ಬಳ್ಳಾರಿ: ಟಿಪ್ಪರ್ ಸಂಚಾರ ನಿಷೇಧಕ್ಕೆ ಆಗ್ರಹಿಸಿ ಪ್ರತಿಭಟನೆ, ಶ್ರೀರಾಮುಲು ಭಾಗಿ
ಬಳ್ಳಾರಿ: ನಗರದಲ್ಲಿ ಕೆಲವೇ ದಿನಗಳ ಅಂತರದಲ್ಲಿ ನಡೆದ ಮೂರು ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಮೂವರು ಸಾವಿಗೀಡಾಗಿದ ಹಿನ್ನೆಲೆಯಲ್ಲಿ ಟಿಪ್ಪರ್ ಲಾರಿಗಳ ಸಂಚಾರ ನಿಯಂತ್ರಿಸುವಂತೆ ಆಗ್ರಹಿಸಿ ಮಾಜಿ ಸಚಿವ ಬಿ. ಶ್ರೀ ರಾಮುಲು ಹಾಗೂ ಮಾಜಿ ಶಾಸಕ ಜಿ.ಸೋಮಶೇಖರ ರೆಡ್ಡಿ ಪ್ರತಿಭಟನೆ ನಡೆಸಿದರು.ನಗರದ ಗುಗ್ಗರಹಟ್ಟಿ, ಈದ್ಗಾ ಮೈದಾನ ಹಾಗೂ ರೇಡಿಯೋ ಪಾರ್ಕ್ ಪ್ರದೇಶಗಳಲ್ಲಿ ಅಪಘಾತ

ಬಳ್ಳಾರಿ: ನಗರದಲ್ಲಿ ಕೆಲವೇ ದಿನಗಳ ಅಂತರದಲ್ಲಿ ನಡೆದ ಮೂರು ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಮೂವರು ಸಾವಿಗೀಡಾಗಿದ ಹಿನ್ನೆಲೆಯಲ್ಲಿ ಟಿಪ್ಪರ್ ಲಾರಿಗಳ ಸಂಚಾರ ನಿಯಂತ್ರಿಸುವಂತೆ ಆಗ್ರಹಿಸಿ ಮಾಜಿ ಸಚಿವ ಬಿ. ಶ್ರೀ ರಾಮುಲು ಹಾಗೂ ಮಾಜಿ ಶಾಸಕ ಜಿ.ಸೋಮಶೇಖರ ರೆಡ್ಡಿ ಪ್ರತಿಭಟನೆ ನಡೆಸಿದರು.ನಗರದ ಗುಗ್ಗರಹಟ್ಟಿ, ಈದ್ಗಾ ಮೈದಾನ ಹಾಗೂ ರೇಡಿಯೋ ಪಾರ್ಕ್ ಪ್ರದೇಶಗಳಲ್ಲಿ ಅಪಘಾತಗಳು ನಡೆದಿದ್ದವು. ಭಾರಿ ವಾಹನಗಳಿಂದಲೇ ಈ ಅಪಘಾತಗಳು ನಡೆದಿದ್ದವು.ಬೆಂಗಳೂರು ರಸ್ತೆಯಲ್ಲಿ ಮಾಜಿ ಸಚಿವ ಬಿ. ಶ್ರೀರಾಮುಲು ಹಾಗೂ ಸೋ ಮಶೇಖರ ರೆಡ್ಡಿ ಬೆಂಬಲಿಗರೊಂದಿಗೆ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶ್ರೀರಾಮುಲು, ‘ಎರಡು ದಿನಗಳಲ್ಲಿ ಮೂವರು ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. ಈ ಸಾವಿಗೆ ಹೊಣೆ ಯಾರು? ಜನರ ಜೀವಕ್ಕೆ ಬೆಲೆ ಇಲ್ಲವೇ? ಇಷ್ಟೆಲ್ಲಾ ಘಟನೆಗಳು ನಡೆದರೂ ಸ್ಥಳೀಯ ಆಡಳಿತ ಮತ್ತು ಜನಪ್ರತಿನಿಧಿಗಳು ಏಕೆ ಎಚ್ಚೆತ್ತುಕೊಳ್ಳುತ್ತಿಲ್ಲ’ ಎಂದು ಪ್ರಶ್ನಿಸಿದರು.‘ಅಕ್ರಮ ಅದಿರು, ಗ್ರಾವೆಲ್ ಹಾಗೂ ಮರಳು ಸಾಗಾಟಗಾರರ ಅನುಕೂಲಕ್ಕಾಗಿ ನಗರದೊಳಗೆ ಟಿಪ್ಪರ್ ಲಾರಿಗಳಿಗೆ ಅವಕಾಶ ನೀಡಲಾಗುತ್ತಿದೆ ಎಂಬ ಗಂಭೀರ ಆರೋಪವನ್ನು ಪ್ರತಿಭಟನಾಕಾರರು ಮಾಡಿದರು. ನಗರದ ಜನರ ಸುರಕ್ಷತೆಗಿಂತ ಅಕ್ರಮ ಸಾಗಾಟಗಾರರ ಹಿತಾಸಕ್ತಿಗೆ ಆದ್ಯತೆ ನೀಡಲಾಗುತ್ತಿದೆಯೇ’ ಎಂಬ ಅನುಮಾನ ವ್ಯಕ್ತಪಡಿಸಿದರು.‘ಬಳ್ಳಾರಿ ನಗರ ಪ್ರದೇಶದಲ್ಲಿ ಹಗಲು ಹೊತ್ತಿನಲ್ಲಿ ಟಿಪ್ಪರ್ ಲಾರಿಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿ ಸಬೇಕು. ನಿಯಮ ಉಲ್ಲಂಘಿಸುವ ಲಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳ ಬೇಕು’ ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.ಮಾಜಿ ಸಚಿವರು ಹಾಗೂ ಮುಖಂಡರು ರಸ್ತೆ ತಡೆ ನಡೆಸಿದ ಹಿನ್ನೆಲೆಯಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ಎರಡೂ ಬದಿಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದರಿಂದ ಸಾರ್ವಜನಿಕರು ಹಾಗೂ ವಾಹನ ಸವಾ ರರು ಕೆಲಕಾಲ ಪರದಾಡುವಂತಾಯಿತು.ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸಭೆನಗರದ ಹೊಸ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಸಂಜೆ 4 ಗಂಟೆಗೆ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ ಕರೆಯಲಾಗಿದೆ. ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರ ನೇತೃತ್ವದಲ್ಲಿ ನಡೆಯಲಿರುವ ಈ ಸಭೆಯಲ್ಲಿ ರಸ್ತೆ ಸುರಕ್ಷತೆಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಕಡ್ಡಾಯವಾಗಿ ಹಾಜರಾಗುವಂತೆ ಪೊಲೀಸ್ ಅಧೀಕ್ಷಕರ ಕಚೇರಿಯಿಂದ ಸೂಚನೆ ನೀಡಲಾಗಿದೆ.261104-25-2047380159