೆದುಹಾಕಲಿದೆ ಎಂದು ಅವರು ಹೇಳಿದ್ದಾರೆ. ದೇಶ ಅಸ್ಥಿರಕ್ಕೆ ವಿದೇಶಿ ನೆರವು: ಪ್ರಧಾನಿಗೆ ಬಹಿರಂಗ ಚರ್ಚೆಗೆ ರಾಹುಲ್ ಆಹ್ವಾನಬೆಂಗಳೂರು-ಮುಂಬೈ ವಂದೇ ಭಾರತ್ ಎಕ್ಸ್ಪ್ರೆಸ್ ಗೇಮ್ ಚೇಂಜರ್ ಆಗಲಿದೆ: ಮೋದಿ