ಕಮಲಾಪುರ ರೈತರ ಸಮಸ್ಯೆಗೆ ಕೊನೆಗೂ ಸಿಕ್ಕ ನ್ಯಾಯ: 95 ರೈತರಿಗೆ ₹54 ಕೋಟಿ ಪರಿಹಾರ
ಬೆಳಗಾವಿ: ‘ಬಳ್ಳಾರಿ ನಾಲಾ ಯೋಜನೆಯಡಿ ಭೂಮಿ ಕಳೆದುಕೊಂಡ ಕಮಲಾಪುರ ಗ್ರಾಮದ ರೈತರು ಕಳೆದ ಹತ್ತು ವರ್ಷಗಳಿಂದ ಪರಿಹಾರಕ್ಕಾಗಿ ಹೋರಾಟ ನಡೆಸುತ್ತಿದ್ದರು. ಇದೀಗ 95 ರೈತರಿಗೆ ಒಟ್ಟು ₹54 ಕೋಟಿ ಪರಿಹಾರ ವಿತರಣೆ ಮಾಡಲಾಗಿದ್ದು, ರೈತರಿಗೆ ನ್ಯಾಯ ದೊರಕಿದಂತಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಪ

ಬೆಳಗಾವಿ: ‘ಬಳ್ಳಾರಿ ನಾಲಾ ಯೋಜನೆಯಡಿ ಭೂಮಿ ಕಳೆದುಕೊಂಡ ಕಮಲಾಪುರ ಗ್ರಾಮದ ರೈತರು ಕಳೆದ ಹತ್ತು ವರ್ಷಗಳಿಂದ ಪರಿಹಾರಕ್ಕಾಗಿ ಹೋರಾಟ ನಡೆಸುತ್ತಿದ್ದರು. ಇದೀಗ 95 ರೈತರಿಗೆ ಒಟ್ಟು ₹54 ಕೋಟಿ ಪರಿಹಾರ ವಿತರಣೆ ಮಾಡಲಾಗಿದ್ದು, ರೈತರಿಗೆ ನ್ಯಾಯ ದೊರಕಿದಂತಾಗಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಪರಿಹಾರದ ಚೆಕ್ ವಿತರಿಸಿ ಮಾತನಾಡಿದ ಅವರು, ‘ಬಳ್ಳಾರಿ ನಾಲಾ ಯೋಜನೆಯಡಿ ಕಮಲಾಪುರ ಗ್ರಾಮದ ರೈತರ ಭೂಮಿ ಮುಳುಗಡೆಯಾಗಿದ್ದರಿಂದ ಅನೇಕ ರೈತರು ತಮ್ಮ ಕೃಷಿಭೂಮಿಯನ್ನು ಕಳೆದುಕೊಂಡಿದ್ದರು. ಭೂಮಿ ಕಳೆದುಕೊಂಡ ರೈತರು ಕಳೆದ ಹತ್ತು ವರ್ಷಗಳಿಂದ ಪರಿಹಾರಕ್ಕಾಗಿ ಪ್ರಯತ್ನ ನಡೆಸುತ್ತಿದ್ದರು. ಅವರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಪರಿಹಾರ ದೊರಕಿಸಿಕೊಡುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದೀಗ 95 ರೈತರಿಗೆ ₹54 ಕೋಟಿ ಪರಿಹಾರ ವಿತರಣೆ ಮಾಡುತ್ತಿರುವುದು ಸಂತಸದ ಸಂಗತಿಯಾಗಿದೆ’ ಎಂದರು.‘ರೈತರು ತಮ್ಮ ಭೂಮಿಯನ್ನು ಕಳೆದುಕೊಂಡಾಗ ಅವರಿಗೆ ನ್ಯಾಯಯುತ ಪರಿಹಾರ ದೊರೆಯುವುದು ಅತ್ಯಂತ ಮುಖ್ಯ. ರೈತರ ಸಮಸ್ಯೆಗಳಿಗೆ ಸ್ಪಂದಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ. ಕಮಲಾಪೂರ ಗ್ರಾಮದ ರೈತರ ದೀರ್ಘ ಕಾಲದ ಸಮಸ್ಯೆಗೆ ಪರಿಹಾರ ದೊರೆತಿರುವುದು ಸಂತೋಷ ತಂದಿದೆ. ರೈತರು ತಮ್ಮ ಹಕ್ಕಿನ ಪರಿಹಾರ ಪಡೆದುಕೊಂಡು ನೆಮ್ಮದಿಯ ಜೀವನ ನಡೆಸುವಂತಾಗಲಿ’ ಎಂದು ಆಶಿಸಿದರು.ರೈತರ ಹೋರಾಟಕ್ಕೆ ಫಲ: ರೈತರು ತಮ್ಮ ಸಮಸ್ಯೆಗಳನ್ನು ನಮ್ಮ ಗಮನಕ್ಕೆ ತಂದಿದ್ದರು. ಅವರ ಸಮಸ್ಯೆ ಪರಿಹರಿಸಲು ವಿಶೇಷ ಕಾಳಜಿ ವಹಿಸಿ ಕ್ರಮ ಕೈಗೊಳ್ಳಲಾಗಿದೆ. ಇದೀಗ ಪರಿಹಾರ ವಿತರಣೆ ಮೂಲಕ ರೈತರಿಗೆ ನ್ಯಾಯ ದೊರಕಿದಂತಾಗಿದೆ ಎಂದು ಹೇಳಿದರು.ಸಚಿವರಿಗೆ ರೈತರ ಸನ್ಮಾನ: ಪರಿಹಾರದ ಚೆಕ್ ಸ್ವೀಕರಿಸಿದ ಕಮಲಾಪುರ ಗ್ರಾಮದ ರೈತರು ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸನ್ಮಾನಿಸಿ, ಸಿಹಿ ತಿನಿಸುವ ಮೂಲಕ ಕೃತಜ್ಞತೆ ಸಲ್ಲಿಸಿದರು. ಹತ್ತು ವರ್ಷಗಳಿಂದ ಎದುರಿಸುತ್ತಿದ್ದ ಸಮಸ್ಯೆಗೆ ಪರಿಹಾರ ದೊರಕಿಸಿಕೊಟ್ಟಿದ್ದಕ್ಕಾಗಿ ಸಚಿವರಿಗೆ ಧನ್ಯವಾದ ಅರ್ಪಿಸಿದರು.ಜಿಲ್ಲಾ ಪಂಚಾಯಿತಿ ಸಿಇಒ ರಾಹುಲ್ ಶಿಂಧೆ, ಹೆಚ್ಚುವರಿ ಜಿಲ್ಲಾಧಿಕಾರಿ ವಿಜಯಕುಮಾರ್ ಹೊನಕೇರಿ, ಭೂಸ್ವಾಧೀನ ಆಡಳಿತಾಧಿಕಾರಿ ಶಿವಾನಂದ ಭಜಂತ್ರಿ, ಹಿಡಕಲ್ ಡ್ಯಾಮ್ ವಿಶೇಷ ಭೂಸ್ವಾಧೀನ ಅಧಿಕಾರಿ ಕೆ. ಚಂದ್ರಮೋಳಿ ಸೇರಿದಂತೆ ಕಮಲಾಪುರ ಗ್ರಾಮದ ರೈತ ಮುಖಂಡರು ಇದ್ದರು.