ಎಸ್ಐಆರ್ ಕುರಿತ ಅಪಪ್ರಚಾರಕ್ಕೆ ಕಿವಿಗೊಡಬೇಡಿ: ಹುಬ್ಬಳ್ಳಿಯಲ್ಲಿ ತೇಜಸ್ವಿ ಸೂರ್ಯ
ಹುಬ್ಬಳ್ಳಿ: ‘ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಇರುವವರೆಗೆ ದೇಶದಲ್ಲಿ ಅಕ್ರಮವಾಗಿ ನೆಲೆಸಿರುವ ಯಾವೊಬ್ಬ ವ್ಯಕ್ತಿಗೂ ಮತದಾನದ ಹಕ್ಕು ಸಿಗಲು ಬಿಡುವುದಿಲ್ಲ’ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದರು.‘ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ’ ಅಭಿಯಾನದ ಅಂಗವಾಗಿ ನಗರದ ಬಿವಿಬಿ ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಮಂಗಳವಾರ ಆಯೋಜಿಸಿದ್ದ ‘ಯುವ ಸಂವಾದ’ ಕಾರ್ಯಕ್ರಮದಲ

ಹುಬ್ಬಳ್ಳಿ: ‘ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಇರುವವರೆಗೆ ದೇಶದಲ್ಲಿ ಅಕ್ರಮವಾಗಿ ನೆಲೆಸಿರುವ ಯಾವೊಬ್ಬ ವ್ಯಕ್ತಿಗೂ ಮತದಾನದ ಹಕ್ಕು ಸಿಗಲು ಬಿಡುವುದಿಲ್ಲ’ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದರು.‘ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ’ ಅಭಿಯಾನದ ಅಂಗವಾಗಿ ನಗರದ ಬಿವಿಬಿ ಎಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಮಂಗಳವಾರ ಆಯೋಜಿಸಿದ್ದ ‘ಯುವ ಸಂವಾದ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.‘ಎಸ್ಐಆರ್ ಬಗ್ಗೆ ಕಾಂಗ್ರೆಸ್, ಇನ್ಸೆಕ್ಟ್ಗಳು (ಜಿರಳೆ) ಅಪಪ್ರಚಾರ ಮಾಡುವ ಮೂಲಕ ದೇಶದ ಯುಜನರ ದಾರಿ ತಪ್ಪಿಸುತ್ತಿವೆ. ಇದಕ್ಕೆ ಕಿವಿಗೊಡಬಾರದು. ಎಸ್ಐಆರ್ ವಿರೋಧಿಸಿ ಜೆನ್ಝೀಯ ಕೆಲವರು ಪ್ರತಿಭಟಿಸಿದ್ದಾರೆ. ಇವರು ದೇಶದ ಎಲ್ಲಾ ಜೆನ್ಝೀಗಳನ್ನು ಪ್ರತಿನಿಧಿಸುವುದಿಲ್ಲ’ ಎಂದರು.‘ಚುನಾವಣಾ ವ್ಯವಸ್ಥೆ ಬಲಪಡಿಸುವುದು ಎಸ್ಐಆರ್ ಉದ್ದೇಶ. ಇದರ ಮೂಲಕ 13 ಕೋಟಿ ಜನರನ್ನು ಮತದಾರರ ಪಟ್ಟಿಯಿಂದ ತೆಗೆಯಲಾಗಿದೆ ಎಂದು ಕಾಂಗ್ರೆಸ್ನವರು ಆರೋಪಿಸುತ್ತಾರೆ. ಆದರೆ, ಮೃತರು, ಸ್ಥಳಾಂತರವಾದವರು, ಅಕ್ರಮ ವಲಸಿಗರ ಹೆಸರನ್ನು ತೆಗೆದು ಹಾಕಿದ್ದು ತಪ್ಪೇ’ ಎಂದು ಪ್ರಶ್ನಿಸಿದರು.ಮಲ್ಲಿಕಾರ್ಜುನ ಬಾಳಿಕಾಯಿ, ಶಂಕರಣ್ಣ ಮುನವಳ್ಳಿ, ಸಂಜಯ ಕೊಟಬಾಗಿ, ಡಾ.ಸಚಿನ್ ಬಿ.ಎಸ್., ಶಾಸಕ ಮಹೇಶ ಟೆಂಗಿನಕಾಯಿ, ವಿಧಾನ ಪರಿಷತ್ ಸದಸ್ಯ ಲಿಂಗರಾಜ ಪಾಟೀಲ, ತಿಪ್ಪಣ್ಣ ಮಜ್ಜಗಿ, ನಿಂಗಪ್ಪ ಸುತಗಟ್ಟಿ ಇದ್ದರು.ಇದಕ್ಕೂ ಮುನ್ನ ಹುಬ್ಬಳ್ಳಿಯ ಕೆಎಂಸಿಆರ್ಐ ಆಸ್ಪತ್ರೆ ಮೈದಾನದಲ್ಲಿ ಸಂಸದ ತೇಜಸ್ವಿ ಸೂರ್ಯ ಅವರು 5ಕೆ ಮ್ಯಾರಥಾನ್ನಲ್ಲಿ ಭಾಗವಹಿಸಿದರು.ಇಲ್ಲಿನ ಉತ್ತರ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಕಚೇರಿಗೆ ಭೇಟಿ ನೀಡಿದರು ಉತ್ತರ ಕರ್ನಾಟಕ ಭಾಗದ ಕೈಗಾರಿಕಾ ವಲಯದ ಬೆಳವಣಿಗೆ, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಕೈಗಾರಿಕಾ ಅಭಿವೃದ್ಧಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಿದರು.‘ಹುಬ್ಬಳ್ಳಿ ಮೂಲಕ ವಂದೇ ಭಾರತ್ ಸ್ಲೀಪರ್’‘ಬೆಂಗಳೂರಿನಿಂದ ಮುಂಬೈಗೆ ವಂದೇ ಭಾರತ್ ಸ್ಲೀಪರ್ ರೈಲು ಹುಬ್ಬಳ್ಳಿ ಮೂಲಕ ಶೀಘ್ರವೇ ಆರಂಭ ಆಗಲಿದೆ. ಹುಬ್ಬಳ್ಳಿ ಮಾರ್ಗವಾಗಿ ಬೆಂಗಳೂರು– ಪುಣೆ ಸಂಪರ್ಕಿಸುವ ಬುಲೆಟ್ ರೈಲು ಬೇಡಿಕೆಗೂ ಸ್ಪಂದಿಸುವುದಾಗಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ' ಎಂದು ತೇಜಸ್ವಿ ಸೂರ್ಯ ಹೇಳಿದರು.‘ಬೆಂಗಳೂರಿನಲ್ಲಿ ನಮ್ಮ ಮೆಟ್ರೊ ಗುಲಾಬಿ ಮಾರ್ಗದ ಎತ್ತರಿಸಿದ ವಿಭಾಗವನ್ನು ಪ್ರಧಾನಿ ನರೇಂದ್ರ ಮೋದಿ ನವೆಂಬರ್ 13ರಂದು ಮಧ್ಯಾಹ್ನ 12.30ಕ್ಕೆ ಉದ್ಘಾಟಿಸುವರು’ ಎಂದರು. ತೇಜಸ್ವಿ ಸೂರ್ಯ, ಸಂಸದಕರ್ನಾಟಕಕ್ಕೆ ತನ್ನದೇ ಆದ ಘನತೆಯಿದೆ. ‘ಸ್ಟಿಂಗ್’ ಕಾರ್ಯಾಚರಣೆಯಿಂದ ರಾಜ್ಯದ ಗೌರವ ಹಾಳಾಗುತ್ತಿದೆ. ಇದು ಕೊನೆಯಾಗಬೇಕು261104-24-1525159154