ರಷ್ಯಾ ವಿದೇಶಾಂಗ ಸಚಿವರ ನಕಲಿ ವಿಡಿಯೊ ಹಂಚಿಕೊಂಡಿದ್ದ ಹಿರಿಯ ವಕೀಲನ ವಿರುದ್ಧ FIR
ನವದೆಹಲಿ: ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಅವರು ಭಾರತದ ವಿರುದ್ಧ ಮಾತನಾಡಿದ್ದಾರೆ ಎಂದು ಬಿಂಬಿಸುವ ನಕಲಿ ವಿಡಿಯೊವನ್ನು ಹಂಚಿಕೊಂಡಿದ್ದ ಸುಪ್ರೀಂ ಕೋರ್ಟ್ನ ಹಿರಿಯ ವಕೀಲ ಪ್ರಶಾಂತ್ ಭೂಷಣ್ ವಿರುದ್ಧ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಶಾಂತ್ ಭೂಷಣ್ ಅವರು ಸಾಮಾಜಿಕ ಮಾಧ್ಯಮದಲ್ಲಿ ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾ

ನವದೆಹಲಿ: ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಅವರು ಭಾರತದ ವಿರುದ್ಧ ಮಾತನಾಡಿದ್ದಾರೆ ಎಂದು ಬಿಂಬಿಸುವ ನಕಲಿ ವಿಡಿಯೊವನ್ನು ಹಂಚಿಕೊಂಡಿದ್ದ ಸುಪ್ರೀಂ ಕೋರ್ಟ್ನ ಹಿರಿಯ ವಕೀಲ ಪ್ರಶಾಂತ್ ಭೂಷಣ್ ವಿರುದ್ಧ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಶಾಂತ್ ಭೂಷಣ್ ಅವರು ಸಾಮಾಜಿಕ ಮಾಧ್ಯಮದಲ್ಲಿ ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಅವರ ಕುರಿತು ಪೋಸ್ಟ್ ಹಂಚಿಕೊಂಡಿದ್ದರು. ಈ ಬಗ್ಗೆ ಗಮನಿಸಿದ ಸೈಬರ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ವಿಡಿಯೊ ಮೂಲಕ ಸುಳ್ಳು ಸುದ್ದಿ ಹರಡುವ, ಜನರನ್ನು ದಿಕ್ಕುತಪ್ಪಿಸುವ, ಕೆರಳಿಸುವ, ಸಾರ್ವಜನಿಕರ ಶಾಂತಿಗೆ ಧಕ್ಕೆಗೆ ಆಗುವುದನ್ನು ತಡೆಯುವ ಉದ್ದೇಶದಿಂದ ಪ್ರಶಾಂತ್ ಭೂಷಣ್ ಅವರ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 336 , ಸೆಕ್ಷನ್–353, ಸೆಕ್ಷನ್ –356, ಸೆಕ್ಷನ್– 340 ಸೇರಿ ಹಲವು ಆರೋಪಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಶಾಂತ್ ಭೂಷಣ್ ಹಂಚಿಕೊಂಡಿದ್ದ ವಿಡಿಯೊವನ್ನು ವಿದೇಶಾಂಗ ಸಚಿವಾಲಯ ಪರಿಶೀಲನೆ ನಡೆಸಿದ ಬಳಿಕ ಕ್ರಮಕೈಗೊಳ್ಳಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.