ಯಲ್ಲಾಪುರ: ಬೇಡ್ತಿ-ವರದಾ ನದಿ ಜೋಡಣೆ ಯೋಜನೆ ವಿರೋಧಿಸಿ ರಾಷ್ಟ್ರೀಯ ಹೆದ್ದಾರಿ ತಡೆ
ಯಲ್ಲಾಪುರ: ಬೇಡ್ತಿ-ವರದಾ ನದಿ ಜೋಡಣೆ ಯೋಜನೆ ವಿರೋಧಿಸಿ ಬೇಡ್ತಿ-ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಹೆದ್ದಾರಿ ತಡೆ ಕಾರ್ಯಕ್ರಮಕ್ಕೆ ಯಲ್ಲಾಪುರದಲ್ಲಿ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಯೋಜನೆ ರದ್ದುಪಡಿಸುವಂತೆ ಆಗ್ರಹಿಸಿ ಸಾವಿರಾರು ಸಾರ್ವಜನಿಕರು, ಮಹಿಳೆಯರು ಹಾಗೂ ಮಕ್ಕಳು ನದಿ ಉಳಿಸಿ ಬೋರ್ಡ್ಗಳನ್ನು ಹಿಡಿದು ರಾಷ್ಟ್ರೀಯ ಹೆ
ಯಲ್ಲಾಪುರ: ಬೇಡ್ತಿ-ವರದಾ ನದಿ ಜೋಡಣೆ ಯೋಜನೆ ವಿರೋಧಿಸಿ ಬೇಡ್ತಿ-ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಹೆದ್ದಾರಿ ತಡೆ ಕಾರ್ಯಕ್ರಮಕ್ಕೆ ಯಲ್ಲಾಪುರದಲ್ಲಿ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಯೋಜನೆ ರದ್ದುಪಡಿಸುವಂತೆ ಆಗ್ರಹಿಸಿ ಸಾವಿರಾರು ಸಾರ್ವಜನಿಕರು, ಮಹಿಳೆಯರು ಹಾಗೂ ಮಕ್ಕಳು ನದಿ ಉಳಿಸಿ ಬೋರ್ಡ್ಗಳನ್ನು ಹಿಡಿದು ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಳಿತು ಬೃಹತ್ ಪ್ರತಿಭಟನೆ ನಡೆಸಿದರು. ಈ ಮೂಲಕ ಯೋಜನೆ ವಿರುದ್ಧ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮೇಲೆ ತೀವ್ರ ಒತ್ತಡ ಹೇರಲಾಯಿತು. ಗಂಟೆಗಳ ಕಾಲ ವಾಹನ ಸಂಚಾರ ತಡೆದು ಸರ್ಕಾರದ ಗಮನ ಸೆಳೆಯುವ ಪ್ರಯತ್ನ ನಡೆಸಲಾಯಿತು.ಪ್ರತಿಭಟನಾ ಸಮಾವೇಶದಲ್ಲಿ ಆರ್ಥಿಕ ತಜ್ಞ ಬಿ.ಎಂ. ಕುಮಾರಸ್ವಾಮಿ, ಬೇಡ್ತಿ-ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ ಅಧ್ಯಕ್ಷ ಅನಂತ ಅಶೀಸರ, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕರಾದ ಭೀಮಣ್ಣ ನಾಯ್ಕ, ದಿನಕರ ಶೆಟ್ಟಿ, ಶಿವರಾಮ ಹೆಬ್ಬಾರ, ಮಾಜಿ ಶಾಸಕ ವಿ.ಎಸ್. ಪಾಟೀಲ ಹಾಗೂ ತಜ್ಞ ಕುಮಾರ ಕಲಾನಂದಮಣಿ ಸೇರಿದಂತೆ ಅನೇಕರು ಭಾಗವಹಿಸಿ ಯೋಜನೆಯಿಂದಾಗುವ ಅನಾಹುತಗಳ ಬಗ್ಗೆ ಧ್ವನಿ ಎತ್ತಿದರು. ಪರಿಸರ ಹಾಗೂ ಸ್ಥಳೀಯರ ಹಿತದೃಷ್ಟಿಯಿಂದ ಸರ್ಕಾರ ತಕ್ಷಣವೇ ಈ ಯೋಜನೆಯನ್ನು ಕೈಬಿಡಬೇಕೆಂದು ಪ್ರತಿಭಟನಾಕಾರರು ಒಗ್ಗಟ್ಟಿನಿಂದ ಆಗ್ರಹಿಸಿದರು.