10 ವರ್ಷದ ಬಾಲಕಿ ಮೇಲೆ 16ರ ಬಾಲಕ ಅತ್ಯಾಚಾರ
ಬಾಳೆಹೊನ್ನೂರು (ಚಿಕ್ಕಮಗಳೂರು): ಮೂರನೇ ತರಗತಿ ವಿದ್ಯಾರ್ಥಿನಿಯೊಂದಿಗೆ ಬಲವಂತವಾಗಿ ಲೈಂಗಿಕ ಸಂಪರ್ಕ ಹೊಂದಿದ ಆರೋಪದಡಿ 16 ವರ್ಷದ ಬಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.ಪೊಲೀಸರು ಬಾಲಕನನ್ನು ವಶಕ್ಕೆ ಪಡೆದಿದ್ದು, ನ್ಯಾಯಾಲಯದ ಆದೇಶದ ಮೇರೆಗೆ ಆತನನ್ನು ಬಾಲಮಂದಿರಕ್ಕೆ ಬಿಡಲಾಗಿದೆ.‘ಅನಾರೋಗ್ಯದ ಕಾರಣ 10 ವರ್ಷದ ಮಗಳು ಎರಡು ತಿಂಗಳಿನಿಂದ ಶಾಲೆಗೆ ಹೋಗುತ್ತಿರಲಿಲ್ಲ. ಸು
ಬಾಳೆಹೊನ್ನೂರು (ಚಿಕ್ಕಮಗಳೂರು): ಮೂರನೇ ತರಗತಿ ವಿದ್ಯಾರ್ಥಿನಿಯೊಂದಿಗೆ ಬಲವಂತವಾಗಿ ಲೈಂಗಿಕ ಸಂಪರ್ಕ ಹೊಂದಿದ ಆರೋಪದಡಿ 16 ವರ್ಷದ ಬಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.ಪೊಲೀಸರು ಬಾಲಕನನ್ನು ವಶಕ್ಕೆ ಪಡೆದಿದ್ದು, ನ್ಯಾಯಾಲಯದ ಆದೇಶದ ಮೇರೆಗೆ ಆತನನ್ನು ಬಾಲಮಂದಿರಕ್ಕೆ ಬಿಡಲಾಗಿದೆ.‘ಅನಾರೋಗ್ಯದ ಕಾರಣ 10 ವರ್ಷದ ಮಗಳು ಎರಡು ತಿಂಗಳಿನಿಂದ ಶಾಲೆಗೆ ಹೋಗುತ್ತಿರಲಿಲ್ಲ. ಸುಸ್ತು ಎಂದು ಮನೆಯಲ್ಲಿ ಹೇಳುತ್ತಿದ್ದಳು. ಚಿಕ್ಕಮಗಳೂರಿನ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ವೈದ್ಯರ ಬಳಿ ತೋರಿಸಿದಾಗ, ಚಿಕಿತ್ಸೆ ನೀಡಿ ಮೂರು ವಾರದ ನಂತರ ಬರುವಂತೆ ತಿಳಿಸಿದ್ದರು. ಸೋಮವಾರ ಮಗಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ವೈದ್ಯರ ಸಲಹೆ ಮೇರೆಗೆ ರಕ್ತಪರೀಕ್ಷೆ ಮಾಡಿಸಿದಾಗ, ಎಚ್ಐವಿ ಪಾಸಿಟಿವ್ ಬಂದಿದೆ. ಸಂಬಂಧಿಯಾಗಿರುವ ಹುಡುಗ 6 ತಿಂಗಳಿನಿಂದ ಯಾರೂ ಇಲ್ಲದ ವೇಳೆ ಮನೆಗೆ ಬಂದು ಹಲವು ಬಾರಿ ಬಲವಂತವಾಗಿ ಲೈಂಗಿಕ ಸಂಪರ್ಕ ಮಾಡಿ, ಯಾರಿಗಾದರೂ ತಿಳಿಸಿದರೆ ನಿನ್ನನ್ನು ಸುಮ್ಮನೆ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾಗಿ ಮಗಳು ವೈದ್ಯರ ಬಳಿ ಹೇಳಿದ್ದಾಳೆ’ ಎಂದು ಬಾಲಕಿಯ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ.