ನ.10 ರೊಳಗೆ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಿ: ಪಡಿತರ ಚೀಟಿದಾರರಿಗೆ ಸೂಚನೆ
ಬೆಂಗಳೂರು: ಪಡಿತರ ಚೀಟಿದಾರರು ಇ-ಕೆವೈಸಿ (e-KYC) ಮಾಡಿಸಲು ನವೆಂಬರ್ 10 ಕೊನೆಯ ದಿನವಾಗಿದ್ದು, ಬಾಕಿ ಇರುವ ಪಡಿತರ ಚೀಟಿದಾರರು ಕೊನೆಯ ದಿನಾಂಕದೊಳಗೆ ತಪ್ಪದೇ ಇ-ಕೆವೈಸಿ ಮಾಡಿಸಬೇಕೆಂದು ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆ ತಿಳಿಸಿದೆ. 2,67,64,276 ಪಡಿತರ ಚೀಟಿ ಫಲಾನುಭವಿಗಳು ರಾಜ್ಯದಲ್ಲಿ ಮರು ಇ-ಕೆವೈಸಿ ಮಾಡಿಸಬೇಕಿತ್ತು. ಅವರ ಪೈಕಿ ನವೆ

ಬೆಂಗಳೂರು: ಪಡಿತರ ಚೀಟಿದಾರರು ಇ-ಕೆವೈಸಿ (e-KYC) ಮಾಡಿಸಲು ನವೆಂಬರ್ 10 ಕೊನೆಯ ದಿನವಾಗಿದ್ದು, ಬಾಕಿ ಇರುವ ಪಡಿತರ ಚೀಟಿದಾರರು ಕೊನೆಯ ದಿನಾಂಕದೊಳಗೆ ತಪ್ಪದೇ ಇ-ಕೆವೈಸಿ ಮಾಡಿಸಬೇಕೆಂದು ಆಹಾರ, ನಾಗರಿಕ ಪೂರೈಕೆ ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆ ತಿಳಿಸಿದೆ. 2,67,64,276 ಪಡಿತರ ಚೀಟಿ ಫಲಾನುಭವಿಗಳು ರಾಜ್ಯದಲ್ಲಿ ಮರು ಇ-ಕೆವೈಸಿ ಮಾಡಿಸಬೇಕಿತ್ತು. ಅವರ ಪೈಕಿ ನವೆಂಬರ್ 3 ರವರೆಗೆ 2,26,30,747 ಫಲಾನುಭವಿಗಳು ಇ-ಕೆವೈಸಿ ಮಾಡಿಸಿದ್ದಾರೆ. ಇನ್ನೂ 41,33,529 ಫಲಾನುಭವಿಗಳು ಇ-ಕೆವೈಸಿ ಮಾಡಿಸಬೇಕಿದೆ. ಈಗಾಗಲೇ ಒಂದು ಬಾರಿ ಇ-ಕೆವೈಸಿ ಮಾಡಿಸಲು ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದ್ದು, ನವೆಂಬರ್ 10ರ ನಂತರ ಯಾವುದೇ ಕಾರಣಕ್ಕೂ ಕೊನೆಯ ದಿನಾಂಕ ವಿಸ್ತರಣೆ ಮಾಡಲಾಗುವುದಿಲ್ಲ. ಹಾಗಾಗಿ, ಬಾಕಿ ಉಳಿದಿರುವ ಎಲ್ಲ ಫಲಾನುಭವಿಗಳು ‘ಅನ್ನ ಸೇವೆ’ ಮೊಬೈಲ್ ಅಪ್ಲಿಕೇಶನ್ ಮೂಲಕ ಖುದ್ದಾಗಿ ಅಥವಾ ನ್ಯಾಯಬೆಲೆ ಅಂಗಡಿಗಳಲ್ಲಿ ‘AHARA’ ತಂತ್ರಾಂಶದ ಮೂಲಕ ನವೆಂಬರ್ 10 ರೊಳಗೆ ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಬೇಕು. ಇಲ್ಲವಾದಲ್ಲಿ ನಿಯಮಾನುಸಾರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ತಿಳಿಸಿದೆ.