ಪಡಿತರ ಚೀಟಿದಾರರಿಗೆ 10ರೊಳಗೆ ಇ- ಕೆವೈಸಿ ಕಡ್ಡಾಯ
ಬೆಂಗಳೂರು: ಪಡಿತರ ಚೀಟಿದಾರರು ಇ-ಕೆವೈಸಿ ಮಾಡಿಸಲು ಇದೇ 10 ಕೊನೆಯ ದಿನ. ಹೀಗಾಗಿ, ಬಾಕಿ ಇರುವ ಪಡಿತರ ಚೀಟಿದಾರರು ಕೊನೆಯ ದಿನದ ಒಳಗೆ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಬೇಕು ಎಂದು ಆಹಾರ ಇಲಾಖೆ ತಿಳಿಸಿದೆ.ರಾಜ್ಯದಲ್ಲಿ ಮರು ಇ-ಕೆವೈಸಿ ಮಾಡಿಸಬೇಕಿದ್ದ 2,67,64,276 ಪಡಿತರ ಚೀಟಿ ಫಲಾನುಭವಿಗಳ ಪೈಕಿ, ನ. 3ರವರೆಗೆ 2,26,30,747 ಫಲಾನುಭವಿಗಳು ಇ-ಕೆವೈಸಿ ಮಾಡಿಸಿದ್ದಾರೆ

ಬೆಂಗಳೂರು: ಪಡಿತರ ಚೀಟಿದಾರರು ಇ-ಕೆವೈಸಿ ಮಾಡಿಸಲು ಇದೇ 10 ಕೊನೆಯ ದಿನ. ಹೀಗಾಗಿ, ಬಾಕಿ ಇರುವ ಪಡಿತರ ಚೀಟಿದಾರರು ಕೊನೆಯ ದಿನದ ಒಳಗೆ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಬೇಕು ಎಂದು ಆಹಾರ ಇಲಾಖೆ ತಿಳಿಸಿದೆ.ರಾಜ್ಯದಲ್ಲಿ ಮರು ಇ-ಕೆವೈಸಿ ಮಾಡಿಸಬೇಕಿದ್ದ 2,67,64,276 ಪಡಿತರ ಚೀಟಿ ಫಲಾನುಭವಿಗಳ ಪೈಕಿ, ನ. 3ರವರೆಗೆ 2,26,30,747 ಫಲಾನುಭವಿಗಳು ಇ-ಕೆವೈಸಿ ಮಾಡಿಸಿದ್ದಾರೆ. ಇನ್ನೂ 41,33,529 ಇ-ಕೆವೈಸಿ ಮಾಡಿಸಲು ಬಾಕಿ ಇದ್ದಾರೆ.ಇ-ಕೆವೈಸಿ ಮಾಡಿಸಲು ಕೊನೆಯ ದಿನವನ್ನು ಈಗಾಗಲೇ ಒಮ್ಮೆ ವಿಸ್ತರಿಸಲಾಗಿದೆ. ನ. 10ರ ನಂತರ ಯಾವುದೇ ಕಾರಣಕ್ಕೂ ಕೊನೆ ದಿನವನ್ನು ವಿಸ್ತರಿಸುವುದಿಲ್ಲ. ಬಾಕಿ ಉಳಿದಿರುವ ಎಲ್ಲ ಫಲಾನುಭವಿಗಳು ‘ಅನ್ನ ಸೇವೆ’ ಮೊಬೈಲ್ ತಂತ್ರಾಂಶದ ಮೂಲಕ ಖುದ್ದಾಗಿ ಅಥವಾ ನ್ಯಾಯಬೆಲೆ ಅಂಗಡಿಗಳಲ್ಲಿ ‘ಆಹಾರ್’ ತಂತ್ರಾಂಶದ ಮೂಲಕ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಬೇಕು. ಇಲ್ಲವಾದರೆ ನಿಯಮದ ಪ್ರಕಾರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದೂ ಇಲಾಖೆ ತಿಳಿಸಿದೆ.
Read the complete story at Prajavani