ಕೋಲಾರ: ಛಲವಾದಿ ನಾರಾಯಣಸ್ವಾಮಿ ವಿರುದ್ಧ ಎಫ್ಐಆರ್
ಪ್ರಜಾವಾಣಿ ವಾರ್ತೆಕೋಲಾರ: ಕಾಂಗ್ರೆಸ್ಸಿಗರನ್ನು ತುಂಡು ತುಂಡು ಮಾಡಿ ಅರಬ್ಬಿ ಸಮುದ್ರಕ್ಕೆ ಎಸೆಯುವುದಾಗಿ ಹೇಳಿದ್ದ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ವಿರುದ್ಧ ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.ಅವರ ಮೇಲೆ ಪ್ರಕರಣ ದಾಖಲಿಸಲು ಸ್ಥಳೀಯ ನ್ಯಾಯಾಲಯದಿಂದ ಅನುಮತಿ ಪಡೆದು, ಪೊಲೀಸರು ಈ ಕ್ರಮ ವಹಿಸಿದ್ದಾರೆ. ಭಾರತೀಯ ನ

ಪ್ರಜಾವಾಣಿ ವಾರ್ತೆಕೋಲಾರ: ಕಾಂಗ್ರೆಸ್ಸಿಗರನ್ನು ತುಂಡು ತುಂಡು ಮಾಡಿ ಅರಬ್ಬಿ ಸಮುದ್ರಕ್ಕೆ ಎಸೆಯುವುದಾಗಿ ಹೇಳಿದ್ದ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ವಿರುದ್ಧ ಕೋಲಾರ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.ಅವರ ಮೇಲೆ ಪ್ರಕರಣ ದಾಖಲಿಸಲು ಸ್ಥಳೀಯ ನ್ಯಾಯಾಲಯದಿಂದ ಅನುಮತಿ ಪಡೆದು, ಪೊಲೀಸರು ಈ ಕ್ರಮ ವಹಿಸಿದ್ದಾರೆ. ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) ಸೆಕ್ಷನ್ 351 (2) (ಕ್ರಿಮಿನಲ್ ಬೆದರಿಕೆ), ಸೆಕ್ಷನ್ 352 (ಶಾಂತಿ ಕದಡಲು ಉದ್ದೇಶಪೂರ್ವಕ ಪ್ರಚೋದನೆ) ಹಾಗೂ ಸೆಕ್ಷನ್ 353 (1)(ಬಿ) (ಸಾರ್ವಜನಿಕರಲ್ಲಿ ಭಯ ಹುಟ್ಟಿಸುವ ಹೇಳಿಕೆ) ಅಡಿ ಪ್ರಕರಣ ದಾಖಲಿಸಲಾಗಿದೆ. ‘ಕಾಂಗ್ರೆಸ್ ಮುಖಂಡ ಬೆಳಗಾನಹಳ್ಳಿ ಮುನಿವೆಂಕಟಪ್ಪ ನೀಡಿದ ದೂರಿನ ಆಧಾರದಲ್ಲಿ ಛಲವಾದಿ ನಾರಾಯಣಸ್ವಾಮಿ ಅವರ ಮೇಲೆ ಎಫ್ಐಆರ್ ದಾಖಲಿಸಿದ್ದೇವೆ. ನೋಟಿಸ್ ನೀಡಿ ಅವರನ್ನು ವಿಚಾರಣೆಗೆ ಕರೆಯುತ್ತೇವೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕನ್ನಿಕಾ ಸಿಕ್ರಿವಾಲ್ ‘ಪ್ರಜಾವಾಣಿ’ಗೆ ತಿಳಿಸಿದರು. ಕೋಲಾರದಲ್ಲಿ ಮಂಗಳವಾರ ಬಿಜೆಪಿ ಹಮ್ಮಿಕೊಂಡಿದ್ದ 'ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ' ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ಛಲವಾದಿ ನಾರಾಯಣಸ್ವಾಮಿ, 'ಕಾಂಗ್ರೆಸ್ ಪಕ್ಷದವರು ದೇಶದಲ್ಲಿ ಅರಾಜಕತೆ ಸೃಷ್ಟಿಸುವುದನ್ನು ಮೊದಲು ನಿಲ್ಲಿಸಬೇಕು. ಒಂದು ವೇಳೆ ಅರಾಜಕತೆ ಸೃಷ್ಟಿ ಮುಂದುವರಿಸಿದರೆ ಬಿಜೆಪಿ ಕಾರ್ಯಕರ್ತರು, ಬೆಂಬಲಿಗರು ನಿಮ್ಮನ್ನು ತುಂಡು ತುಂಡು ಮಾಡಿ ಅರಬ್ಬಿ ಸಮುದ್ರಕ್ಕೆ ಎಸೆಯುತ್ತಾರೆ' ಎಂದು ಎಚ್ಚರಿಸಿದ್ದರು.ಛಲವಾದಿ ನಾರಾಯಣಸ್ವಾಮಿ ಅವರನ್ನು ಕೂಡಲೇ ಬಂಧಿಸುವಂತೆ ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್ ಹಾಗೂ ಕಾಂಗ್ರೆಸ್ ಮುಖಂಡರು ಆಗ್ರಹಿಸಿದ್ದಾರೆ.